Thu,Apr18,2024
ಕನ್ನಡ / English

ಹಿಜಾಬ್ ವಿಷಯ ಇಟ್ಟುಕೊಂಡು ಬಿಜೆಪಿ ರಾಜಕಾರಣ ಮಾಡಬೇಕಾದ ಅವಶ್ಯಕತೆ ಇಲ್ಲ | ಜನತಾ ನ್ಯೂಸ್

11 Feb 2022
1964

ಚಿಕ್ಕಬಳ್ಳಾಪುರ : ಹಿಜಾಬ್ ವಿಷಯ ಇಟ್ಟುಕೊಂಡು ಬಿಜೆಪಿ ರಾಜಕಾರಣ ಮಾಡಬೇಕಾದ ಅವಶ್ಯಕತೆ ಇಲ್ಲ ಎಂದು ಚಿಕ್ಕಬಳ್ಳಾಪುರದಲ್ಲಿ ಆರೋಗ್ಯ ಸಚಿವ ಡಾ.ಕೆ ಸುಧಾಕರ್ ಹೇಳಿದ್ದಾರೆ.

ಸರಿಯಾದ ಮಾಹಿತಿ ಇಲ್ಲದೆ ಸಿದ್ದರಾಮಯ್ಯನವರು ಆ ರೀತಿ ಆರೋಪ ಮಾಡಿರಬಹುದು. ಕೆಲವರು ಬಿಜೆಪಿಯ ಮೇಲೆ ಗೂಬೆ ಕೂರಿಸುವ ಯತ್ನ ನಡೆಸುತ್ತಿದ್ದಾರೆ. ಪ್ರಧಾನಿ ಮೋದಿಯವರು ಈಗಾಗಲೇ ಸ್ಪಷ್ಟಪಡಿಸಿದ್ದಾರೆ. ಸಬ್ ಕೆ ಸಾಥ್ ಸಬ್ ಕೆ ವಿಶ್ವಾಸ್ ಎಂದು ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಅಭಿವೃದ್ಧಿಗೆ ಟೊಂಕ ಕಟ್ಟಿದ್ದಾರೆ ಎಂದರು.

ಅಂಬೇಡ್ಕರ್‌ರವರು ಪ್ರತಿಪಾದಿಸಿದಂತೆ ಈ ದೇಶದ ಎಲ್ಲ ಜನರು ಸಮಾನರು ಎನ್ನುವ ಚಿಂತನೆಯೇ ಬಿಜೆಪಿ ಪಕ್ಷದ ಚಿಂತನೆ ಆಗಿದೆ. ಹೀಗಾಗಿ ನಮ್ಮ ಪಕ್ಷ ಹಿಜಬ್ ವಿವಾದದ ಹಿಂದೆ ಇಲ್ಲ. ನಾವು ಯಾರ ಮನಸ್ಸಿಗೂ ಘಾಸಿಯಾಗದಂತೆ ನಡೆದುಕೊಳ್ಳಬೇಕು ಎಂಬುದನ್ನು ನಾನು ಮೊದಲೇ ಹೇಳಿದ್ದೇನೆ ಎಂದರು.

ಶಾಲೆಗಳಲ್ಲಿ ಶ್ರೀಮಂತರು, ಬಡವರು ಇರುತ್ತಾರೆ. ಶ್ರೀಮಂತರು ಏನು ಬೇಕಾದರೂ ಹಾಕಿಕೊಳ್ಳಬಹುದು. ಆದರೆ ಇದಕ್ಕೆ ಅವಕಾಶವಿಲ್ಲ. ನಾವೆಲ್ಲರೂ ಸಮಾನರು ಎಂಬುದೇ ಮುಖ್ಯ. ಪಠ್ಯ ಪುಸ್ತಕ ಹೇಗೋ ಹಾಗೇ, ಎಲ್ಲರಿಗೂ ಒಂದೇ ಕೊಡ್ತಾರೆ. ಹಾಗೇ ಸಮವಸ್ತ್ರಗಳು.. ಸಮವಸ್ತ್ರಗಳು ಹೇಗೆ ಸಮಾನವಾಗಿ ಇರುತ್ತದೋ ಹಾಗೇ ಇರಬೇಕು. ಸಮಾನತೆಯನ್ನು ಸಾಧಿಸಲು ಇದು ಸಾಧ್ಯ. ಎಲ್ಲರೂ ಪಕ್ಷಾತೀತವಾಗಿ, ಜಾತ್ಯತೀತವಾಗಿ ಎಲ್ಲ ಧರ್ಮದವರು ಇದಕ್ಕೆ ಒಪ್ಪಬೇಕು ಎಂಬುದು ನನ್ನ ವೈಯಕ್ತಿಕ ಅಭಿಪ್ರಾಯ ಎಂದರು.

ಹಿಜಬ್ ವಿಚಾರದಲ್ಲಿ ನಾನು ರಾಜ್ಯದ ಜನರಿಗೆ ವಿದ್ಯಾರ್ಥಿಗಳಿಗೆ ಒಂದು ಮನವಿ ಮಾಡ್ತೇನೆ. ನ್ಯಾಯಾಲಯದ ತೀರ್ಪಿಗೆ ಎಲ್ಲರೂ ಬದ್ದರಾಗಬೇಕಾಗುತ್ತೆ ಎಂದರು.

RELATED TOPICS:
English summary :Sudhakar: There is no need for the BJP to do politics while keeping the hijab thing

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ
ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ
ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ
ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ
ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ
ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ
ಪ್ರಧಾನಿ ಮೋದಿ ಬೆಂಬಲಿಸಿ ಮಹಾರಾಷ್ಟ್ರ ರ್ಯಾಲಿಯಲ್ಲಿ ಎಂಎನ್‌ಎಸ್ ಅಧ್ಯಕ್ಷ ರಾಜ್ ಠಾಕ್ರೆ
ಪ್ರಧಾನಿ ಮೋದಿ ಬೆಂಬಲಿಸಿ ಮಹಾರಾಷ್ಟ್ರ ರ್ಯಾಲಿಯಲ್ಲಿ ಎಂಎನ್‌ಎಸ್ ಅಧ್ಯಕ್ಷ ರಾಜ್ ಠಾಕ್ರೆ
ಕಾಂಗ್ರೆಸ್‌ನಿಂದ ಮಹಿಳೆಯರ ಗೌರವ ಮತ್ತು ಘನತೆಗೆ ಧಕ್ಕೆ : ಖರ್ಗೆ, ಸುರ್ಜೇವಾಲಾ ಗೆ ಚುನಾವಣಾ ಆಯೋಗ ಶೋಕಾಸ್ ನೋಟಿಸ್
ಕಾಂಗ್ರೆಸ್‌ನಿಂದ ಮಹಿಳೆಯರ ಗೌರವ ಮತ್ತು ಘನತೆಗೆ ಧಕ್ಕೆ : ಖರ್ಗೆ, ಸುರ್ಜೇವಾಲಾ ಗೆ ಚುನಾವಣಾ ಆಯೋಗ ಶೋಕಾಸ್ ನೋಟಿಸ್
ಕಾಂಗ್ರೆಸ್ ಪಕ್ಷದ ಪ್ರಣಾಳಿಕೆ ಸ್ವಾತಂತ್ರ್ಯ ಪೂರ್ವದ ಮುಸ್ಲಿಂ ಲೀಗ್‌ನ ಮನಸ್ಥಿತಿ ಹೊಂದಿದೆ - ಪ್ರಧಾನಿ ಮೋದಿ
ಕಾಂಗ್ರೆಸ್ ಪಕ್ಷದ ಪ್ರಣಾಳಿಕೆ ಸ್ವಾತಂತ್ರ್ಯ ಪೂರ್ವದ ಮುಸ್ಲಿಂ ಲೀಗ್‌ನ ಮನಸ್ಥಿತಿ ಹೊಂದಿದೆ - ಪ್ರಧಾನಿ ಮೋದಿ
ಲೋಕಸಭಾ ಚುನಾವಣೆ ಪ್ರಚಾರ ಚುರುಕು : ಚಾಮರಾಜನಗರದಲ್ಲಿ 98.52 ಕೋಟಿ ರೂಪಾಯಿ ಮೌಲ್ಯದ ಅಕ್ರಮ ಮದ್ಯ ವಶ
ಲೋಕಸಭಾ ಚುನಾವಣೆ ಪ್ರಚಾರ ಚುರುಕು : ಚಾಮರಾಜನಗರದಲ್ಲಿ 98.52 ಕೋಟಿ ರೂಪಾಯಿ ಮೌಲ್ಯದ ಅಕ್ರಮ ಮದ್ಯ ವಶ
ಬಿಜೆಪಿ ಸೇರುವ ನಿರ್ಧಾರ ಘೋಷಿಸಿದ ಮಂಡ್ಯ ಸಂಸದೆ ಸುಮಲತಾ ಅಂಬರೀಶ್ : ಮಂಡ್ಯ ಚುನಾವಣೆಯಲ್ಲಿ ಎಚ್ಡಿಕೆ  ಬಲವರ್ಧನೆ
ಬಿಜೆಪಿ ಸೇರುವ ನಿರ್ಧಾರ ಘೋಷಿಸಿದ ಮಂಡ್ಯ ಸಂಸದೆ ಸುಮಲತಾ ಅಂಬರೀಶ್ : ಮಂಡ್ಯ ಚುನಾವಣೆಯಲ್ಲಿ ಎಚ್ಡಿಕೆ ಬಲವರ್ಧನೆ
ತೈವಾನ್ ನಲ್ಲಿ 25 ವರ್ಷಗಳಲ್ಲಿ ಕಂಡರಿಯದ ಪ್ರಬಲ ಭೂಕಂಪ : ಭೂಕಂಪದ ಬೆನ್ನಲ್ಲೇ ಸುನಾಮಿ ಎಚ್ಚರಿಕೆ
ತೈವಾನ್ ನಲ್ಲಿ 25 ವರ್ಷಗಳಲ್ಲಿ ಕಂಡರಿಯದ ಪ್ರಬಲ ಭೂಕಂಪ : ಭೂಕಂಪದ ಬೆನ್ನಲ್ಲೇ ಸುನಾಮಿ ಎಚ್ಚರಿಕೆ
ದೆಹಲಿ ಅಬಕಾರಿ ನೀತಿ ಹಗರಣ : ದೆಹಲಿ ಸಿಎಂ  ಕೇಜ್ರಿವಾಲ್ ಗೆ ಏಪ್ರಿಲ್ 15 ರವರೆಗೆ ನ್ಯಾಯಾಂಗ ಬಂಧನ
ದೆಹಲಿ ಅಬಕಾರಿ ನೀತಿ ಹಗರಣ : ದೆಹಲಿ ಸಿಎಂ ಕೇಜ್ರಿವಾಲ್ ಗೆ ಏಪ್ರಿಲ್ 15 ರವರೆಗೆ ನ್ಯಾಯಾಂಗ ಬಂಧನ

ನ್ಯೂಸ್ MORE NEWS...