Fri,Apr26,2024
ಕನ್ನಡ / English

ಯಾವುದೇ ವಿಷಯದಲ್ಲಿ ಅನ್ಯಾಯ ಆಗಿರಲಿ ಅದನ್ನು ಜನತೆ ಮುಂದಿಡುವೆ, ವಿದೇಶಕ್ಕೆ ಬಂಡೆ ಸಾಗಿಸಿದವರಿಂದ ಬುದ್ಧಿ ಕಲಿಯಬೇಕಿಲ್ಲ! | ಜನತಾ ನ್ಯೂಸ್

13 Mar 2022
1713

ರಾಮನಗರ : ಯಾವುದೇ ವಿಷಯದಲ್ಲಿ ಅನ್ಯಾಯ ಆಗಿರಲಿ ಅದನ್ನು ಜನತೆ ಮುಂದಿಡುವೆ, ಇಂತಹದನ್ನು ಜನತೆ ಮುಂದೆ ಇಡಲು ಇಲ್ಲಿ ನಾನಿರುವುದು, ಅವರಿಂದ ನಾನು ವಿಚಾರಗಳನ್ನು ಕಲಿಯಬೇಕಿಲ್ಲ. ಇವರ ಬ್ಯಾಕ್ ಗ್ರೌಂಡ್ ನನಗೆ ಗೊತ್ತಿಲ್ವಾ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಪರೋಕ್ಷವಾಗಿ ಸಂಸದ ಡಿ.ಕೆ. ಸುರೇಶ್ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.

ರಾಮನಗರದ ಶ್ರೀ ರೇವಣಸಿದ್ದೇಶ್ವರ ಬೆಟ್ಟದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸದನದಲ್ಲಿ ನೀರಾವರಿ ವಿಚಾರ ಪ್ರಸ್ತಾಪ ಮಾಡಿದ್ದು ನೋಡಲಿಲ್ವ, ಸದನದಲ್ಲಿ ನೀರಾವರಿ ಬಗ್ಗೆ ಚರ್ಚೆ ಮಾಡಿದ್ದೇನಲ್ಲ, ಈಗಲ್ಟನ್‌ಗೆ 98 ಸಾವಿರ ಕೊಡಬೇಕು ಎಂದು ಹೇಳಿ 980 ಕೋಟಿ ದಂಡ ಹಾಕಿದ್ದು ಯಾರು, ಬಂಡೆಗಳನ್ನು ವಿದೇಶಕ್ಕೆ ಸಾಗಿಸಿದವರಿಂದ ನಾನು ಬುದ್ದಿ ಕಲಿಯಬೇಕೇ?" ಎನ್ನುವ ಮೂಲಕ ಸಂಸದ ಡಿ.ಕೆ.ಸುರೇಶ್‌ಗೆ ಎಚ್‌ಡಿಕೆ ಟಾಂಗ್ ನೀಡಿದ್ದಾರೆ

ನಾನು ರಾಮನಗರದಲ್ಲಿ ಇರುವುದು ಅನ್ಯಾಯದ ಬಗ್ಗೆ ಪ್ರಶ್ನಿಸುವುದಕ್ಕೆ. ಅನ್ಯಾಯವಾದಾಗ ಅನ್ಯಾಯ ಆಗಿದೆ ಎನ್ನುವುದು ತಪ್ಪೇ? ಯಾವುದೇ ವಿಷಯದಲ್ಲಿ ಅನ್ಯಾಯ ಆಗಿರಲಿ, ಅದನ್ನು ಜನತೆ ಮುಂದಿಡುವೆ. ಇಂತಹದನ್ನು ಜನತೆ ಮುಂದೆ ಇಡಲೆಂದೇ ನಾನಿರುವುದು. ಅವರಿಂದ ನಾನು ವಿಚಾರಗಳನ್ನು ಕಲಿಯಬೇಕಿಲ್ಲ. ಅವರಿಂದ ಯಾವ ವಿಷಯ ಎತ್ತಬೇಕು, ರೈತರ ವಿಷಯದಲ್ಲಿ ಏನು ಮಾತನಾಡಬೇಕು ಎಂದು ಕಲಿಯಬೇಕಾಗಿಲ್ಲ ಎಂದು ತಿರುಗೇಟು ನೀಡಿದ್ದಾರೆ.

ನೀರಾವರಿ ವಿಚಾರದಲ್ಲಿ ಎರಡು ರಾಷ್ಟ್ರೀಯ ಪಕ್ಷಗಳು ದ್ರೋಹ ಮಾಡಿವೆ, ಇದನ್ನು ಸದನದಲ್ಲಿ ಚರ್ಚೆ ನಡೆಸುವ ಸಂದರ್ಭದಲ್ಲಿ ಹೇಳಿದ್ದೇನೆ. ಈಗಲ್‌ಟನ್ ವಿಚಾರವಾಗಿ ಕೋರ್ಟ್ ಆದೇಶ ಧಿಕ್ಕರಿಸಿದ್ದಾರೆ. ಇದರ ಬಗ್ಗೆ ನಾನು ಚರ್ಚೆ ಮಾಡಿದ್ದೇನೆ ಇದು ತಪ್ಪೇ? ಎಂದು ಮಾಜಿ ಸಿಎಂ ಪ್ರಶ್ನಿಸಿದ್ದಾರೆ.

ರೈತರ ಬಗ್ಗೆ ರೈತರ ಪರವಾಗಿ ಯಾವ ವಿಷಯ ಚರ್ಚೆ ಮಾಡಬೇಕು ಅಂತ ನೀರಾವರಿ ಬಗ್ಗೆ 3 ಗಂಟೆಗಳ ಕಾಲ ಚರ್ಚೆ ನಡೆಸಿದ್ದೇನೆ. ಎತ್ತಿನಹೊಳೆ ಪರಿಸ್ಥಿತಿ ಏನು, ಮೇಕೆದಾಟು ಪರಿಸ್ಥಿತಿ ಏನು, ಕೃಷ್ಣ ಮೇಲ್ದಂಡೆ ಪರಿಸ್ಥಿತಿ ಏನಾಗಿದೆ, ನವಿಲೆ ಡ್ಯಾಮ್ ಕಟ್ಟಲು ಯಾವ ಸಮಸ್ಯೆ ಆಗಿದೆ. ಇದೆಲ್ಲಾ ವಿಷಯ ಸುದೀರ್ಘವಾಗಿ ಸದನದಲ್ಲಿ ಚರ್ಚೆ ಮಾಡಿದ್ದೇದೆ. ಇವರ ಬಳಿ ಒಂದು ಸಬ್ಜೆಕ್ಟ್ ಮಾಹಿತಿ ಇಟ್ಟುಕೊಂಡಿದ್ದರೋ? ನೀರಾವರಿ ವಿಚಾರದಲ್ಲಿ ಎರಡು ರಾಷ್ಟ್ರೀಯ ಪಕ್ಷಗಳು ದ್ರೋಹ ಮಾಡಿವೆ. ಇದನ್ನು ಸದನದಲ್ಲಿ ಚರ್ಚೆ ನಡೆಸುವ ಸಂದರ್ಭದಲ್ಲೇ ಹೇಳಿದ್ದೇನೆ ಎಂದು ಹೇಳಿದ್ದಾರೆ.

ಜನ ಪ್ರತಿನಿಧಿ ಕರ್ತವ್ಯ ಅಂದ್ರೆ ಇವರಿಗೆ ಕಂಡವರ ಜಮೀನು ಲೂಟಿ ಹೊಡೆಯುವುದು, ಕಿಡ್ನಾಪ್ ಮಾಡಿಸೋದು, ಮಕ್ಕಳನ್ನ ಹೆದರಿಸಿ ತಂದೆ ತಾಯಿ ಕೈಯಲ್ಲಿ ರುಜು ಹಾಕಿಸಿಕೊಳ್ಳೋದು, ಇದು ಅವರ ಜೀವನ ನಾನು ಈ ಜೀವನ ಮಾಡಿಲ್ಲ, ಇವನಿಂದ ನಾನೇನು ಕಲಿಯಬೇಕಾಗಿಲ್ಲ... ನನ್ನ ಸುದ್ದಿಗೆ ಇವನು ಬರಬೇಕಾಗಿಲ್ಲ. ಇವರು ಯಾವ ರೀತಿ ದೇಶ ಲೂಟಿ ಹೊಡೆದಿದ್ದಾರೆ, ಇವರ ಬ್ಯಾಕ್ ಗ್ರೌಂಡ್ ನನಗೆ ಗೊತ್ತು. ಸರ್ಕಾರ ನಡೆಸುವವರಿಗೆ ಸಹಿ ಮಾಡಬೇಕಾದರೆ ಬುದ್ದಿ ಇರಬೇಕು ಎಂದು ಎಚ್‌ಡಿಕೆ ಹೇಳಿದ್ದಾರೆ

RELATED TOPICS:
English summary :No need to learn from Dk Suresh: HD Kumaraswamy

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ, ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ನ್ಯೂಸ್ MORE NEWS...