Tue,Apr23,2024
ಕನ್ನಡ / English

ಮಂಗಳವಾರ ಸಿಎಂ ಮನೆ ಮುಂದೆ ಧರಣಿ ರೇವಣ್ಣ ಘೋಷಣೆ | ಜನತಾ ನ್ಯೂಸ್

14 Jan 2022
2662

ಹಾಸನ : ಸರ್ಕಾರ ಶಿಕ್ಷಣ ಇಲಾಖೆಯಲ್ಲಿ ರಾಜಕೀಯ ಮಾಡುತ್ತಿದೆ. ಬಿಜೆಪಿ ಸರ್ಕಾರದ ಈ ತಾರತಮ್ಯ ಖಂಡಿಸಿ ಮಂಗಳವಾರ ಸಿಎಂ ಬಸವರಾಜ ಬೊಮ್ಮಾಯಿ ಮನೆ ಎದುರು ಧರಣಿ ಮಾಡುತ್ತೇನೆ ಎಂದು ಎಚ್. ಡಿ.ರೇವಣ್ಣ ಎಂದಿದ್ದಾರೆ.

ಹೊಳೆನರಸೀಪುರದಲ್ಲಿ ಎಂಎಸ್ಸಿ ಫುಡ್ ಅಂಡ್ ನ್ಯೂಟ್ರಿಷಿಯನ್ ಕೋರ್ಸ್ ಅನುಮತಿ ಕೋರಿದ್ದರು. ಯೂನಿವರ್ಸಿಟಿ ಅನುಮತಿಕೊಟ್ಟರೂ ಉನ್ನತ ಶಿಕ್ಷಣ ಸಚಿವ ಅಶ್ವಥ್ ನಾರಾಯಣ್ ನೀಡಿಲ್ಲ ಎಂದು ರೇವಣ್ಣ ಆರೋಪಿಸಿದ್ದಾರೆ.

ಮಂಗಳವಾರ ಸಿಎಂ ಬಸವರಾಜ ಬೊಮ್ಮಾಯಿ ಮನೆ ಎದುರು ಧರಣಿ ಮಾಡುತ್ತೇನೆ. ನಾನು ಅಲ್ಲೇ ಕೂರುತ್ತೇನೆ, ನನ್ನ ಪ್ರಾಣ ಹೋದರೆ ಹೋಗಲಿ, ಅರೆಸ್ಟ್ ಮಾಡ್ತಾರಾ ಮಾಡಲಿ, ಇಂತಾ ಕೀಳು ಮಟ್ಟದ ರಾಜಕಾರಣ ಮಾಡಬೇಡಿ ಎಂದು ಎಚ್. ಡಿ.ರೇವಣ್ಣ ಆಕ್ರೋಶ ವ್ಯಕ್ತಪಡಿಸಿದರು.

ಈ ರಾಜ್ಯದಲ್ಲಿ ಶಿಕ್ಷಣ ಇಲಾಖೆ ಖಾಸಗಿಯವರ ಹಿಡಿತದಲ್ಲಿದೆ. ಸರ್ಕಾರ ಖಾಸಗಿಯವರ ಗುಲಾಮರಂತೆ ವರ್ತಿಸುತ್ತಿದೆ. ಸರ್ಕಾರಕ್ಕೆ ನಾಚಿಕೆಯಾಗಬೇಕು, ಬಡವರ ಮಕ್ಕಳ‌ ವಿದ್ಯಾಭ್ಯಾಸದ‌ ಮೇಲೆ ಕಲ್ಲು ಹಾಕುತ್ತಿದ್ದಾರೆ. ಇಂತಹ ಕೀಳುಮಟ್ಟದ ರಾಜಕೀಯ ಮಾಡಬಾರದು. ಮಾನ ಮರ್ಯಾದೆ ಇದೆಯಾ ಇವರಿಗೆ ಎಂದು ವಾಗ್ದಾಳಿ ನಡೆಸಿದರು.

ಜಿಲ್ಲೆಗೆ ಅನ್ಯಾಯ ಆದಾಗ ನೀವು ಎದ್ದೇಳಬೇಕು ಎಂದು ನಾನು ಜೆಡಿಎಸ್​ ವರಿಷ್ಠ ದೇವೇಗೌಡ ಅವರಿಗೆ ಕೋರುತ್ತೆನೆ. ಜನರು ನಿಮಗೆ ಅಧಿಕಾರ ನೀಡಿದಾರೆ, ಹಾಗಾಗಿ ನೀವು ಜನರ ಪರವಾಗಿ ಸಿಡಿದೇಳಬೇಕು ಎಂದು ಮನವಿ ಮಾಡಿದರು.

ರಾಜ್ಯ ಲೂಟಿಕೋರರ ಕೈ ಸೇರಿದೆ. ಇವರನ್ನು ಶಿಕ್ಷಣ ಸಚಿವರು ಎನ್ನೋದಕ್ಕೆ ನಾಚಿಕೆ ಆಗಬೇಕು. ಮುಂದಿನ ಚುನಾವಣೆಯಲ್ಲಿ ಏನಾಗುತ್ತದೆ ಎಂಬುದು ತಿಳಿಯಲಿದೆ. ನಾನು ಕೂಡ ಅಲ್ಲಿಯವರೆಗೂ ಇರುತ್ತೇನೆ. ಇಂತಹ ಶಿಕ್ಷಣ ಸಚಿವರಿಂದ ಸರ್ಕಾರ ಕ್ಕೂ ಕೆಟ್ಟ ಹೆಸರು ಬರುತ್ತಿದೆ ಎಂದು ಕಿಡಿಕಾರಿದರು.

RELATED TOPICS:
English summary :HD Revanna: Dharani in front of CM s house on Tuesday

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ
ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ
ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ
ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ
ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ
ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ
ಪ್ರಧಾನಿ ಮೋದಿ ಬೆಂಬಲಿಸಿ ಮಹಾರಾಷ್ಟ್ರ ರ್ಯಾಲಿಯಲ್ಲಿ ಎಂಎನ್‌ಎಸ್ ಅಧ್ಯಕ್ಷ ರಾಜ್ ಠಾಕ್ರೆ
ಪ್ರಧಾನಿ ಮೋದಿ ಬೆಂಬಲಿಸಿ ಮಹಾರಾಷ್ಟ್ರ ರ್ಯಾಲಿಯಲ್ಲಿ ಎಂಎನ್‌ಎಸ್ ಅಧ್ಯಕ್ಷ ರಾಜ್ ಠಾಕ್ರೆ

ನ್ಯೂಸ್ MORE NEWS...