Sat,Apr20,2024
ಕನ್ನಡ / English

ವಿಧವಾವೇತನ ಮಾಡಿಸಿಕೊಡುವುದಾಗಿ ಆಧಾರ್ ಕಾರ್ಡ್ ಪಡೆದು, 5 ಕೋಟಿ ರೂ. ನಾಮ ಹಾಕಿದ ಮಹಿಳೆ! | ಜನತಾ ನ್ಯೂಸ್

21 Aug 2021
2065

ದಾವಣಗೆರೆ : ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ದಾಗಿನಕಟ್ಟೆ ಗ್ರಾಮದಲ್ಲಿ ಸಹೋದರಿಯರಿಬ್ಬರು ಪತಿಯನ್ನು ಕಳೆದುಕೊಂಡು ಜೀವನ ಸಾಗಿಸುತ್ತಿದ್ದಾರೆ. ದಾಗಿನಕಟ್ಟೆ ಗ್ರಾಮದ ವಿಧವೆಯರಾದ ಗೀತಮ್ಮ, ಸಾವಿತ್ರಮ್ಮ ಎಂಬುವರ ಮನೆಗೆ ಅಧಿಕಾರಿಗಳು ಸಾಲ ವಸೂಲಿಗೆ ಆಗಮಿಸಿ ಹೈರಾಣಾಗಿದ್ದಾರೆ.

ಗೀತಮ್ಮ ಎಂಬುವರು 2.4 ಕೋಟಿ ರೂ., ಸಾವಿತ್ರಮ್ಮ ಹೆಸರಲ್ಲಿ‌ 2 ಕೋಟಿ‌ ರೂ. ಸಾಲ ಇದೆ ಎಂದು ಅಧಿಕಾರಿಗಳು ತಿಳಿಸಿದ್ದರಿಂದ ಬಡ ಹೆಣ್ಣು ಮಕ್ಕಳಿಬ್ಬರಿಗೆ ಸಿಡಿಲು ಬಡಿದಂತಾಗಿತ್ತು. 2013-14ನೇ ಸಾಲಿನಲ್ಲಿ ಇಬ್ಬರ ಮಹಿಳೆಯರ ಹೆಸರಿನಲ್ಲಿ‌ ಸಾಲ ಪಡೆದಿದ್ದಾರೆ ಎಂದು ಬ್ಯಾಂಕ್ ಸಿಬ್ಬಂದಿ ವಾದಿಸಿದರೆ, ಬಡ ಹೆಣ್ಣು ಮಕ್ಕಳು ನಾವು ಸಾಲ ತೆಗೆದುಕೊಂಡೇ ಇಲ್ಲ, ಸಾಲದ ಬಗ್ಗೆ ನಮಗೆ ಗೊತ್ತೇ ಇಲ್ಲ ಎಂದು ಹೇಳಿದ್ದಾರೆ.

ಘಟನೆ ಹಿನ್ನೆಲೆ ಚನ್ನಗಿರಿ ತಾಲೂಕಿನ ದಾಗಿನಕಟ್ಟೆ ಗ್ರಾಮದಲ್ಲಿ ನೆಲೆಸಿರುವ ಗೀತಮ್ಮ ಹಾಗೂ ಸಾವಿತ್ರಮ್ಮ ಮೂಲತಃ ಇದೇ ತಾಲೂಕಿನ ಸೋಮ್ಲಾಪುರ ಗ್ರಾಮದ ವಾಸಿಗಳು. ಇಬ್ಬರು ಸಹೋದರಿಯರಾಗಿದ್ದು, ದಾಗಿನಕಟ್ಟೆ ರಂಗಸ್ವಾಮಿ-ಜಗದೀಶ ಎಂಬುವವರ ಜೊತೆ ವಿವಾಹವಾಗಿದ್ದರು. ರಂಗಸ್ವಾಮಿ ಗೀತಮ್ಮರನ್ನು, ಸಾವಿತ್ರಮ್ಮರನ್ನು ಜಗದೀಶ್‌ಗೆ ಮದುವೆ ಮಾಡಿ ಕೊಡಲಾಗಿತ್ತು. ಆದರೆ 16 ವರ್ಷಗಳ ಹಿಂದೆಯೇ ಇಬ್ಬರು ಮೃತಪಟ್ಟಿದ್ದರು. ಆ ಬಳಿಕ 3 ಎಕರೆ ಜಮೀನಿನಲ್ಲಿ ಕೃಷಿ ಮಾಡಿಕೊಂಡು ಸಹೋದರಿಯರು ಜೀವನ ನಡೆಸುತ್ತಿದ್ದಾರೆ.

5 ಕೋಟಿ ರೂಪಾಯಿ ಸಾಲ ಪಡೆದ ಮೂಲ ಹುಡಕಲು ಹೊರಟಾಗ ಅಚ್ಚರಿ ವಿಷಯವೊಂದು ಗೊತ್ತಾಗಿದೆ. ಗೀತಮ್ಮ ಮತ್ತು ಸಾವಿತ್ರಮ್ಮ ಸಹೋದರನ ಪತ್ನಿ ಶೋಭಾ ಇದಕ್ಕೆಲ್ಲಾ ಕಾರಣ ಎಂಬುದು ಗೊತ್ತಾಗಿದೆ.

ಶೋಭಾ ಶಿವಮೊಗ್ಗದ ಡಿಸಿಸಿ ಬ್ಯಾಂಕ್ ಮ್ಯಾನೇಜರ್ ಆಗಿದ್ದವರು. ಇಬ್ಬರು ಮಹಿಳೆಯರ ಪತಿ ತೀರಿಕೊಂಡಾಗ ವಿಧವಾ ವೇತನ ಮಾಡಿಸಿಕೊಡುತ್ತೇನೆ. ನಿಮ್ಮ ಆಧಾರ್ ಕಾರ್ಡ್, ಬ್ಯಾಂಕ್ ಪಾಸ್ ಬುಕ್ ಕೊಡುವಂತೆ ಕೇಳಿದ್ದರು.

ಇದೇ ಪಾಸ್ ಬುಕ್ ಮತ್ತು ಆಧಾರ್ ಕಾರ್ಡ್ ಆಧಾರ ಮೇಲೆ ಶೋಭಾ ನಕಲಿ ಚಿನ್ನ ಅಡವಿಟ್ಟು ಶಿವಮೊಗ್ಗ ಡಿಸಿಸಿ ಬ್ಯಾಂಕ್‌ನಲ್ಲಿ 4.5 ಕೋಟಿ‌ ಸಾಲ ಪಡೆದಿದ್ದಾರೆ.

ಇವರ ಹೆಸರಲ್ಲಿ ಬ್ಯಾಂಕಿನ ಯಾವುದೇ ನೋಟಿಸ್ ಬಂದರು ತಮಗೆ ಕಳುಹಿಸುವಂತೆ ಶೋಭಾ ಹೇಳಿದ್ದಾರೆ. ಅವುಗಳನ್ನ ಮಹಿಳೆಯರು ಓಪನ್ ಮಾಡದೆ ನೊಟೀಸ್ ಅನ್ನು ತಮ್ಮ ಸಂಬಂಧಿ ಶೋಭಾಗೆ ಕಳುಹಿಸಿಕೊಟ್ಟಿದ್ದಾರೆ‌‌. ಆಗ ಗೊತ್ತಾಗಿದ್ದೇ ಸಂಬಂಧಿ ಶೋಭಾರಿಂದ ತಾವು ಮೋಸ ಹೋಗಿದ್ದೇವೆ ಎಂದು. ಸಂಬಂಧಿಕರು ಅಂತ ನಂಬಿದರೆ ಈ ರೀತಿ ಮೋಸ ಮಾಡಿದ್ದಾರೆ. ಇವರಿಗೆ ಶಿಕ್ಷೆ ಆಗಲೇಬೇಕು ಎಂದು ಸ್ಥಳೀಯರು ಆರೋಪಿಸಿದ್ದಾರೆ.

ಈ ಘಟನೆ ನಡೆದು 7 ವರ್ಷಗಳೇ ಉರುಳಿದ್ರೂ ಕೂಡ ಈ ಸಾಲದ ಬಗ್ಗೆ ಗೀತಮ್ಮ, ಸಾವಿತ್ರಮ್ಮನಿಗೆ ಮಾಹಿತಿಯೂ‌ ಇರಲಿಲ್ಲ. ಇದೀಗ ಬ್ಯಾಂಕಿನವರು ಮನೆಗೆ ಬಂದಾಗಲೇ ತಮ್ಮ ಹೆಸರಲ್ಲಿ‌ ಶೋಭಾ ಸಾಲ ಮಾಡಿರುವುದು ಗೊತ್ತಾಗಿದೆ. ಈ ಬಗ್ಗೆ ಕೂಲಂಕಷವಾಗಿ ತನಿಖೆಗೆ ಆಗ್ರಹಿಸಿದ್ದಾರೆ. ಬಸವಾಪಟ್ಟಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಜರುಗಿದೆ.

RELATED TOPICS:
English summary :Davanagere

ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ
ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ
ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ
ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ
ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ
ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ
ಪ್ರಧಾನಿ ಮೋದಿ ಬೆಂಬಲಿಸಿ ಮಹಾರಾಷ್ಟ್ರ ರ್ಯಾಲಿಯಲ್ಲಿ ಎಂಎನ್‌ಎಸ್ ಅಧ್ಯಕ್ಷ ರಾಜ್ ಠಾಕ್ರೆ
ಪ್ರಧಾನಿ ಮೋದಿ ಬೆಂಬಲಿಸಿ ಮಹಾರಾಷ್ಟ್ರ ರ್ಯಾಲಿಯಲ್ಲಿ ಎಂಎನ್‌ಎಸ್ ಅಧ್ಯಕ್ಷ ರಾಜ್ ಠಾಕ್ರೆ
ಕಾಂಗ್ರೆಸ್‌ನಿಂದ ಮಹಿಳೆಯರ ಗೌರವ ಮತ್ತು ಘನತೆಗೆ ಧಕ್ಕೆ : ಖರ್ಗೆ, ಸುರ್ಜೇವಾಲಾ ಗೆ ಚುನಾವಣಾ ಆಯೋಗ ಶೋಕಾಸ್ ನೋಟಿಸ್
ಕಾಂಗ್ರೆಸ್‌ನಿಂದ ಮಹಿಳೆಯರ ಗೌರವ ಮತ್ತು ಘನತೆಗೆ ಧಕ್ಕೆ : ಖರ್ಗೆ, ಸುರ್ಜೇವಾಲಾ ಗೆ ಚುನಾವಣಾ ಆಯೋಗ ಶೋಕಾಸ್ ನೋಟಿಸ್
ಕಾಂಗ್ರೆಸ್ ಪಕ್ಷದ ಪ್ರಣಾಳಿಕೆ ಸ್ವಾತಂತ್ರ್ಯ ಪೂರ್ವದ ಮುಸ್ಲಿಂ ಲೀಗ್‌ನ ಮನಸ್ಥಿತಿ ಹೊಂದಿದೆ - ಪ್ರಧಾನಿ ಮೋದಿ
ಕಾಂಗ್ರೆಸ್ ಪಕ್ಷದ ಪ್ರಣಾಳಿಕೆ ಸ್ವಾತಂತ್ರ್ಯ ಪೂರ್ವದ ಮುಸ್ಲಿಂ ಲೀಗ್‌ನ ಮನಸ್ಥಿತಿ ಹೊಂದಿದೆ - ಪ್ರಧಾನಿ ಮೋದಿ

ನ್ಯೂಸ್ MORE NEWS...