ನಾಳೆ ಪ್ರೌಢ ಶಾಲೆ ಆರಂಭ, ಜಿಲ್ಲೆಯಲ್ಲಿ ಫೆ.14 -19 ವರೆಗೆ 144 ಸೆಕ್ಷನ್ ಜಾರಿ | ಜನತಾ ನ್ಯೂಸ್
ಉಡುಪಿ : ಸೋಮವಾರ ಶಾಲಾ-ಕಾಲೇಜುಗಳು ಆರಂಭವಾಗುತ್ತಿದ್ದು, ಜಿಲ್ಲೆಯಲ್ಲಿ ಸೆಕ್ಷನ್ 144 ಜಾರಿಗೊಳಿಸಲಾಗಿದೆ.
ಈ ಬಗ್ಗೆ ಜಿಲ್ಲಾಧಿಕಾರಿ ಕೂರ್ಮರಾವ್ ನಿಷೇಧಾಜ್ಞೆಯನ್ನು ಜಾರಿಗೊಳಿಸಿ ಆದೇಶಿಸಿದ್ದು, ನಾಳೆಯಿಂದ ಮೊದಲ ಹಂತದಲ್ಲಿ 9 ಮತ್ತು 10ನೇ ತರಗತಿಗಳನ್ನು ಪುನರಾರಂಭಿಸಲಾಗುತ್ತಿದೆ. ಈ ಹಿನ್ನಲೆಯಲ್ಲಿ ಫೆಬ್ರವರಿ 12 ರಿಂದ 19ರವರೆಗೆ ಜಿಲ್ಲೆಯಾಧ್ಯಂತ 144 ಸೆಕ್ಷನ್ ಅಡಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿರೋದಾಗಿ ತಿಳಿಸಿದ್ದಾರೆ.
ಶಾಲೆಯ ಸುತ್ತಮುತ್ತ ಗುಂಪು ಸೇರುವಂತಿಲ್ಲ, ಪ್ರತಿಭಟನೆ, ಮೆರವಣಿಗೆ, ಪರ ವಿರುದ್ಧ ಘೋಷಣೆ ಕೂಗುವಂತಿಲ್ಲ. ಯಾವುದೇ ವ್ಯಕ್ತಿ, ಜಾತಿ ಧರ್ಮದ ವಿರುದ್ಧ ನಡೆದುಕೊಳ್ಳುವಂತಿಲ್ಲ ಎಂದು ಆದೇಶದಲ್ಲಿ ತಿಳಿಸಲಾಗಿದೆ.
RELATED TOPICS:
English summary : 144 Section Implementation of the school tomorrow