Wed,May08,2024
ಕನ್ನಡ / English

ಎಗ್​ರೈಸ್​ನಲ್ಲಿ ವಿಷ ಬೆರೆಸಿದ ತಂದೆ, ಮಗ ಬಲಿ, ಮಗಳ ಸ್ಥಿತಿ ಚಿಂತಾಜನಕ | JANATA NEWS

09 Jun 2022
4044

ವಿಜಯಪುರ : ತಂದೆಯೇ ಮಕ್ಕಳಿಗೆ ಅನ್ನದಲ್ಲಿ ವಿಷವಿಟ್ಟು ಘಟನೆ ತಾಳಿಕೋಟೆ ತಾಲೂಕಿನ ಗೋನಾಳ ಎಸ್​.ಎಚ್​. ಗ್ರಾಮದಲ್ಲಿ ನಡೆದಿದೆ.

ಚಂದ್ರಶೇಖರ ಅರಸನಾಳ ಎಂಬಾತ ಕೃತ್ಯ ಎಸಗಿದ್ದು, ಮಗ ಶಿವರಾಜ ಸಾವನ್ನಪ್ಪಿದ್ದು, 5 ವರ್ಷದ ಮಗಳು ರೇಣುಕಾ ಗಂಭೀರ ಸ್ಥಿತಿಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ. ಈ ದುಸ್ಥಿತಿಗೆ ನನ್ನ ಗಂಡ ಚಂದ್ರಶೇಖರ ನೀಡಿದ ವಿಷ ಬೆರಸಿದ ಅನ್ನ ತಿಂದದ್ದೇ ಕಾರಣ ಎಂದು ಮಕ್ಕಳ ತಾಯಿ ಸಾವಿತ್ರಿ ದೂರು ನೀಡಿದ್ದಾರೆ.

ನಿಡಗುಂದಿ ತಾಲೂಕಿನ ಇಟಗಿ ಗ್ರಾಮದ ಚಂದ್ರಶೇಖರ ಶಿವಪ್ಪ ಅರಸನಾಳ ಮತ್ತು ಸಾವಿತ್ರಿ ಅವರ ಮದುವೆ ಕೆಲ ವರ್ಷಗಳ ಹಿಂದೆ ಮದುವೆ ಆಗಿತ್ತು. ದಂಪತಿಗೆ ಇಬ್ಬರು ಮಕ್ಕಳು ಜನಿಸಿದ್ದರು. ಆದರೆ ಗಂಡ ಸಾಲದ ಸುಳಿಗೆ ಸಿಲುಕಿದ್ದ. ಕಳೆದ 2 ತಿಂಗಳ ಹಿಂದೆ ಮಕ್ಕಳನ್ನು ಸಾವಿತ್ರಿ ತನ್ನ ತವರು ಮನೆಗೆ ಬಿಟ್ಟಿದ್ದಳು. ಅತ್ತ ಸಾಲ ತೀರಿಸಲು ಜಮೀನು ಮಾರಬೇಕು ಎಂದು ಚಂದ್ರಶೇಖರ ಒತ್ತಡ ಹಾಕುತ್ತಿದ್ದ.

ವಿಪರೀತ ಸಾಲ ಮಾಡಿಕೊಂಡಿದ್ದ ನನ್ನ ಪತಿ ಚಂದ್ರಶೇಖರ ಸ್ವಗ್ರಾಮ ನಿಡಗುಂದಿ ತಾಲೂಕಿನ‌ ಇಟಗಿ ಗ್ರಾಮದಲ್ಲಿ ಇರುವ ಜಮೀನು‌ ಮಾರಾಟಕ್ಕೆ ಮುಂದಾಗಿದ್ದ. ಮಾಡಿದ ಸಾಲವನ್ನು ದುಡಿದು ತೀರಿಸೋಣ ಜಮೀನು ಮಾರುವುದು ಬೇಡ ಎಂದು ವಿರೋಧಿಸಿದ್ದೆ. ತಾಳಿಕೋಟೆ ತಾಲೂಕಿನ ಗೋನಾಳ ಎಸ್.ಎಚ್. ಗ್ರಾಮದಲ್ಲಿದ್ದಾಗ ಜೂ. 2 ರಂದು ತನ್ನ ಸಹೋದರರಾದ ಬಸಪ್ಪ, ಗುಂಡಪ್ಪ, ಮೌನೇಶ ಜೊತೆ ಅಲ್ಲಿಗೆ ಆಗಮಿಸಿದ್ದ ಪತಿ ಚಂದ್ರಶೇಖರ ಜಮೀನು ಮಾರಲು ನನ್ನ‌ ಮನವೊಲಿಸಲು ಮುಂದಾದರೂ ನಾನು ಒಪ್ಪಿರಲಿಲ್ಲ. ಹೀಗಾಗಿ ನನ್ನ ಭಾವಂದಿರು ಊರಿಗೆ ಮರಳಿದರೂ ಪತಿ ನನ್ನ‌ ತವರೂರಲ್ಲೇ ಉಳಿದಿದ್ದರು ಎಂದು ಹೇಳಿಕೊಂಡಿದ್ದಾರೆ.

ಜಮೀನು‌ ಮಾರಲು ಒಪ್ಪದ ಕಾರಣಕ್ಕೆ ಸಿಟ್ಟಿನಲ್ಲಿ ನನ್ನನ್ನು ಹಾಗೂ ಮಕ್ಕಳನ್ನು ಕೊಲೆ ಮಾಡುವ ಸಂಚು ರೂಪಿಸಿದ ಪತಿ ಚಂದ್ರಶೇಖರ ಸಂಜೆ ಹೊರಗಿನಿಂದ ವಿಷ ಹಾಕಿದ ಎಗ್ ರೈಸ್ ತಂದು‌ ಕೊಟ್ಟಿದ್ದ. ಇದನ್ನು ಮಕ್ಕಳಿಗೆ ತಿನ್ನಿಸಿದ‌ ಕಾರಣ ಅಸ್ವಸ್ಥತೆ ಕಾಣಿಸಿಕೊಂಡಿತ್ತು. ಕೂಡಲೇ ಮುದ್ದೇಬಿಹಾಳ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಿಸದೇ ಎರಡೂವರೆ ವರ್ಷದ ಮಗ ಶಿವರಾಜ ಮೃತಪಟ್ಟಿದ್ದಾನೆ.

ಮಗನ ಸಾವಿನ ಬಗ್ಗೆ ಅನುಮಾನ ವ್ಯಕ್ತಪಡಿಸಿದ ತಾಯಿ ಸಾವಿತ್ರಿ, ಜೂ.3ರಂದೇ ಮಗನ ಸಾವಿನಲ್ಲಿ ಸಂಶಯವಿದೆ ಎಂದು ದೂರು ನೀಡಿದ್ದಳು. ಸಾವಿತ್ರಿ ತವರೂರು ಗೋನಾಳಕ್ಕೆ ಹೋಗಿದ್ದಳು. ಆ ವೇಳೆ ಮನೆಗೆ ಬಂದ ಚಂದ್ರಶೇಖರ, ಸಾಲಕ್ಕೆ ಅಂಜಿ ಸಾಯಲು ನಿರ್ಧರಿಸಿದೆ. ಅದಕ್ಕಾಗಿ ಎಲ್ಲರೂ ಒಟ್ಟಿಗೆ ಸಾಯಲೆಂದು ಎಗ್​ರೈಸ್​ನಲ್ಲಿ ವಿಷ ಬೆರೆಸಿದ್ದೆ ಎಂದು ತಪ್ಪೊಪ್ಪಿಕೊಂಡಿದ್ದಾನೆ. ಜೂ.6ರಂದು ತಾಳಿಕೋಟೆ ಠಾಣೆಯಲ್ಲಿ ಚಂದ್ರಶೇಖರ್​ ವಿರುದ್ಧ ಎಫ್​ಐಆರ್​ ದಾಖಲಾಗಿದೆ.

RELATED TOPICS:
English summary :Father poisoned in egg rice

ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನ್ಯೂಸ್ MORE NEWS...