ಮದುವೆಗೆ ತೆರಳುತ್ತಿದ್ದ ಕಾರಿಗೆ ಲಾರಿ ಡಿಕ್ಕಿ -ಮಹಿಳೆ ಸ್ಥಳದಲ್ಲೇ ಸಾವು, ನಾಲ್ವರು ಗಂಭೀರ | JANATA NEWS
ಕಾರವಾರ : ಮದುವೆಗೆ ತೆರಳುತ್ತಿದ್ದ ಓಮಿನಿ ಕಾರು ಲಾರಿಗೆ ಡಿಕ್ಕಿಯಾಗಿ ಮಹಿಳೆ ಸ್ಥಳದಲ್ಲಿಯೇ ಮೃತಪಟ್ಟು ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಅಂಕೋಲಾ ತಾಲೂಕಿನ ಹೊನ್ನಳ್ಳಿ ಬಳಿ ನಡೆದಿದೆ.
ಅಪಘಾತದಲ್ಲಿ ಯಲ್ಲಾಪುರದ ಪ್ರತಿಷ್ಠಿತ ಹೊಟೇಲ್ ಮಾಲಕರ ಪತ್ನಿ ಸಹನಾ ಮಂಜುನಾಥ ಶಾನಭಾಗ (40) ಎಂಬುವರು ಮೃತಪಟ್ಟಿದ್ದಾರೆ.
ಘಟನೆಯಲ್ಲಿ ಸ್ನೇಹಾ,(21) ಪ್ರೇಕ್ಷಾ (19) ಅನೀತಾ ಆನಂದು ಶಾನಭಾಗ (45 ) ಅಚ್ಯುತ ನಾಗೇಶ ಶಾನಭಾಗ ( 53) ಗಾಯಗೊಂಡಿದ್ದಾರೆ.
ಅಂಕೋಲಾ ತಾಲೂಕಿನ ಮಾದನಗೇರಿಯಲ್ಲಿ ನಡೆಯುತ್ತಿದ್ದ ಸಂಬಂಧಿಕರ ಮದುವೆಗೆ ಕುಟುಂಬ ಸಮೇತ ತೆರಳುತ್ತಿದ್ದಾಗ ರಾಷ್ಟ್ರೀಯ ಹೆದ್ದಾರಿ 63 ರಲ್ಲಿ ನಡೆದಿದೆ.
ಗಾಯಾಳುಗಳನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಂಕೋಲಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
English summary : Lorry collides with car - death on the spot, four serious