ವಿಷಪೂರಿತ ಆಹಾರ ಸೇವಿಸಿ ಒಂದೇ ಕುಟುಂಬದ ಮೂವರು ಸಾವು, ಇಬ್ಬರು ಗಂಭೀರ | ಜನತಾ ನ್ಯೂಸ್
ಚಿತ್ರದುರ್ಗ : ವಿಷಪೂರಿತ ಆಹಾರ ಸೇವಿಸಿ ಒಂದೇ ಕುಟುಂಬದ ಮೂವರು ಸಾವನ್ನಪ್ಪಿ ಮತ್ತಿಬ್ಬರು ಅಸ್ವಸ್ಥಗೊಂಡಿರುವ ಘಟನೆ ತಾಲೂಕಿನ ಇಸಾಮುದ್ರ ಗ್ರಾಮದಲ್ಲಿ ನಡೆದಿದೆ.
ತಿಪ್ಪನಾಯ್ಕ (45), ಗುಂಡಿಬಾಯಿ (80), ಸುಧಾಬಾಯಿ (40) ಮೃತಪಟ್ಟಿದ್ದು, ರಾಹುಲ್ (19) ಮತ್ತು ರಮ್ಯಾ (16) ಗಂಭೀರವಾಗಿದ್ದಾರೆ. ವಿಷ ಆಹಾರ ಸೇವನೆ ಮಾಡಿರುವ ಅನುಮಾನ ವ್ಯಕ್ತವಾಗಿದೆ.
ನಿನ್ನೆ ರಾತ್ರಿ ಮುದ್ದೆ ಸಾರು ಸೇವನೆ ಬಳಿಕ ಕುಟುಂಬಸ್ಥರು ಅಸ್ವಸ್ಥರಾಗಿದ್ದು ತಕ್ಷಣವೇ ಚಿತ್ರದುರ್ಗ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಮಾರ್ಗ ಮಧ್ಯದಲ್ಲಿ ಗುಂಡಿಬಾಯಿ ಮತ್ತು ಸುಧಾಬಾಯಿ ಮೃತಪಟ್ಟಿದ್ದಾರೆ. ತಿಪ್ಪನಾಯ್ಕ ದಾವಣಗೆರೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ ಆದರೆ ಚಿಕಿತ್ಸೆ ಫಲಕಾರಿಯಾಗದೆ ಈ ದುರ್ಘಟನೆ ಸಂಭವಿಸಿದೆ ಎನ್ನಲಾಗಿದೆ.
ಕುಟುಂಬಸ್ಥರಲ್ಲಿ ಆಕ್ರಂದನ ಮುಗಿಲು ಮುಟ್ಟಿದ್ದು ಘಟನೆ ಕುರಿತು ಭರಮಸಾಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.