ರಥಕ್ಕೆ ವಿದ್ಯುತ್ ತಂತಿ ತಗುಲಿ ಓರ್ವ ಸಾವು, 15ಕ್ಕೂ ಹೆಚ್ಚು ಮಂದಿಗೆ ಗಾಯ | JANATA NEWS
ದಾವಣಗೆರೆ : ಕಬ್ಬಿಣದ ರಥಕ್ಕೆ ವಿದ್ಯುತ್ ತಂತಿ ತಗುಲಿ ಓರ್ವ ಸಾವನಪ್ಪಿದ್ದು,15ಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿರುವ ಘಟನೆ ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಕೆಂಗಾಪುರ ಗ್ರಾಮದಲ್ಲಿ ನಡೆದಿದೆ.
20 ವರ್ಷದ ಅರ್ಜುನ್ ಮೃತ ದುರ್ದೈವಿಯಾಗಿದ್ದು, ಇಂದು ಬೆಳಿಗ್ಗೆ ದುರ್ಗಮ್ಮ ದೇವಿಯ ಕಬ್ಬಿಣದ ರಥ ಎಳೆಯುವಾಗ ಅವಘಡ ಸಂಭವಿಸಿದೆ. ಗಾಯಾಳುಗಳನ್ನು ಪಕ್ಕದ ಹೊನ್ನಾಳಿ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
RELATED TOPICS:
English summary :Accident in Davanagere