Sat,May18,2024
ಕನ್ನಡ / English

ದಾವಣಗೆರೆಯಲ್ಲಿ ಕೊಳೆತ ಸ್ಥಿತಿಯಲ್ಲಿ ಸಹೋದರಿಯರಿಬ್ಬರ ಶವ ಪತ್ತೆ! | ಜನತಾ ನ್ಯೂಸ್

30 Jul 2021
2403

ದಾವಣಗೆರೆ : ನಗರದ ಆಂಜನೇಯ ಕಾಟನ್ ಮಿಲ್‌ ಪ್ರದೇಶದಲ್ಲಿ ಸಹೋದರಿಯಬ್ಬರ ಮೃತದೋಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ದಾವಣಗೆರೆಯಲ್ಲಿ ನಡೆದಿದೆ.

ಗೌರಮ್ಮ(34) ಮತ್ತು ರಾಧಮ್ಮ(32) ಮೃತ ಸಹೋದರಿಯರು. ಕೂಡ್ಲಿಗಿ ತಾಲೂಕು ಬೆನಕನಹಳ್ಳಿ ಗ್ರಾಮದ ಇವರಿಬ್ಬರೂ ಆಂಜನೇಯ ಕಾಟನ್ ಮಿಲ್​ನಲ್ಲಿ ಕಾರ್ಮಿಕರಾಗಿದ್ದರು. ಗೌರಮ್ಮನ ಜತೆ ತಂಗಿ ರಾಧಮ್ಮ ಕಳೆದ 10 ವರ್ಷದಿಂದ ವಾಸವಿದ್ದಳು. ಗೌರಮ್ಮಗೆ ಮದುವೆ ಆಗಿದ್ದು, ಗಂಡ ಮಂಜುನಾಥ ಬೇರೆಡೆ ಕೆಲಸ ಮಾಡುತ್ತಿದ್ದ.

ಬಾಡಿಗೆ ಮನೆಯಲ್ಲಿ ವಾಸವಿದ್ದ ಈ ಸಹೋದರಿಯರು ಬಳ್ಳಾರಿ ಜಿಲ್ಲೆ ಕೂಡ್ಲಿಗಿ ತಾಲ್ಲೂಕಿನ ಬೆನಕನಹಳ್ಳಿ ಮೂಲದವರಾಗಿದ್ದು, ಇಬ್ಬರ ಶವವೂ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ.

ಆಂಜನೇಯ ಕಾಟನ್ ಮಿಲ್‌ನಲ್ಲಿ ಕೆಲಸ ಮಾಡಿಕೊಂಡು ಜೀವನ ಸಾಗಿಸುತ್ತಿದ್ದ ಗೌರಮ್ಮ ಹಾಗೂ ರಾಧಮ್ಮ ಕೆಲ ತಿಂಗಳ ಹಿಂದೆಯಷ್ಟೇ ಕೆಲಸಕ್ಕೆ ಸೇರಿಕೊಂಡಿದ್ದರು ಎಂದು ತಿಳಿದುಬಂದಿದೆ.

ಕಳೆದ ಐದಾರು ದಿನಗಳಿಂದ ಮನೆಯಿಂದ ಹೊರ ಬಂದಿರಲಿಲ್ಲ, ಅಲ್ಲದೆ ಈ ಇಬ್ಬರು ಸಹೋದರಿಯರು ವಾಸವಾಗಿದ್ದ ಮನೆಯಿಂದ ಕೆಟ್ಟ ವಾಸನೆ ಬರುತ್ತಿದ್ದು, ಇದರಿಂದ ಸ್ಥಳೀಯರು ವಿದ್ಯಾ ನಗರ ಪೊಲೀಸರಿಗೆ ತಿಳಿಸಿದ್ದು, ಪೊಲೀಸರು ಬಂದುಮನೆ ಬಾಗಿಲು ತೆರೆದಾಗ ಪ್ರಕರಣ ಬಯಲಿಗೆ ಬಂದಿದೆ. ಮನೆಯಿಂದ ಕೆಟ್ಟ ವಾಸನೆ ಬರುತ್ತಿದೆ ಎಂದು ನೆರೆಹೊರೆಯವರು ನೀಡಿದ ಮಾಹಿತಿಯನ್ನು ಆಧರಿಸಿ ಪೊಲೀಸರು ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿದಾಗ ಗೌರಮ್ಮ ಹಾಗೂ ರಾಧಮ್ಮ ಇಬ್ಬರ ಶವವೂ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ.

ಈ ಸಂಬಂಧ ವಿದ್ಯಾನಗರ ಠಾಣೆಯಲ್ಲಿ ಮೃತರ ಕುಟುಂಬಸ್ಥರು ಕೊಲೆ ಶಂಕೆ ಎಂದು ದೂರು ನೀಡಿದ್ದು, ಗೌರಮ್ಮ ಪತಿ ಮಂಜುನಾಥ್ ಎಂಬುವವರ ಮೇಲೆ ಅನುಮಾನ ವ್ಯಕ್ತಪಡಿಸಿದ್ದಾರೆ. ಪತಿಯು ಬಂದು ಹೋದ ನಂತರದಲ್ಲಿ ಈ ಇಬ್ಬರೂ ಸಹೋದರಿಯರೂ ಹೊರಗೆ ಬಂದಿಲ್ಲ ಎಂದು ದೂರಲ್ಲಿ ತಿಳಿಸಿದ್ದಾರೆ.

ಗೌರಮ್ಮನಿಗೂ ಆಕೆಯ ಪತಿ ಮಂಜುನಾಥನ ಮಧ್ಯೆ ಆಗಾಗ ಕಲಹ ಆಗುತ್ತಿತ್ತು. ಕಳೆದ ಶುಕ್ರವಾರದವರೆಗೂ ಮಂಜುನಾಥ್ ಎರಡ್ಮೂರು ದಿನಗಳ ಕಾಲ ಆಕೆಯೊಂದಿಗಿದ್ದ ನಂತರ ಅಂದು ರಾತ್ರಿ ಜಗಳ ಮಾಡಿಕೊಂಡಿದ್ದ ಎಂದು ಶಂಖೆ ವ್ಯಕ್ತಪಡಿಸಿದ್ದಾರೆ. ದಾವಣಗೆರೆಯ ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

RELATED TOPICS:
English summary :Davanagere

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
ಸಂಸದ ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...