ಕಣ್ಣಿಗೆ ಬಟ್ಟೆ ಕಟ್ಟಿಕೊಂಡು ನೇತ್ರಾವತಿ ನದಿಗೆ ಹಾರಿದ ವ್ಯಕ್ತಿ! | ಜನತಾ ನ್ಯೂಸ್
ಉಪ್ಪಿನಂಗಡಿ : ಬಸ್ನಲ್ಲಿ ಬಂದ ಅಜ್ಜನೊಬ್ಬ ಕಣ್ಣಿಗೆ ಬಟ್ಟೆ ಕಟ್ಟಿಕೊಂಡು ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಸೋಮವಾರ ಉಪ್ಪಿನಂಗಡಿಯಲ್ಲಿ ನಡೆದಿದೆ.
ಬೆಳ್ತಂಗಡಿ ತಾಲೂಕಿನ ಗೇರುಕಟ್ಟೆಯ ಪರಪ್ಪು ಸುಣ್ಣಲಡ್ಡ ನಿವಾಸಿ ಮುತ್ತಪ್ಪ ಶೆಟ್ಟಿ(70) ಮೃತರು.
ಗೇರುಕಟ್ಟೆ ಪರಪ್ಪು ನಿವಾಸಿ ಮುತ್ತಪ್ಪ ಶೆಟ್ಟಿ ಮೃತಪಟ್ಟ ದುರ್ದೈವಿ. ಗೇರುಕಟ್ಟೆಯಿಂದ ಉಪ್ಪಿನಂಗಡಿಗೆ ಕೆಎಸ್ಆರ್ಟಿಸಿ ಬಸ್ನಲ್ಲಿ ಬಂದಿದ್ದ ಮುತ್ತಪ್ಪ ಅವರು, ಕಣ್ಣಿಗೆ ಬಟ್ಟೆ ಕಟ್ಟಿಕೊಂಡು ನೇತ್ರಾವತಿ ನದಿಗೆ ಹಾರಿದ್ದಾರೆ.
ತಕ್ಷಣ ಸ್ಥಳೀಯರು ನದಿಗೆ ಹಾರಿ ರಕ್ಷಿಸಲು ಮುಂದಾದರು. ಅಷ್ಟರಲ್ಲಿ ಅವರ ಪ್ರಾಣಪಕ್ಷಿ ಹಾರಿ ಹೋಗಿತ್ತು. ಅವರ ಅಂಗಿಯ ಕಿಸೆಯಲ್ಲಿ ಬಸ್ ಟಿಕೆಟ್ ಪತ್ತೆಯಾಗಿದೆ. ಸಾವಿಗೆ ನಿಖರ ಕಾರಣ ತಿಳಿದು ಬಂದಿಲ್ಲ.
ಈ ಸಂಬಂಧ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.