ಚಲಿಸುತ್ತಿದ್ದ ಆಟೋ ಮೇಲೆ ಮರ ಬಿದ್ದು ಮಹಿಳೆ ಸಾವು, ಐದು ಮಂದಿಗೆ ಗಾಯ! | JANATA NEWS
ವಿಜಯಪುರ : ಚಲಿಸುತ್ತಿದ್ದ ಆಟೋ ಮೇಲೆ ಮರ ಬಿದ್ದು ಓರ್ವ ಮಹಿಳೆ ಸಾವನ್ನಪ್ಪಿದ ದುರ್ಘಟನೆ ವಿಜಯಪುರದ ಪೊಲೀಸ್ ತರಬೇತಿ ಕೇಂದ್ರದ ಬಳಿ ಸಂಭವಿಸಿದೆ.
ಸ್ಥಳೀಯ ಸಿದ್ದಾರೂಢ ಕಾಲನಿಯ ನಿವಾಸಿ ಯಲ್ಲಮ್ಮಾ ಕೊಂಡಗೂಳಿ (45) ಮೃತಪಟ್ಟವರು.
ಚಾಲಕ, ಮತ್ತಿಬ್ಬರು ಮಹಿಳೆಯರು ಹಾಗೂ ಒಟ್ಟು ಐದು ಮಂದಿಗೆ ಗಾಯ ಆಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಚಾಲಕನ ಸ್ಥಿತಿ ಚಿಂತಾಜನಕವಾಗಿದೆ.
ಮದಬಾವಿ ತಾಂಡಾದ ಆಟೋ ಚಾಲಕನ ಸಂಬಂಧಿಕರ ಮನೆಯಲ್ಲಿನ ನಾಮಕರಣ ಕಾರ್ಯಕ್ರಮದಲ್ಲಿ ಭಾಗಿಯಾಗಿ ವಾಪಸ್ ಆಗುತ್ತಿದ್ದಾಗ ಈ ಅವಘಡ ಸಂಭವಿಸಿದೆ.
ಗಾಂಧಿಚೌಕ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
English summary :Woman dies after falling tree on auto moving, driver serious