Fri,Apr26,2024
ಕನ್ನಡ / English

ಮುಖ್ಯಮಂತ್ರಿ ಬೊಮ್ಮಾಯಿಯವರಿಗೆ ಗಂಡಸ್ತನ ಇದ್ದರೆ ಹಲಾಲ್ ವಿವಾದ ತಡೆಯಲಿ: H.D ಕುಮಾರಸ್ವಾಮಿ | JANATA NEWS

31 Mar 2022
3267

ರಾಮನಗರ: : ಹೆಚ್ ಡಿ ಕುಮಾರಸ್ವಾಮಿ ಅವರು ಹಲಾಲ್ ವಿಚಾರದಲ್ಲಿ ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರಿಗೆ ಗಂಡಸ್ತನದ ಸವಾಲು ಹಾಕಿದ್ದಾರೆ.

ರಾಜ್ಯದಲ್ಲಿ ಹಲಾಲ್ ಮಾಂಸ ವಿಚಾರದಲ್ಲಿ ಇಷ್ಟೊಂದು ಗದ್ದಲ, ಗಲಾಟೆ ನಡೆಯುತ್ತಿದ್ದರೂ ಏನು ಗೊತ್ತಿಲ್ಲದಂತೆ ಮೌನವಾಗಿದ್ದಾರೇಕೆ, ಸರ್ಕಾರಕ್ಕೆ ಮಾನಮರ್ಯಾದೆ ಇದ್ದರೆ, ಸಿಎಂ ಬೊಮ್ಮಾಯಿವರಿಗೆ ಗಂಡಸ್ತನ ಇದ್ದರೆ ಮಧ್ಯೆ ಪ್ರವೇಶಿಸಿ ಇದಕ್ಕೆ ತಡೆಯೊಡ್ಡಲಿ ಎಂದು ಹೇಳಿದ್ದಾರೆ.

ಈ ಹಿಂದೂ ಪರ ಸಂಘಟನೆಗಳ ಕಾರ್ಯಕರ್ತರಿಗೆ ರೈತರ ಬದುಕು ಗೊತ್ತಿದೆಯಾ, ನಮ್ಮ ರೈತರು ಕಟ್ ಮಾಡುವ ಮಾಂಸ ಕ್ಲೀನ್ ಮಾಡಲು ಅದೇ ಸಮಾಜದವರೇ ಬರಬೇಕು. ಈಗ ಹಲಾಲ್ - ಜಟ್ಕಾ ಕಟ್ ಅಂತಿದ್ದೀರಲ್ಲ ನಿಮ್ಮ ಜಟ್ಕಾ ಮಾಡೋಕು, ಇನ್ನೊಂದು ಮಾಡೋಕು ಅವರೇಬೇಕು ಎಂದು ಕಿಡಿಕಾರಿದ್ರು.

ರೇಷ್ಮೆ, ಮಾವು ಬೆಳೆ ಮಾರಾಟಕ್ಕೆ ಈ ಪೋಲಿಗಳು ಬರ್ತಾವಾ, ಅಕಾಲಿಕ ಮಳೆಯಿಂದಾಗಿ ಮಾವು ನಷ್ಟವಾಗಿದೆ. ಅದನ್ನ ಖರೀದಿ ಮಾಡಲು ಆ ಸಮಾಜದವರೇ ಬರಬೇಕು. ಇವರಿಗೇನೂ ಗೊತ್ತಿದೆ, ವಿಶ್ವ ಹಿಂದೂ ಪರಿಷತ್ ನವರು ಭಜರಂಗದಳದವರು ಇವರ ಹೊಟ್ಟೆಪಾಡಿಗೆ, ದೇಶ ಹಾಳು ಮಾಡೋಕೆ ಇಂತಹ ವಿಚಾರವನ್ನು ದೊಡ್ಡದು ಮಾಡ್ತಿದ್ದಾರೆ.

ವಿಶ್ವ ಹಿಂದೂ ಪರಿಷತ್‍ನವರು ಬಜರಂಗದಳದವರು ಇವರ ಹೊಟ್ಟೆ ಮೇಲೆ ಹೊಡೆಯಲು, ದೇಶ ಹಾಳು ಮಾಡುವುದಕ್ಕೆ ಇಂತಹ ವಿಚಾರ ಇಟ್ಟುಕೊಂಡು ಬಂದಿದ್ದಾರೆ. ಇದಕ್ಕೆಲ್ಲ ನಾನು ಕೇರ್ ಮಾಡುವುದಿಲ್ಲ ಎಂದು ಆಕ್ರೋಶ ಹೊರಹಾಕಿದ್ದಾರೆ.

ಇದಕ್ಕೆಲ್ಲ ನಾನು ಕೇರ್ ಮಾಡುವುದಿಲ್ಲ, ಇಷ್ಟು ವರ್ಷ ಹಲಾಲ್ ತಿಂದಿದ್ದೇವೆ, ಏನಾಗಿದೆ ಚೆನ್ನಾಗಿದ್ದೀವಲ್ಲ, ಈಗ ಹಲಾಲ್ ತಿಂದರೆ ತೊಂದರೆ ಆಗುತ್ತಾ, ಈಗ ನಮ್ಮ ದೇವರು ಮೆಚ್ಚಲ್ವಾ? ನಮ್ಮ ಹಿಂದೂ ದೇವರು ಕನಸಲ್ಲಿ ಬಂದು ಹೇಳಲಿಲ್ಲವಲ್ಲ, ಹಲಾಲ್ ತಿಂದಾಗ ಹಲವಾರು ವರ್ಷಗಳಿಂದ ಹಲಾಲ್ ನಡೆಯುತ್ತಿದೆ, ಈಗಿನದ್ದಲ್ಲ, ಆಸ್ಪತ್ರೆಯಲ್ಲಿ ಆಕ್ಸಿಜನ್ ಇಲ್ಲದೇ ಜನ ಸತ್ತರೂ. ಬಿಜೆಪಿ ಸರ್ಕಾರದ ಯೋಗ್ಯತೆಗೆ ಆಸ್ಪತ್ರೆ ನಿರ್ವಹಣೆ ಮಾಡಲು ಆಗಲಿಲ್ಲ. ಆಗ ಎಲ್ಲಿದ್ದರೂ ವಿಶ್ವ ಹಿಂದೂ ಪರಿಷತ್ – ಭಜರಂಗದಳದವರು ಎಂದು ಕಿಡಿಕಾರಿದ್ದಾರೆ.

ಸರ್ಕಾರಕ್ಕೆ ಮಾನಮರ್ಯಾದೆ ಇದ್ದರೆ, ಸಿಎಂ ಬೊಮ್ಮಾಯಿಗೆ ಗಂಡಸ್ತನ ಇದ್ದರೆ ಏನು ಗೊತ್ತಿಲ್ಲದಂತೆ ಮೌನವಾಗಿರಬಾರದು, ಅದರ ಅರ್ಥ ಏನು ಸಮಾಜ ಹೊಡೆಯುವ ಶಕ್ತಿಗಳಿಗೆ ಹ್ಯಾಂಡ್ ಬಿಲ್ ಹಂಚುತ್ತಿದ್ದಾರೆ. ಯಾವ ಸಂವಿಧಾನಕ್ಕೆ ಗೌರವಿಸುತ್ತಿದ್ದೀರಿ, ಯಾಕೆ ಅಂಬೇಡ್ಕರ್ ಜಯಂತಿ ಆಚರಿಸುತ್ತೀರಿ ನನಗೆ ಓಟ್ ಮುಖ್ಯವಲ್ಲ, ಈ ನಾಡು ಶಾಂತಿಯಿಂದ ಬದುಕಬೇಕು . ನಾನು ಮೌನವಾಗಿರಲು ಸಾಧ್ಯವಿಲ್ಲ ಕಾಂಗ್ರೆಸ್ ನವರಿಗೆ ಮಾತನಾಡಲು ತಾಕತ್ತಿಲ್ಲ, ಹಿಂದೂಗಳು ಓಟ್ ಹಾಕ್ತಾರೋ ಇಲ್ಲವೋ ಎಂಬ ಭಯ ಉತ್ತರಪ್ರದೇಶದಲ್ಲಿ ನಿಮ್ಮ ಆಟ ಆಡಿಕೊಳ್ಳಿ, ಇಲ್ಲಿ ಬೇಡ ಎಂದು ಚನ್ನಪಟ್ಟಣದ ಚಕ್ಕೆರೆ ಗ್ರಾಮದಲ್ಲಿ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

RELATED TOPICS:
English summary :Halal controversy should be stopped: H.D Kumaraswamy

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ, ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ನ್ಯೂಸ್ MORE NEWS...