Fri,Apr19,2024
ಕನ್ನಡ / English

ಕೊರೊನಾ ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆ; ಜಿಲ್ಲೆಗೆ ಪ್ರವಾಸಿಗರು ಬರದಂತೆ ಪೊಲೀಸರ ವಿನಂತಿ! | ಜನತಾ ನ್ಯೂಸ್

02 Aug 2021
2110

ಚಿಕ್ಕಮಗಳೂರು : ಕೋವಿಡ್ ಪರಿಸ್ಥಿತಿಯ ಹಿನ್ನಲೆಯಲ್ಲಿ ನಿಮ್ಮ ಮತ್ತು ಸಾರ್ವಜನಿಕರ ಆರೋಗ್ಯ ದೃಷ್ಠಿಯಿಂದ ಹಾಗೂ ಜಿಲ್ಲೆಯ ಪಸ್ತುತ ಪರಿಸ್ಥಿತಿಯನ್ನು ಅರಿತು ಜಿಲ್ಲೆಗೆ ಪ್ರವಾಸ ಕೈಗೊಳ್ಳುವುದನ್ನು ಕೈಬಿಡಬೇಕು ಎಂದು ಚಿಕ್ಕಮಗಳೂರು ಜಿಲ್ಲಾ ಪೊಲೀಸರು ಪ್ರವಾಸಿರಲ್ಲಿ ವಿನಂತಿ ಮಾಡಿದ್ದಾರೆ.

ಜಿಲ್ಲೆಯಲ್ಲಿ ಕೊವಿಡ್ ಪ್ರಕರಣಗಳು ಕ್ರಮೇಣ ಹೆಚ್ಚುತ್ತಿವೆ. ಕೇರಳ, ಮಹಾರಾಷ್ಟ್ರಗಳಲ್ಲಿ ಆತಂಕದ ಪರಿಸ್ಥಿತಿ ನಿರ್ಮಾಣವಾಗಿ. ಹೀಗಾಗಿ, ಪ್ರವಾಸಿ ತಾಣಗಳಲ್ಲಿ ಪ್ರವಾಸಿಗರ ನಿಯಂತ್ರಣ ಅನಿವಾರ್ಯ ಎಂದು ಚಿಕ್ಕಮಗಳೂರು ಜಿಲ್ಲಾಡಳಿತ ತಿಳಿಸಿದೆ.

ಚಿಕ್ಕಮಗಳೂರು ಜಿಲ್ಲೆಯಲ್ಲಿ ನಿರಂತರ ಮಳೆ ಸುರಿಯುತ್ತಿದೆ. ಪ್ರವಾಸಿಗರಲ್ಲಿ ಸೋಂಕು ಪತ್ತೆಯಾದರೆ ಚಿಕಿತ್ಸೆಯೂ ಕಷ್ಟಸಾಧ್ಯ. ಈ ನಿಟ್ಟಿನಲ್ಲಿ ಪ್ರವಾಸಿಗರು ತಮ್ಮ ಪ್ರವಾಸ ಮುಂದೂಡುವುದು ಒಳ್ಳೆಯದು. ಪ್ರವಾಸಿಗರ ಭೇಟಿಗೆ 72 ಗಂಟೆಯೊಳಗಿನ RTPCR ನೆಗೆಟಿವ್ ವರದಿ ಕಡ್ಡಾಯ. ಸರ್ಕಾರದ ನಿಯಮಗಳನ್ನ ಉಲ್ಲಂಘಿಸಿದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಚಿಕ್ಕಮಗಳೂರು ಜಿಲ್ಲಾಡಳಿತ ಹೇಳಿದೆ.

ಚಿಕ್ಕಮಗಳೂರು ಜಿಲ್ಲೆಯು ಪ್ರವಾಸಿಗರನ್ನು ಆಕರ್ಷಿಸುವ ತಾಣಗಳನ್ನು ಹೊಂದಿದ್ದು, ಜಿಲ್ಲೆಗೆ ಹೆಚ್ಚಿನ ಪ್ರವಾಸಿಗರು ಆಗಮಿಸುತ್ತಿರುವುದನ್ನು ಗಮನಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ. ಕೇರಳ, ಮಹಾರಾಷ್ಟ್ರ ಸೇರಿದಂತೆ ಹೊರ ರಾಜ್ಯಗಳಿಂದಲೂ ಜಿಲ್ಲೆಗೆ ಪ್ರವಾಸಿಗರು ಆಗಮಿಸುತ್ತಿದ್ದಾರೆ.

* ಜಿಲ್ಲೆಯಲ್ಲಿ ಕೋವಿಡ್ ಸೋಂಕಿನ ಪ್ರಕರಣಗಳು ಗಣನೀಯವಾಗಿ ಹೆಚ್ಚಾಗುತ್ತಿದ್ದು, ಪ್ರವಾಸಿ ತಾಣಗಳಲ್ಲಿ ನಿಯಂತ್ರಣ ಕ್ರಮಗಳನ್ನು ಕೈಗೊಳ್ಳುವುದು ಅನಿವಾರ್ಯವಾಗಿರುತ್ತದೆ.

* ಕೇರಳ, ಮಹಾರಾಷ್ಟ್ರ ರಾಜ್ಯಗಳಲ್ಲಿ ಕೋವಿಡ್ ಸೋಂಕಿನ ಪ್ರಕರಣಗಳು ತೀವ್ರಗತಿಯಲ್ಲಿ ಹೆಚ್ಚಾಗಿರುವ ಹಿನ್ನಲೆಯಲ್ಲಿ ಆತಂಕದ ಪರಿಸ್ಥಿತಿ ನಿರ್ಮಾಣವಾಗಿದೆ.

* ಕೋವಿಡ್ ಸೋಂಕಿನ ಪ್ರಕರಣಗಳು ಪ್ರವಾಸಿಗರಲ್ಲಿ ಪತ್ತೆಯಾದಲ್ಲಿ ಸಕಾಲದಲ್ಲಿ ಚಿಕಿತ್ಸೆ ವ್ಯವಸ್ಥೆ ನೀಡುವುದು ಕಷ್ಟವಾಗಲಿದೆ.

* ಚಿಕ್ಕಮಗಳೂರು ಜಿಲ್ಲೆಯ ಮಲೆನಾಡು ಪ್ರದೇಶವಾಗಿದ್ದು, ಪ್ರಸ್ತುತ ನಿರಂತರವಾಗಿ ಮಳೆಯಾಗುತ್ತಿದೆ.

* ಪ್ರಸ್ತುತ ಸನ್ನಿವೇಶದಲ್ಲಿ ಪ್ರವಾಸಿ ತಾಣಗಳಿಗೆ ಭೇಟಿ ನೀಡುವುದು ಸೂಕ್ತವೆನಿಸುವುದಿಲ್ಲ.

ಈ ಹಿನ್ನಲೆಯಲ್ಲಿ ಪ್ರವಾಸಿಗರಲ್ಲಿ ವಿನಂತಿ ಮಾಡುವುದು ಏನೆಂದರೆ ಜಿಲ್ಲೆಗೆ ಹೊರಗಿನಿಂದ ಆಗಮಿಸುವ ಪ್ರವಾಸಿಗರು ಸದ್ಯದ ಪರಿಸ್ಥಿತಿಯಲ್ಲಿ ತಮ್ಮ ಪ್ರವಾಸವನ್ನು ಮೊಟುಕುಗೊಳಿಸಿ ತಮ್ಮ ಸ್ಥಳದಲ್ಲಿಯೇ ಉಳಿದುಕೊಂಡು ಪರಿಸ್ಥಿತಿ ತಿಳಿಗೊಂಡ ನಂತರದಲ್ಲಿ ಪ್ರವಾಸ ಕೈಗೊಳ್ಳಬೇಕು ಎಂದು ಮನವಿ ಮಾಡಲಾಗಿದೆ.

ಒಂದು ವೇಳೆ ಪ್ರವಾಸಿಗರು ಮುಂಚಿತವಾಗಿ ಪ್ರವಾಸ ನಿಗದಿ ಮಾಡಿದ್ದಲ್ಲಿ, ವಾಸ್ತವ್ಯಕ್ಕಾಗಿ ಸ್ಥಳ ಕಾಯ್ದಿರಿಸಿದ್ದಲ್ಲಿ 72 ಗಂಟೆಗಳ ಮೊದಲಿನ ಆರ್‌ಟಿಪಿಸಿಆರ್ ನೆಗೆಟಿವ್ ವರದಿಯನ್ನು ಸೂಕ್ತ ಮುಂಜಾಗ್ರತಾ ಕ್ರಮದೊಂದಿಗೆ ವೈಯಕ್ತಿಕ ಜವಾಬ್ದಾರಿ ಮೇಲೆ ಆಗಮಿಸಬಹುದು ಎಂದು ಜಿಲ್ಲಾ ಪೊಲೀಸರು ಹೇಳಿದ್ದಾರೆ.

RELATED TOPICS:
English summary :Chikkamagaluru

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ
ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ
ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ
ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ
ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ
ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ
ಪ್ರಧಾನಿ ಮೋದಿ ಬೆಂಬಲಿಸಿ ಮಹಾರಾಷ್ಟ್ರ ರ್ಯಾಲಿಯಲ್ಲಿ ಎಂಎನ್‌ಎಸ್ ಅಧ್ಯಕ್ಷ ರಾಜ್ ಠಾಕ್ರೆ
ಪ್ರಧಾನಿ ಮೋದಿ ಬೆಂಬಲಿಸಿ ಮಹಾರಾಷ್ಟ್ರ ರ್ಯಾಲಿಯಲ್ಲಿ ಎಂಎನ್‌ಎಸ್ ಅಧ್ಯಕ್ಷ ರಾಜ್ ಠಾಕ್ರೆ
ಕಾಂಗ್ರೆಸ್‌ನಿಂದ ಮಹಿಳೆಯರ ಗೌರವ ಮತ್ತು ಘನತೆಗೆ ಧಕ್ಕೆ : ಖರ್ಗೆ, ಸುರ್ಜೇವಾಲಾ ಗೆ ಚುನಾವಣಾ ಆಯೋಗ ಶೋಕಾಸ್ ನೋಟಿಸ್
ಕಾಂಗ್ರೆಸ್‌ನಿಂದ ಮಹಿಳೆಯರ ಗೌರವ ಮತ್ತು ಘನತೆಗೆ ಧಕ್ಕೆ : ಖರ್ಗೆ, ಸುರ್ಜೇವಾಲಾ ಗೆ ಚುನಾವಣಾ ಆಯೋಗ ಶೋಕಾಸ್ ನೋಟಿಸ್
ಕಾಂಗ್ರೆಸ್ ಪಕ್ಷದ ಪ್ರಣಾಳಿಕೆ ಸ್ವಾತಂತ್ರ್ಯ ಪೂರ್ವದ ಮುಸ್ಲಿಂ ಲೀಗ್‌ನ ಮನಸ್ಥಿತಿ ಹೊಂದಿದೆ - ಪ್ರಧಾನಿ ಮೋದಿ
ಕಾಂಗ್ರೆಸ್ ಪಕ್ಷದ ಪ್ರಣಾಳಿಕೆ ಸ್ವಾತಂತ್ರ್ಯ ಪೂರ್ವದ ಮುಸ್ಲಿಂ ಲೀಗ್‌ನ ಮನಸ್ಥಿತಿ ಹೊಂದಿದೆ - ಪ್ರಧಾನಿ ಮೋದಿ
ಲೋಕಸಭಾ ಚುನಾವಣೆ ಪ್ರಚಾರ ಚುರುಕು : ಚಾಮರಾಜನಗರದಲ್ಲಿ 98.52 ಕೋಟಿ ರೂಪಾಯಿ ಮೌಲ್ಯದ ಅಕ್ರಮ ಮದ್ಯ ವಶ
ಲೋಕಸಭಾ ಚುನಾವಣೆ ಪ್ರಚಾರ ಚುರುಕು : ಚಾಮರಾಜನಗರದಲ್ಲಿ 98.52 ಕೋಟಿ ರೂಪಾಯಿ ಮೌಲ್ಯದ ಅಕ್ರಮ ಮದ್ಯ ವಶ
ಬಿಜೆಪಿ ಸೇರುವ ನಿರ್ಧಾರ ಘೋಷಿಸಿದ ಮಂಡ್ಯ ಸಂಸದೆ ಸುಮಲತಾ ಅಂಬರೀಶ್ : ಮಂಡ್ಯ ಚುನಾವಣೆಯಲ್ಲಿ ಎಚ್ಡಿಕೆ  ಬಲವರ್ಧನೆ
ಬಿಜೆಪಿ ಸೇರುವ ನಿರ್ಧಾರ ಘೋಷಿಸಿದ ಮಂಡ್ಯ ಸಂಸದೆ ಸುಮಲತಾ ಅಂಬರೀಶ್ : ಮಂಡ್ಯ ಚುನಾವಣೆಯಲ್ಲಿ ಎಚ್ಡಿಕೆ ಬಲವರ್ಧನೆ
ತೈವಾನ್ ನಲ್ಲಿ 25 ವರ್ಷಗಳಲ್ಲಿ ಕಂಡರಿಯದ ಪ್ರಬಲ ಭೂಕಂಪ : ಭೂಕಂಪದ ಬೆನ್ನಲ್ಲೇ ಸುನಾಮಿ ಎಚ್ಚರಿಕೆ
ತೈವಾನ್ ನಲ್ಲಿ 25 ವರ್ಷಗಳಲ್ಲಿ ಕಂಡರಿಯದ ಪ್ರಬಲ ಭೂಕಂಪ : ಭೂಕಂಪದ ಬೆನ್ನಲ್ಲೇ ಸುನಾಮಿ ಎಚ್ಚರಿಕೆ

ನ್ಯೂಸ್ MORE NEWS...