ಶಾಸಕರ ಹುಟ್ಟುಹಬ್ಬ, ಹೂಮಳೆಗೆರೆದು ಸಂಭ್ರಮಿಸಿದ ಪೊಲೀಸರು, ವಿಡಿಯೋ ವೈರಲ್! | ಜನತಾ ನ್ಯೂಸ್
ಬೆಳಗಾವಿ : ಕಿತ್ತೂರು ಕ್ಷೇತ್ರದ ಬಿಜೆಪಿ ಶಾಸಕ ಮಹಾಂತೇಶ ದೊಡ್ಡಗೌಡರ್ ಮತ್ತು ಅವರ ಪತ್ನಿಗೆ ಪೊಲೀಸ್ ಅಧಿಕಾರಿಗಳು ಹೂಮಳೆ ಸುರಿಸಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಮಹಾಂತೇಶ್ ದೊಡ್ಡಗೌಡರ್ ಅವರ ಹುಟ್ಟುಹಬ್ಬ ಹಿನ್ನೆಲೆಯಲ್ಲಿ ಅವರ ನಿವಾಸಕ್ಕೆ ತೆರಳಿದ್ದ ಬೈಲಹೊಂಗಲ ಡಿಎಸ್ ಪಿ ಶಿವಾನಂದ ಕಟಗಿ, ಸಿಪಿಐ ಸಾತೇನಹಳ್ಳಿ, ನೇಸರಗಿ ಪೊಲೀಸ್ ಠಾಣೆ ಪಿಎಸ್ ಐ ಶೀಗಿಹಳ್ಳಿ, ಎಸ್ ಐ ವಿಶ್ವನಾಥ್ ಮಲ್ಲಣ್ಣವರ್ ಸೇರಿದಂತೆ ಪೊಲೀಸ್ ಸಿಬ್ಬಂದಿ ಶಾಸಕರ ಹುಟ್ಟುಹಬ್ಬ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಈ ವೇಳೆ ಶಾಸಕರು ಹಾಗೂ ಅವರ ಪತ್ನಿಯನ್ನು ಕೂರಿಸಿ ಇಬ್ಬರ ಮೇಲೆ ಹೂವಿನ ಮಳೆಗರೆದಿದ್ದಾರೆ. ಈ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿದ್ದು, ತೀವ್ರ ಚರ್ಚೆಗೆ ಕಾರಣವಾಗಿದೆ.
RELATED TOPICS:
English summary :Belagavi