Sat,May18,2024
ಕನ್ನಡ / English

ಸಿಎಂ ಸ್ಥಾನಕ್ಕೆ ರಾಜೀನಾಮೆ ಘೋಷಣೆ: ಬಿಎಸ್​ವೈ ಅಪ್ಪಟ ಅಭಿಮಾನಿ ಆತ್ಮಹತ್ಯೆ! ಬಿಎಸ್‍ವೈ ಸಂತಾಪ | ಜನತಾ ನ್ಯೂಸ್

27 Jul 2021
2017

ಚಾಮರಾಜನಗರ : ಬಿ.ಎಸ್. ಯಡಿಯೂರಪ್ಪ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರಿಂದ ನೊಂದ ಬಿಎಸ್​ವೈ ಅಭಿಮಾನಿ ರವಿ ಎಂಬಾತ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ.

ಇಂತಹ ಘಟನೆ ಗುಂಡ್ಲುಪೇಟೆ ತಾಲೂಕಿನ ಬೊಮ್ಮಲಾಪುರ ಗ್ರಾಮದಲ್ಲಿ ನಡೆದಿದೆ. ರವಿ (35) ಮೃತ ದುರ್ದೈವಿ. ರವಿ ಹೋಟೆಲ್​ನಲ್ಲಿ ಕೆಲಸ ಮಾಡಿಕೊಂಡಿದ್ದ. ಯಡಿಯೂರಪ್ಪನವರ ಅಪ್ಪಟ ಅಭಿಮಾನಿಯಾಗಿದ್ದ ರವಿ, ನಿನ್ನೆ ಸಿಎಂ ಸ್ಥಾನಕ್ಕೆ ಬಿಎಸ್​ವೈ ರಾಜೀನಾಮೆ ಕೊಡುತ್ತಿದ್ದಂತೆ ಮಂಕಾಗಿದ್ದ.

ರಾಜೀನಾಮೆ ಘೋಷಣೆಯ ವಿಡಿಯೋವನ್ನು ಪದೇಪದೆ ನೋಡಿದ ರವಿ, ಯಡಿಯೂರಪ್ಪ ಅವರು ಕಣ್ಣೀರು ಸುರಿಸಿದ್ದು ಬೇಸರ ತಂದಿದೆ ಎಂದು ಗ್ರಾಮದ‌ ಗುರುಸ್ವಾಮಿ ಬಳಿ ಹೇಳಿಕೊಂಡಿದ್ದ. ಬೆಳಗ್ಗೆ ಅವನ ಕ್ಯಾಂಟೀನ್ ಬಳಿಗೆ ಬಂದಾಗ ಆತ್ಮಹತ್ಯೆ ಮಾಡಿಕೊಂಡಿರುವುದು ಗೊತ್ತಾಗಿದೆ.

ಈ ಬಗ್ಗೆ ಟ್ವೀಟ್ ಮಾಡಿರುವ ಅವರು, "ನನ್ನ ರಾಜೀನಾಮೆಯಿಂದ ಮನನ್ನೊಂದ ಗುಂಡ್ಲುಪೇಟೆ ತಾಲೂಕಿನ ಬೊಮ್ಮಲಾಪುರದ ರಾಜಪ್ಪ (ರವಿ) ಆತ್ಮಹತ್ಯೆಗೆ ಶರಣಾದ ಸುದ್ದಿ ಅತೀವ ನೋವು ಹಾಗೂ ಬೇಸರ ತರಿಸಿದೆ.

ರಾಜಕಾರಣದಲ್ಲಿ ಏರಿಳಿತಗಳು ಸಹಜ, ಇದಕ್ಕಾಗಿ ಪ್ರಾಣಾರ್ಪಣೆ ಮಾಡಿಕೊಳ್ಳಲು ಮುಂದಾಗುವುದು ಸರ್ವಥಾ ಒಪ್ಪಲಾಗದು, ಇದರಿಂದ ಕುಟುಂಬಕ್ಕಾಗುವ ನಷ್ಟ ಯಾರಿಂದಲೂ ಭರಿಸಲಾಗದು" ಎಂದು ತಿಳಿಸಿದ್ದಾರೆ. ಮತ್ತೊಂದು ಟ್ವೀಟ್‌ನಲ್ಲಿ ಯಡಿಯೂರಪ್ಪ ಅವರು, ಅಭಿಮಾನ ಅತಿರೇಕಕ್ಕೆ ಹೋಗಬಾರದೆಂದು ಕೈಮುಗಿದು ವಿನಂತಿಸುವೆ. ಇದರಿಂದ ನಿಮ್ಮ ಕುಟುಂಬಕ್ಕಾಗುವ ನಷ್ಟವನ್ನು ಯಾರಿಂದಲೂ ಭರಿಸಲು ಸಾಧ್ಯವಿಲ್ಲ. ರವಿ ಕುಟುಂಬದ ನೋವಿನೊಂದಿಗೆ ನಾನಿರುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ

RELATED TOPICS:
English summary :Chamarajanagar

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ

 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ

ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ

ನ್ಯೂಸ್ MORE NEWS...