Sun,May19,2024
ಕನ್ನಡ / English

ಮುಖ್ಯಮಂತ್ರಿ ಬೊಮ್ಮಾಯಿ ಸಮ್ಮುಖ ವೇದಿಕೆಯಲ್ಲೇ ಸಂಸದ ಡಿಕೆ ಸುರೇಶ್, ಸಚಿವ ಅಶ್ವತ್ಥ ನಾರಾಯಣ ವಾಗ್ವಾದ! | ಜನತಾ ನ್ಯೂಸ್

03 Jan 2022
2444

ರಾಮನಗರ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸಮ್ಮುಖದಲ್ಲಿಯೇ ಸಂಸದ ಡಿ.ಕೆ. ಸುರೇಶ್ ಹಾಗೂ ಸಚಿವ ಅಶ್ವತ್ಥ ನಾರಾಯಣ ಪರಸ್ಪರ ವಾಗ್ವಾದಕ್ಕಿಳಿದ ಪ್ರಸಂಗ ನಡೆದಿದೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ರಾಮನಗರ-ಮಾಗಡಿ ಕ್ಷೇತ್ರದಲ್ಲಿ ಪ್ರವಾಸ ಕೈಗೊಂಡು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದರು. ಮಾಗಡಿ ಒಂದೇ ಕ್ಷೇತ್ರಕ್ಕೆ 195 ಕೋಟಿ ರೂಪಾಯಿ ಹಣದ ಅಭಿವೃದ್ಧಿ ಕಾಮಗಾರಿ ಹಾಗೂ ರಾಮನಗರ, ಕನಕಪುರ, ಚನ್ನಪಟ್ಟಣಕ್ಕೆ 95 ಕೋಟಿ ರೂಪಾಯಿ ಹಣದ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಿದರು.

ಕಾರ್ಯಕ್ರಮದಲ್ಲಿ ಸ್ಥಳೀಯ ಸಂಸದರಿಗೆ ಸೂಕ್ತ ಗೌರವ ನೀಡಿಲ್ಲ ಎಂದು ಆರೋಪಿಸಿ ವೇದಿಕೆಯಲ್ಲಿ ಪ್ರತಿಭಟಿಸಿದ ಸಂಸದ ಡಿ ಕೆ ಸುರೇಶ್ , ಕಾರ್ಯಕ್ರಮದ ಬಗ್ಗೆ ನಮ್ಮ ಜೊತೆ ಸಭೆ ನಡೆಸಬೇಕಿತ್ತು ವಿಜೃಂಭಣೆಯಿಂದ ನಿಮ್ಮನ್ನು ಸ್ವಾಗತ ಮಾಡುತ್ತಿದ್ದೆವು. ನಮಗೆ ಹೇಳದೆಯೇ ಬಿಜೆಪಿಯಿಂದ ಕಾರ್ಯಕ್ರಮ ನಡೆಸಿದೆ. ನಿಮಗೆ ಈ ಸಂಸ್ಕೃತಿ ಆರೆಸ್ಸೆಸ್ ಹೇಳಿಕೊಡ್ತಾ? ಎಂದು ಪ್ರಶ್ನಿಸಿದರು.

ಇದರಿಂದ ಆಕ್ರೋಶಗೊಂಡ ಅಶ್ವತ್ಥ ನಾರಾಯಣ, ಸಿಎಂ ಕಾರ್ಯಕ್ರಮಕ್ಕೆ ಅಗೌರವ ತೋರುತ್ತಿದ್ದೀರಾ ಎಂದು ಪ್ರಶ್ನಿಸಿದ್ದಾರೆ. ಇದರಿಂದ ಮಾತಿಗೆ ಮಾತು ಬೆಳೆದಿದ್ದು, ವಿಧಾನಪರಿಷತ್ ಸದಸ್ಯ ಸಿ. ರವಿ, ಅಶ್ವತ್ಥ ನಾರಾಯಣ ಅವರು ಮಾತನಾಡುತ್ತಿದ್ದ ಮೈಕ್ ಕಿತ್ತುಕೊಂಡ ಘಟನೆಯೂ ನಡೆದಿದೆ.

ನಂತರ ಅಶ್ವತ್ ನಾರಾಯಣ್ ಮಾತನಾಡುವಾಗ ಕಾಂಗ್ರೆಸ್ ಕಾರ್ಯಕರ್ತರು ಡಿಕೆ ಡಿಕೆ ಎಂದು ಘೋಷಣೆ ಹಾಕಿದಾಗ ಯಾರಪ್ಪಾ ಅಲ್ಲಿ ಗಂಡು ಕೆಲಸದಲ್ಲಿ ತೋರಿಸಿ ಎಂದು ಅಶ್ವತ್ ನಾರಾಯಣ್ ಹೇಳಿಕೆಗೆ ಡಿಕೆ ಸುರೇಶ್ ಆಕ್ರೋಶ ವ್ಯಕ್ತಪಡಿಸಿದರು.

ಸಂಸದ ಹಾಗೂ ಸಚಿವರ ವಾಗ್ವಾದದಿಂದಾಗಿ ತುಸುಹೊತ್ತು ಕಾರ್ಯಕ್ರಮದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು.

RELATED TOPICS:
English summary : MP DK Suresh, Minister Ashwaththa Narayana altercation in the presence of Chief Minister Bommai

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
ಸಂಸದ ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...