Sat,Apr27,2024
ಕನ್ನಡ / English

ದತ್ತಪೀಠದಲ್ಲಿ ಮಾಂಸಹಾರ ಸೇವನೆ, ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕು: ಸಿ.ಟಿ. ರವಿ | JANATA NEWS

16 May 2022
2917

ಕಲಬುರಗಿ : ಚಿಕ್ಕಮಗಳೂರಿನ ದತ್ತಪೀಠದಲ್ಲಿ ಹೋಮ - ಹವನ ನಡೆಯುವ ಜಾಗದಲ್ಲಿ ಮಾಂಸಾಹಾರ ಅಡುಗೆ ಮಾಡಿ, ಸೇವನೆ ಮಾಡಿರುವ ವಿಡಿಯೋವೊಂದು ವೈರಲ್‌, ಈ ವಿಚಾರವಾಗಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಪ್ರತಿಕ್ರಿಯೆ ನೀಡಿದ್ದಾರೆ.

ಕಲಬುರಗಿಯಲ್ಲಿ ಮಾತನಾಡಿದ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ, ಮಾಂಸಹಾರ ಸೇವನೆ ಬಗ್ಗೆ ನಿನ್ನೆ ರಾತ್ರಿ ನನ್ನ ಗಮನಕ್ಕೆ ಬಂದಿದೆ. ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಸರ್ಕಾರಕ್ಕೆ ಅಗ್ರಹಿಸಿದರು.

ದತ್ತಪೀಠ ಆವರಣದಲ್ಲಿ ಮಾಂಸಾಹಾರ ಅಡುಗೆ ಮಾಡಿ,‌ ಸೇವನೆ ಮಾಡಿರುವ ವಿಚಾರ ನಿನ್ನೆ ರಾತ್ರಿ ನನ್ನ ಗಮನಕ್ಕೆ ಬಂದಿದೆ. ಅಲ್ಲಿನ ಜಿಲ್ಲಾಧಿಕಾರಿಗಳಿಗೆ ವಿಡಿಯೋ ಕಳುಹಿಸಿ ಮಾಹಿತಿ ಕೇಳಿದ್ದೇನೆ. ಮಾಂಸಾಹಾರ ಮಾಡಿರೋದು ಅಕ್ಷಮ್ಯ ಅಪರಾಧ, ಅಲ್ಲಿನ ಜವಾಬ್ದಾರಿ ಯಾರಿಗೆ ನೀಡಲಾಗಿತ್ತೋ ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು. ಯಾರ ಕುಮ್ಮಕ್ಕು ಇದ್ದರೂ ಕೂಡ ಅಲ್ಲಿ ಆ ರೀತಿ ಆಗದಂತೆ ನೋಡಿಕೊಳ್ಳುವುದು ಜಿಲ್ಲಾಡಳಿತ‌ದ ಜವಾಬ್ದಾರಿ ಆಗಿತ್ತು ಎಂದರು.

ಇದನ್ನು ನಿಯಂತ್ರಿಸುವ ಜವಾಬ್ದಾರಿ ಹೊತ್ತವರು ಈ ಕುರಿತು ಉತ್ತರಿಸಬೇಕು. ಪೀಠದಿಂದ ಮುನ್ನೂರು ಮೀಟರ್ ‌ವ್ಯಾಪ್ತಿಯಲ್ಲಿ ಮಾಂಸಾಹಾರ, ಪ್ರಾಣಿ ಬಲಿಗೆ ನಿಷೇಧವಿದೆ. ಆದರೂ ಕೂಡ ಹೇಗೆ ಅಲ್ಲಿ ಪ್ರಾಣಿಬಲಿ, ಮಾಂಸಾಹಾರ ಮಾಡಿದ್ದಾರೆ ಅನ್ನೋ ಬಗ್ಗೆ ತನಿಖೆಯಾಗಬೇಕು. ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕು. ಮುಂದೆ ಈ ರೀತಿ ನಡೆಯದಂತೆ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಚಿಕ್ಕಮಗಳೂರು ತಾಲೂಕಿನಲ್ಲಿರುವ ವಿವಾದಿತ ಸ್ಥಳ ದತ್ತಪೀಠದಲ್ಲಿ, ಮತ್ತೆ ಉದ್ವಿಗ್ನ ಪರಿಸ್ಥಿತಿ ಉಂಟಾಗಿದ್ದು, ಹೋಮ ಹವನ ನಡೆಯುವ ಸ್ಥಳದಲ್ಲಿ ಮಾಂಸಹಾರ ಸೇವನೆ ನಡೆದಿದೆ. ಗೋರಿ ಪೂಜೆ ಮಾಡಿರುವ ಆರೋಪವೂ ಕೇಳಿಬಂದಿದೆ. ಈ ಸಂಬಂಧ ಹಿಂದೂಪರ ಸಂಘಟನೆಗಳಿಂದ ತೀವ್ರ ಆಕ್ರೋಶ ವ್ಯಕ್ತವಾಗಿದೆ.

RELATED TOPICS:
English summary :Drinking meat at Datta Peeta, guilty should be punished: Ct. Ravi

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ, ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ನ್ಯೂಸ್ MORE NEWS...