Wed,Apr24,2024
ಕನ್ನಡ / English

ಸುಟ್ಟ ಕಾರು, ಮೃತ ದೇಹ ಪತ್ತೆ, ಪತ್ನಿ,ಮಕ್ಕಳು ಸೇರಿ ಐವರ ಬಂಧನ, ಸ್ಫೋಟಕ ತಿರುವು! | ಜನತಾ ನ್ಯೂಸ್

01 Oct 2021
2076

ತೀರ್ಥಹಳ್ಳಿ : ತೀರ್ಥಹಳ್ಳಿಯ ಕಾಡಿನ ಮಧ್ಯೆ ಸುಟ್ಟ ಕಾರು, ಅಸ್ಥಿ ಪಂಜರ ಪತ್ತೆ ಪ್ರಕರಣಕ್ಕೆ ರೋಚಕ ತಿರುವು ಸಿಕ್ಕಿದೆ. ಸೆಪ್ಟೆಂಬರ್ 28ರಂದು ತೀರ್ಥಹಳ್ಳಿ ತಾಲೂಕು ಮಿಟ್ಲಗೋಡು ಅರಣ್ಯ ವ್ಯಾಪ್ತಿಯಲ್ಲಿ ಸುಟ್ಟು ಕರಕಲಾಗಿದ್ದ ಕಾರು ಮತ್ತು ಅಸ್ಥಿ ಪಂಜರ ಪತ್ತೆಯಾಗಿತ್ತು.

ಮೃತ ವ್ಯಕ್ತಿಯ ಗುರುತು ಪತ್ತೆಯಾಗಿದ್ದು, ಕೊಲೆಗಾರರನ್ನು ಪೊಲೀಸರು ಬಂಧಿಸಿದ್ದಾರೆ. ಮೃತನನ್ನು ಸಾಗರ ತಾಲೂಕಿನ ಆಚಾಪುರ ಗ್ರಾಮದ ಮುಸ್ಲಿಂಪೇಟೆಯ ನಿವಾಸಿ ವಿನೋದ್ (45) ಎಂದು ಗುರುತಿಸಲಾಗಿದೆ. ವಿನೋದ್ ಅವರನ್ನು ಕೊಲೆಗೈದು ಕಾರಿನಲ್ಲಿ ಕಾಡಿಗೆ ತಂದು ಕಾರಿಗೆ ಬೆಂಕಿ ಹಚ್ಚಿರುವುದು ತನಿಖೆಯಿಂದ ಬೆಳಕಿಗೆ ಬಂದಿದೆ.

ಸುಟ್ಟ ಕಾರು, ಅಸ್ಥಿ ಪಂಜರ ಪತ್ತೆಯಾಗಿರುವ ಸಂಬಂಧ ಜೇಡಿಕುಣಿ ಗ್ರಾಮ ಪಂಚಾಯಿತಿ ಸದಸ್ಯರು ದೂರು ನೀಡಿದ್ದರು. ತನಿಖೆ ನಡೆಸಿದ ತೀರ್ಥಹಳ್ಳಿ ಪೊಲೀಸರಿಗೆ ಮೃತ ವಿನೋದ್ ನ ಹೆಂಡತಿ, ಇಬ್ಬರು ಗಂಡು ಮಕ್ಕಳು, ಹೆಂಡತಿಯ ಅಕ್ಕನ ಮಗ ಮತ್ತು ಮೃತನ ತಮ್ಮ ನನ್ನ ಬಂಧಿಸಿದ್ದಾರೆ. ಕೌಟುಂಬಿಕ ಕಲಹ ಕೌಟುಂಬಿಕ ಕಲಹದ ಹಿನ್ನೆಲೆ ವಿನೋದ್ ಹತ್ಯೆಯಾಗಿದೆ ಎಂದು ತಿಳಿದು ಬಂದಿದೆ.

ಘಟನೆ :

ಸೆಪ್ಟೆಂಬರ್ 25ರಂದು ಐವರು ಆರೋಪಿಗಳು ವಿನೋದ್ ಕೊಲೆಗೆ ಸಂಚು ರೂಪಿಸಿದ್ದಾರೆ. ಸೆಪ್ಟೆಂಬರ್ 26ರಂದು ಬೆಳಗ್ಗೆ ಆನಂದಪುರದ ಪೆಟ್ರೋಲ್ ಬಂಕ್‌ನಲ್ಲಿ ಪೆಟ್ರೋಲ್ ಖರೀದಿಸಿಟ್ಟುಕೊಂಡಿದ್ದರು ಎನ್ನಲಾಗಿದೆ.

ಸೆಪ್ಟೆಂಬರ್ 26ರಂದು ರಾತ್ರಿ 8.30ರ ಹೊತ್ತಿಗೆ ಮನೆಯಲ್ಲೇ ತಂತಿ ಬಿಗಿಯುವ ರಾಡ್, ಸುತ್ತಿಗೆ, ಕಬ್ಬಿಣದ ಪೈಪ್ ರಾಡ್‌ನಿಂದ ಹೊಡೆದು ವಿನೋದ್ ಕೊಲೆ ಮಾಡಲಾಗಿದೆ. ವಿನೋದ್ ಬಳಸುತ್ತಿದ್ದ ಕಾರಿನಲ್ಲೇ ಮೃತದೇಹವನ್ನು ಸಾಗಿಸಿದ್ದಾರೆ ಎನ್ನಲಾಗಿದೆ.

ಆರೋಪಿಗಳು ತಮ್ಮ ಮೊಬೈಲನ್ನು ಸ್ವಿಚ್ ಆಫ್ ಮಾಡಿ, ಮನೆಯಲ್ಲೇ ಮೊಬೈಲ್‌ಗಳನ್ನು ಇಟ್ಟು ಹೋಗಿದ್ದರು. ಕಾರಿನಲ್ಲಿ ಯಡೇಹಳ್ಳಿ, ರಿಪ್ಪನ್ ಪೇಟೆ, ಹುಂಚದಕಟ್ಟೆ, ಶಂಕ್ರಳ್ಳಿ, ಮಲ್ಲೇಸರ ಮಾರ್ಗವಾಗಿ ತೀರ್ಥಹಳ್ಳಿ ತಾಲೂಕು ಮಿಟ್ಲಗೋಡು ಗ್ರಾಮದ ಹುಣಸೆಕೊಪ್ಪ ಅರಣ್ಯ ಪ್ರದೇಶಕ್ಕೆ ಮೃತದೇಹ ತಂದಿದ್ದಾರೆ.

ಚಾಲಕನ ಸೀಟಿನಲ್ಲಿ ಮೃತದೇವನ್ನು ಇಟ್ಟು ಪೆಟ್ರೋಲ್ ಸುರಿದು ಕಾರಿಗೆ ಬೆಂಕಿ ಹಚ್ಚಿದ್ದಾರೆ. ಕಾರಿನ ನಂಬರ್ ಪ್ಲೇಟ್ ಮತ್ತು ವಿನೋದ್ ಬಳಸುತ್ತಿದ್ದ ಮೊಬೈಲ್ ಫೋನನ್ನು ದಾರಿ ಮಧ್ಯೆ ಎಸೆದು ಆರೋಪಿಗಳು ಮನೆಗೆ ಮರಳಿದ್ದರು.

ಕೃತ್ಯದ ವೇಳೆ ಆರೋಪಿಗಳು ಬಳಸಿದ್ದ ಬಟ್ಟೆ, ಚಪ್ಪಲಿಗಳನ್ನು ಮನೆಯ ಹಿಂಭಾಗದಲ್ಲಿ ಸುಟ್ಟು ಹಾಕಿದ್ದರು.

RELATED TOPICS:
English summary :Shivamogga

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ
ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ
ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ
ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ
ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ
ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ
ಪ್ರಧಾನಿ ಮೋದಿ ಬೆಂಬಲಿಸಿ ಮಹಾರಾಷ್ಟ್ರ ರ್ಯಾಲಿಯಲ್ಲಿ ಎಂಎನ್‌ಎಸ್ ಅಧ್ಯಕ್ಷ ರಾಜ್ ಠಾಕ್ರೆ
ಪ್ರಧಾನಿ ಮೋದಿ ಬೆಂಬಲಿಸಿ ಮಹಾರಾಷ್ಟ್ರ ರ್ಯಾಲಿಯಲ್ಲಿ ಎಂಎನ್‌ಎಸ್ ಅಧ್ಯಕ್ಷ ರಾಜ್ ಠಾಕ್ರೆ

ನ್ಯೂಸ್ MORE NEWS...