Sat,Apr27,2024
ಕನ್ನಡ / English

ನಾನು 2 ಬಾರಿಯೂ ಅದೃಷ್ಟದಿಂದಲೇ ಸಿಎಂ ಆದೆ: ಹೆಚ್ ಡಿ ಕುಮಾರಸ್ವಾಮಿ | ಜನತಾ ನ್ಯೂಸ್

27 Jul 2021
3624

ರಾಮನಗರ : ಅದೃಷ್ಟದಿಂದಲೇ ನಾನು ಎರಡು ಬಾರಿಯೂ ರಾಜ್ಯದ ಸಿಎಂ ಆಗಿದ್ದೇನೆ, ಎಂದು ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ.

ನಾನು ಎರಡು ಬಾರಿಯೂ ಅದೃಷ್ಟದಿಂದಲೇ ಸಿಎಂ ಆದೆ. ಜನರ ಆರ್ಶೀವಾದದಿಂದ ನಾನು ಸಿಎಂ ಆಗಲಿಲ್ಲ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಅವರು ರಾಮನಗರದಲ್ಲಿ ಹೇಳಿಕೊಂಡಿದ್ದಾರೆ. ನಗರದ ಶಕ್ತಿದೇವತೆ ಚಾಮುಂಡೇಶ್ವರಿ ದರ್ಶನ ಪಡೆದ ಬಳಿಕ ಮಾತನಾಡಿರುವ ಅವರು.. ತಾಯಿ ಚಾಮುಂಡೇಶ್ವರಿ ನನಗೆ ಅಧಿಕಾರ ಕೊಡ್ತಾಳೆ. ಆ ಭರವಸೆ ಇದೆ.. ರಾಜ್ಯದ ಜನರ ಪರವಾಗಿ ಜೆಡಿಎಸ್ ಕೆಲಸ ಮಾಡಲಿದೆ ಎಂದರು.

ಜೆಡಿಎಸ್ ಮುಗಿದೇ ಹೋಯ್ತು ಎನ್ನುವವರಿಗೆ ಮುಂದೆ ಉತ್ತರ ಸಿಗಲಿದೆ. ತಾಯಿ ಚಾಮುಂಡೇಶ್ವರಿ ಜೆಡಿಎಸ್‍ಗೆ ಅಧಿಕಾರ ಕೊಡ್ತಾಳೆ ಎನ್ನುವ ವಿಶ್ವಾಸವಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯಗೆ ತಿರುಗೇಟು ನೀಡಿದರು.

ಬಿಜೆಪಿ ಪಕ್ಷದ ನೂತನ ಸಿಎಂ ಆಯ್ಕೆ ವಿಚಾರ ಮಾತನಾಡಿದ ಮಾಜಿ ಸಿಎಂ ಎಚ್‌ಡಿಕೆ, "ಅದು ಅವರ ಪಕ್ಷದ ಆಂತರಿಕ ವಿಚಾರ. ಅದರ ಬಗ್ಗೆ ಯಾವುದೇ ಮಾಹಿತಿ ನನಗೆ ತಿಳಿದಿಲ್ಲ. ಈಗಾಗಲೇ ಪ್ರಧಾನಿ ಮೋದಿಯವರು ರಾಜ್ಯದ ಬಗ್ಗೆ ಮಾಹಿತಿ ಪಡೆದಿರುತ್ತಾರೆ. ಹಾಗಾಗಿ ಯಾರು ಸಿಎಂ ಆಗಬೇಕೆಂದು ಅವರ ಪಕ್ಷ ನಿರ್ಧಾರ ಮಾಡುತ್ತದೆ,' ಎಂದು ಅಭಿಪ್ರಾಯಪಟ್ಟರು.

ಕಾಂಗ್ರೆಸ್ ನವರು ಒಂದು ಸಮಾಜವನ್ನ ಒಲೈಸಿಕೊಳ್ಳುವ ಕೆಲಸ ಮಾಡುತ್ತಿದೆ. ಕಾಂಗ್ರೆಸ್ ಪಕ್ಷದಲ್ಲಿ ಮುಂದಿನ ಸಿಎಂ ಯಾರು ಅಂತಾ ಟವಲ್ ಹಾಸಿ‌ ಕುಳಿತಿದ್ದರಲ್ಲ, ಅವರೇ ಹೇಳಿದ್ದಾರೆ ಈಗಿದ್ದ ಸಿಎಂ ಭ್ರಷ್ಟರು ಅಂತಾ, ಮುಂದೆ ಬರುವವರು ಹಾಗೇ ಅಂತಾ ಹೇಳಿದ್ದಾರೆ ಕಾಂಗ್ರೆಸ್ ಪಾರ್ಟಿ ರಾಜಕೀಯದ ಕುತಂತ್ರ ನಡೆಯನ್ನ ಅನುಸರಿಸುತ್ತಿದೆ ಎಂದು ಪರೋಕ್ಷವಾಗಿ ಸಿದ್ದರಾಮಯ್ಯ ವಿರುದ್ದ ಮಾತನಾಡಿದರು.

ಬಿಜೆಪಿಯಿಂದ ಒಳ್ಳೆಯ ಮುಖ್ಯಮಂತ್ರಿಯನ್ನು ನೋಡೋಕೆ ಸಾಧ್ಯವಿಲ್ಲ ಎಂದು ಟೀಕೆ ಮಾಡ್ತಾರೆ. ಇನ್ನೊಂದು ಕಡೆ ಯಡಿಯೂರಪ್ಪ ಅವರ ನಿರ್ಗಮನದ ವಿಚಾರದಲ್ಲಿ ಬಿಜೆಪಿ ಪಕ್ಷದ ಹೈಕಮಾಂಡ್ ವಿರದ್ದವೂ ಮಾತನಾಡುತ್ತಾರೆ. ಇವೆಲ್ಲ ಆ ಸಮಾಜದ (ವೀರಶೈವ-ಲಿಂಗಾಯತ) ಅನುಕಂಪ ಗಿಟ್ಟಿಸಿಕೊಳ್ಳುವ ರಾಜಕೀಯ ಕುತಂತ್ರ ನಡೆಗಳು ಎಂದರು.

RELATED TOPICS:
English summary :H D Kumaraswamy

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ, ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ನ್ಯೂಸ್ MORE NEWS...