Thu,Sep11,2025
ಕನ್ನಡ / English

ಅರ್ಧದಲ್ಲೇ ನಿಂತ ಪ್ಯಾಸೆಂಜರ್ ಟ್ರೈನ್, ಹಳಿ ಮೇಲೆ ನಿಂತಿದ್ದ ಮೈಮೇಲೆ ಹರಿದ ಎಕ್ಸ್​ಪ್ರೆಸ್​ ರೈಲು! | ಜನತಾ ನ್ಯೂಸ್

09 Mar 2022

ಕೋಲಾರ : ಪ್ಯಾಸೆಂಜರ್​ ರೈಲಿಂದ ಇಳಿದು ಹಳಿ ಮೇಲೆ ಕುಳಿತಿದ್ದ ಪ್ರಯಾಣಿಕನ ಮೇಲೆ ಹರಿದು ಸಾವನ್ನಪ್ಪಿರುವ ಘಟನೆ ಕೋಲಾರದಲ್ಲಿ ನಡೆದಿದೆ.

ಪ್ರಯಾಣಿಕರನ್ನು ತುಂಬಿಕೊಂಡು ಮಾರಿಕುಪ್ಪಂನಿಂದ ಬೆಂಗಳೂರಿನ ಕಡೆಗೆ ಹೊರಟಿದ್ದ ಸ್ವರ್ಣ ಟ್ರೈನ್, ಸಿಗ್ನಲ್ ಸಮಸ್ಯೆಯಿಂದ ಟೇಕಲ್ ಸ್ಟೇಷನ್​ನಲ್ಲಿ ಟ್ರ್ಯಾಕ್ ಮೇಲೆಯೇ ನಿಂತಿತ್ತು. ಈ ವೇಳೆ ಮೈಸೂರಿನಿಂದ ಚೆನ್ನೈ ಕಡೆಗೆ ಎಕ್ಸ್‌ಪ್ರೆಸ್‌ ರೈಲು ಹೋಗುತ್ತಿತ್ತು. ತಾಂತ್ರಿಕ ದೋಷದಿಂದ ಸ್ಥಗಿತಗೊಂಡ ರೈಲಿನಿಂದ ಪ್ರಯಾಣಿಕರು ಇಳಿಯುತ್ತಿದ್ದರು.

ಅದೇ ಸಂದರ್ಭದಲ್ಲಿ ಎಕ್ಸ್‌ಪ್ರೆಸ್ ರೈಲಿಗೆ ರೈಲ್ವೆ ಅಧಿಕಾರಿಗಳು ಸಿಗ್ನಲ್ ನೀಡಿದ್ದು, ಈ ವೇಳೆ ಬೆಂಗಳೂರು-ಚೆನ್ನೈ ಶತಾಬ್ದಿ ಎಕ್ಸ್‌ಪ್ರೆಸ್‌ ರೈಲು ವೇಗವಾಗಿ ನುಗ್ಗಿ ಬಂದಿದ್ದು, ಪ್ರಯಾಣಿಕರು ಬಚಾವ್​ ಆಗಲು ಯತ್ನಿಸುವ ವೇಳೆಗೆ ಡಿಕ್ಕಿ ಹೊಡೆದಿದೆ.

ಜನ ರೈಲು ಹಳಿಗಳ ಮೇಲೆ ನಿಂತಿರುವುದನ್ನು ಗಮನಿಸಿದ ಲೋಕೋ ಪೈಲಟ್ ಸತತವಾಗಿ ಹಾರ್ನ್ ಮಾಡಿದ್ದಾರೆ. ಈ ವೇಳೆ ಹಲವರು ಹಳಿಯಿಂದ ಪಕ್ಕಕ್ಕೆ ಸರಿದಿದ್ದಾರೆ. ಪ್ರಯಾಣಿಕರ ಮೇಲೆ ಎಕ್ಸ್​ಪ್ರೆಸ್​ ರೈಲು ಹರಿದ ಪರಿಣಾಮ ಓರ್ವ ಪ್ರಯಾಣಿಕ ಸಾವನ್ನಪ್ಪಿ ಇಬ್ಬರು ಗಾಯಗೊಂಡಿದ್ದಾರೆ.

ಮೃತನನ್ನು 24 ವರ್ಷದ ಕಾಲ್ ಸೆಂಟರ್ ಉದ್ಯೋಗಿ ಶಾಬಾಜ್ ಅಹ್ಮದ್ ಷರೀಫ್ ಎಂದು ಗುರುತಿಸಲಾಗಿದ್ದು, ಈತ ಬಂಗಾರಪೇಟೆ ನಿವಾಸಿ ಎನ್ನಲಾಗಿದೆ. ಶಬಾಜ್ ಅಹ್ಮದ್ ಷರೀಫ್ ಬೆಂಗಳೂರಿನ ರಾಜಾಜಿನಗರದಲ್ಲಿರುವ ವಿಂಧ್ಯಾ ಇನ್ಫೋಟೆಕ್ ಸಲ್ಯೂಷನ್ಸ್‌ನಲ್ಲಿ ಉದ್ಯೋಗಿಯಾಗಿದ್ದರು ಎನ್ನಲಾಗಿದೆ.

ಈ ದುರಂತಕ್ಕೆ ಸ್ಟೇಷನ್ ಮಾಸ್ಟರ್​ನ ನಿರ್ಲಕ್ಷ್ಯವೇ ಕಾರಣ ಎಂದು ಸ್ಥಳೀಯರು ಮತ್ತು ಇತರ ಪ್ರಯಾಣಿಕರು ಆಕ್ರೋಶ ಹೊರಹಾಕಿದ್ದಾರೆ.

RELATED TOPICS:
English summary :Accident by train

ಕಾಂಗ್ರೆಸ್ ಶಾಸಕ ಕೆ.ಸಿ.ವೀರೇಂದ್ರ ಅಕ್ರಮ ಆನ್‌ಲೈನ್ ಬೆಟ್ಟಿಂಗ್‌ನಲ್ಲಿ ವಂಚಿಸಿದ ಪ್ರಕರಣ : ಇಡಿ ದಾಳಿಯಲ್ಲಿ ರೂ.100 ಕೋಟಿ ಚಿನ್ನ ಬೆಳ್ಳಿ ವಶ
ಕಾಂಗ್ರೆಸ್ ಶಾಸಕ ಕೆ.ಸಿ.ವೀರೇಂದ್ರ ಅಕ್ರಮ ಆನ್‌ಲೈನ್ ಬೆಟ್ಟಿಂಗ್‌ನಲ್ಲಿ ವಂಚಿಸಿದ ಪ್ರಕರಣ : ಇಡಿ ದಾಳಿಯಲ್ಲಿ ರೂ.100 ಕೋಟಿ ಚಿನ್ನ ಬೆಳ್ಳಿ ವಶ
ಉಪರಾಷ್ಟ್ರಪತಿ ಚುನಾವಣೆಯಲ್ಲಿ ಎನ್‌ಡಿಎ ಅಭ್ಯರ್ಥಿ ಸಿ.ಪಿ. ರಾಧಾಕೃಷ್ಣನ್ ಗೆಲವು
ಉಪರಾಷ್ಟ್ರಪತಿ ಚುನಾವಣೆಯಲ್ಲಿ ಎನ್‌ಡಿಎ ಅಭ್ಯರ್ಥಿ ಸಿ.ಪಿ. ರಾಧಾಕೃಷ್ಣನ್ ಗೆಲವು
ನೇಪಾಳದಲ್ಲಿ ಕಮ್ಯುನಿಸ್ಟ್ ಪಕ್ಷದ ಸರ್ಕಾರದ ಪತನದ ಬಳಿಕವೂ ಸಂಸತ್ತು, ಸುಪ್ರೀಂ ಕೋರ್ಟ್ ಮೇಲೆ ದಾಳಿ ನಡೆಸಿದ ಪ್ರತಿಭಟನಾಕಾರರು :
ನೇಪಾಳದಲ್ಲಿ ಕಮ್ಯುನಿಸ್ಟ್ ಪಕ್ಷದ ಸರ್ಕಾರದ ಪತನದ ಬಳಿಕವೂ ಸಂಸತ್ತು, ಸುಪ್ರೀಂ ಕೋರ್ಟ್ ಮೇಲೆ ದಾಳಿ ನಡೆಸಿದ ಪ್ರತಿಭಟನಾಕಾರರು :
ನಿಮ್ಮ ನಡವಳಿಕೆಯು ಕಾಂಗ್ರೆಸ್ ಪಕ್ಷದ ಸಾಂಪ್ರದಾಯಿಕ ದುರಹಂಕಾರ ಮತ್ತು ಅಹಂಕಾರಕ್ಕೆ ಸಾಕ್ಷಿಯಾಗಿದೆ - ಖರ್ಗೆ ರನ್ನು ತರಾಟೆಗೆ ತೆಗೆದುಕೊಂಡ ಎಚ್‌ಡಿಕೆ
ನಿಮ್ಮ ನಡವಳಿಕೆಯು ಕಾಂಗ್ರೆಸ್ ಪಕ್ಷದ ಸಾಂಪ್ರದಾಯಿಕ ದುರಹಂಕಾರ ಮತ್ತು ಅಹಂಕಾರಕ್ಕೆ ಸಾಕ್ಷಿಯಾಗಿದೆ - ಖರ್ಗೆ ರನ್ನು ತರಾಟೆಗೆ ತೆಗೆದುಕೊಂಡ ಎಚ್‌ಡಿಕೆ
ಶ್ರೀ ನಾರಾಯಣ ಗುರುಗಳ ಜನ್ಮ ದಿನಾಚರಣೆಯಂದು  ಅವರ ದೃಷ್ಟಿಕೋನ, ಪ್ರಭಾವ ಸ್ಮರಿಸಿದ ಪ್ರಧಾನಿ ಮೋದಿ
ಶ್ರೀ ನಾರಾಯಣ ಗುರುಗಳ ಜನ್ಮ ದಿನಾಚರಣೆಯಂದು ಅವರ ದೃಷ್ಟಿಕೋನ, ಪ್ರಭಾವ ಸ್ಮರಿಸಿದ ಪ್ರಧಾನಿ ಮೋದಿ
ಭಾರತ-ಅಮೆರಿಕ ನಡುವೆ ಜಾಗತಿಕ ಕಾರ್ಯತಂತ್ರದ ಸಹಭಾಗಿತ್ವ ಬಹಳ ಸಕಾರಾತ್ಮಕವಾಗಿದೆ - ಪ್ರಧಾನಿ ಮೋದಿ
ಭಾರತ-ಅಮೆರಿಕ ನಡುವೆ ಜಾಗತಿಕ ಕಾರ್ಯತಂತ್ರದ ಸಹಭಾಗಿತ್ವ ಬಹಳ ಸಕಾರಾತ್ಮಕವಾಗಿದೆ - ಪ್ರಧಾನಿ ಮೋದಿ
ಭಾರತೀಯ ಪೌರತ್ವ ಪಡೆಯುವ ಮೂರು ವರ್ಷಗಳ ಮೊದಲೇ ಮತ ಚಲಾವಣೆ : ಸೋನಿಯಾ ಗಾಂಧಿ ವಿರುದ್ಧ ಕ್ರಿಮಿನಲ್ ದೂರು
ಭಾರತೀಯ ಪೌರತ್ವ ಪಡೆಯುವ ಮೂರು ವರ್ಷಗಳ ಮೊದಲೇ ಮತ ಚಲಾವಣೆ : ಸೋನಿಯಾ ಗಾಂಧಿ ವಿರುದ್ಧ ಕ್ರಿಮಿನಲ್ ದೂರು
11
11
ಭಾರತವನ್ನು ಹೆಸರಿಸುವಾಗ ಹೆಚ್ಚು ಗೌರವಯುತ ವಿಧಾನ ಬಳಸಲು ಅಮೆರಿಕಕ್ಕೆ ನಿರ್ದೇಶಿಸಿದ ಫಿನ್ಲ್ಯಾಂಡ್ ಅಧ್ಯಕ್ಷ
ಭಾರತವನ್ನು ಹೆಸರಿಸುವಾಗ ಹೆಚ್ಚು ಗೌರವಯುತ ವಿಧಾನ ಬಳಸಲು ಅಮೆರಿಕಕ್ಕೆ ನಿರ್ದೇಶಿಸಿದ ಫಿನ್ಲ್ಯಾಂಡ್ ಅಧ್ಯಕ್ಷ
2 ಮತದಾರರ ಗುರುತಿನ ಚೀಟಿಹೊಂದಿದಕ್ಕಾಗಿ ಕಾಂಗ್ರೆಸ್ ವಕ್ತಾರ ಪವನ್ ಖೇರಾಗೆ ಚುನಾವಣಾ ಕಚೇರಿಯ ನೋಟಿಸ್
2 ಮತದಾರರ ಗುರುತಿನ ಚೀಟಿಹೊಂದಿದಕ್ಕಾಗಿ ಕಾಂಗ್ರೆಸ್ ವಕ್ತಾರ ಪವನ್ ಖೇರಾಗೆ ಚುನಾವಣಾ ಕಚೇರಿಯ ನೋಟಿಸ್
ರಾಜಕೀಯಕ್ಕೂ ಯಾವುದೇ ಸಂಬಂಧವಿಲ್ಲದ ನನ್ನ ತಾಯಿ ವಿರುದ್ಧ ಅನುಚಿತ ಭಾಷೆಯನ್ನು ಏಕೆ ಬಳಸಿದ್ದಾರೆ? - ಪ್ರಧಾನಿ ಮೋದಿ
ರಾಜಕೀಯಕ್ಕೂ ಯಾವುದೇ ಸಂಬಂಧವಿಲ್ಲದ ನನ್ನ ತಾಯಿ ವಿರುದ್ಧ ಅನುಚಿತ ಭಾಷೆಯನ್ನು ಏಕೆ ಬಳಸಿದ್ದಾರೆ? - ಪ್ರಧಾನಿ ಮೋದಿ
ಸೆಮಿಕಾನ್ ಇಂಡಿಯಾ 2025 : ವಿಕ್ರಮ್ 32-ಬಿಟ್ ಪ್ರೊಸೆಸರ್  ಸೆಮಿಕಂಡಕ್ಟರ್ ಚಿಪ್ ಬಿಡುಗಡೆ ಮಾಡಿದ ಪ್ರಧಾನಿ ಮೋದಿ
ಸೆಮಿಕಾನ್ ಇಂಡಿಯಾ 2025 : ವಿಕ್ರಮ್ 32-ಬಿಟ್ ಪ್ರೊಸೆಸರ್ ಸೆಮಿಕಂಡಕ್ಟರ್ ಚಿಪ್ ಬಿಡುಗಡೆ ಮಾಡಿದ ಪ್ರಧಾನಿ ಮೋದಿ

ನ್ಯೂಸ್ MORE NEWS...