ನಡುರಸ್ತೆಯಲ್ಲೇ ಯುವತಿಗೆ ಚೂರಿಯಿಂದ ಇರಿದು, ತಾನು ಆತ್ಮಹತ್ಯೆಗೆ ಯತ್ನಿಸಿದ ಯುವಕ | ಜನತಾ ನ್ಯೂಸ್
ಉಡುಪಿ : ಯುವತಿಗೆ ಚೂರಿಯಿಂದ ಇರಿದು, ಬಳಿಕ ತಾನು ಕತ್ತು ಕೊಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಸೋಮವಾರ ಸಂಜೆ ಉಡುಪಿ ಸಂತೆಕಟ್ಟೆ ಸಮೀಪದ ರೋಬೊಸಾಫ್ಟ್ ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಸಂಭವಿಸಿದೆ.
ಯುವತಿ ಸ್ಕೂಟರ್‌ನಲ್ಲಿ ಆಗಮಿಸಿದ್ದರೆ ಯುವಕ ಬೈಕಿನಲ್ಲಿ ಬಂದಿದ್ದ ಎನ್ನಲಾಗಿದೆ. ಬಳಿಕ ಯುವಕ ತನ್ನಲ್ಲಿದ್ದ ಚೂರಿಯಿಂದ ಯುವತಿಗೆ ಇರಿದು ಬಳಿಕ ತಾನು ಅಲ್ಲೇ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಸ್ಥಳದಲ್ಲಿ ಚೂರಿ ಪತ್ತೆಯಾಗಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.
ರಸ್ತೆ ಬದಿ️ ರಕ್ತದ ಮಡುವಿನಲ್ಲಿ ಬಿದ್ದು ಒದ್ದಾಡುತ್ತಿದ್ದ ಇಬ್ಬರನ್ನು ಕೂಡಲೇ ಆಸ್ಪತ್ರೆಗೆ ಸಾಗಿಸಲಾಗಿದೆ. ಹೆಚ್ಚಿನ ಮಾಹಿತಿ ತಿಳಿಯ ಬೇಕಾಗಿದೆ
RELATED TOPICS:
English summary :Udupi