Sat,May18,2024
ಕನ್ನಡ / English

ಬಿಜೆಪಿ ಅಧಿಕಾರ ಪಿಪಾಸು, ಅನ್ಯಪಕ್ಷ ಅಧಿಕಾರದಲ್ಲಿರುವುದು ಆ ಪಕ್ಷಕ್ಕೆ ಅಪಥ್ಯ! | JANATA NEWS

25 Jun 2022
3621

ಬೆಂಗಳೂರು : ಬಿಜೆಪಿ ಅಧಿಕಾರ ಪಿಪಾಸು, ಅನ್ಯಪಕ್ಷ ಅಧಿಕಾರದಲ್ಲಿರುವುದು ಆ ಪಕ್ಷಕ್ಕೆ ಅಪಥ್ಯ ಎಂದು ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ ಕಿಡಿಕಾರಿದ್ದಾರೆ. ಸರಣಿ ಟ್ವೀಟ್ ಮಾಡಿರುವ ಅವರು ಬಿಬಿಎಂಪಿ ವಾರ್ಡ್ ವಿಂಗಡಣೆ ನಡೆಯ ಕುರಿತು ಬಿಜೆಪಿ ವಿರುದ್ಧ ಕಿಡಿಕಾರಿದ್ದಾರೆ.

ಬಿಜೆಪಿ ಅಧಿಕಾರ ಪಿಪಾಸು. ಅನ್ಯಪಕ್ಷ ಅಧಿಕಾರದಲ್ಲಿರುವುದು ಆ ಪಕ್ಷಕ್ಕೆ ಅಪಥ್ಯ. ತನ್ನ ಕೆಟ್ಟ ಆಡಳಿತಕ್ಕೆ ಬೇಸತ್ತು ಬೆಂಗಳೂರಿಗರು ಬೇರೆ ಪಕ್ಷಕ್ಕೆ ಎಲ್ಲಿ ಮತ ಹಾಕಿಬಿಟ್ಟಾರೋ ಎನ್ನುವ ಭೀತಿಯಿಂದ ಚುನಾವಣೆಯನ್ನೇ ನಡೆಸಲಿಲ್ಲ. ಕೋರ್ಟ್‌ ಚಾಟಿ ಬೀಸಿದ ಮೇಲೆ ಚುನಾವಣೆ ಎನ್ನುತ್ತಿರುವ ಸರಕಾರ, ಈಗ ವಾರ್ಡ್‌ ವಿಂಗಡಣೆಯ ನಾಟಕ ಅಡಿದೆ. ʼಕೋರ್ಟ್‌ ಹೇಳಿದರಷ್ಟೇ ಕೆಲಸʼ ಎನ್ನುವ ಚಾಳಿ ಬಿಜೆಪಿ ಸರಕಾರದ್ದು.

ನ್ಯಾಯಾಲಯದ ಅದೇಶವನ್ನೇ ಧಿಕ್ಕರಿಸಿ ನಡೆದ ಈ ನಿರ್ಲಜ್ಜ ಸರಕಾರಕ್ಕೆ ಜನಹಿತಕ್ಕಿಂತ ಪಕ್ಷಹಿತವೇ ಸರ್ವಸ್ವ. ವಾರ್ಡ್‌ ವಿಂಗಡಣೆ ಸ್ವರೂಪ ನೋಡಿದರೆ ಬಿಜೆಪಿಯ ಅಧಿಕಾರದ ವಿಕೃತಿ ಯಾವ ಮಟ್ಟದಲ್ಲಿದೆ ಎನ್ನುವುದು ಅರ್ಥವಾಗುತ್ತದೆ. ವಾರ್ಡ್ ವಿಂಗಡಣೆಯಲ್ಲಿ ಬೆಂಗಳೂರು ನಗರದ ಸಮಗ್ರತೆ, ಅನನ್ಯತೆಯನ್ನು ಕಡೆಗಣಿಸಲಾಗಿದೆ. ಬೆಂಗಳೂರು ಎಂದರೆ ಬಿಜೆಪಿ ಶಾಸಕರು ಪ್ರತಿನಿಧಿಸುವ ಕ್ಷೇತ್ರಗಳು ಮಾತ್ರವಲ್ಲ. ಇದು ಕೇವಲ ಬಿಜೆಪಿಯಿಂದ, ಬಿಜೆಪಿ ಶಾಸಕರಿಗಾಗಿ, ಬಿಜೆಪಿಯೇ ಮಾಡಿಕೊಂಡ ಮರು ವಿಂಗಡಣೆ ಎಂದು ಆರೋಪಿಸಿದ್ದಾರೆ.

ಐತಿಹಾಸಿಕ ವಾರ್ಡುಗಳ ಹೆಸರುಗಳನ್ನು ಬದಲಿಸಿ ನಾಡಪ್ರಭು ಕೆಂಪೇಗೌಡರು ಕಟ್ಟಿದ ಬೆಂಗಳೂರಿನ ಚರಿತ್ರೆಯ ಕುರುಹುಗಳನ್ನು ಅಳಿಸಿ ಹಾಕಿ ಪಠ್ಯಕ್ಕೆ ಅಪಚಾರ ಎಸಗಿದಂತೆ ನಾಡಪ್ರಭುಗಳು ಮತ್ತು ಮೈಸೂರು ಒಡೆಯರರ ಘನ ಕೀರ್ತಿಗೆ ಚ್ಯುತಿ ತರುವ ಹುನ್ನಾರ ಇದಷ್ಟೇ. ಬೆಂಗಳೂರು ಮಹಾನಗರದಲ್ಲಿ ಮೂಲಸೌಕರ್ಯ ಅಭಿವೃದ್ಧಿಯಾಗಬೇಕು ಎಂದರೆ ರಾಷ್ಟ್ರಪತಿಗಳು ಮತ್ತು ಪ್ರಧಾನಿ ಆಗಾಗ್ಗೆ ನಗರಕ್ಕೆ ಭೇಟಿ ನೀಡುತ್ತಿರಬೇಕು ಎಂದು ಹೈಕೋರ್ಟ್‌ ಛೀಮಾರಿ ಹಾಕಿದೆ. ನಗರದ ಜನರ ಬವಣೆಗೆ ಹಿಡಿದ ಕನ್ನಡಿ ಇದು ಎಂದಿದ್ದಾರೆ.

ಬೆಂಗಳೂರು ಮಹಾನಗರದಲ್ಲಿ ಮೂಲಸೌಕರ್ಯ ಅಭಿವೃದ್ಧಿಯಾಗಬೇಕು ಎಂದರೆ ರಾಷ್ಟ್ರಪತಿಗಳು ಮತ್ತು ಪ್ರಧಾನಿ ಆಗಾಗ್ಗೆ ನಗರಕ್ಕೆ ಭೇಟಿ ನೀಡುತ್ತಿರಬೇಕು ಎಂದು ಹೈಕೋರ್ಟ್‌ ಛೀಮಾರಿ ಹಾಕಿದೆ. ನಗರದ ಜನರ ಬವಣೆಗೆ ಹಿಡಿದ ಕನ್ನಡಿ ಇದು ಎಂದು ಟೀಕಿಸಿದ್ದಾರೆ.

ಮೊನ್ನೆಯಷ್ಟೇ ಪ್ರಧಾನಿ ಬಂದು ಹೋಗಿದ್ದಾರೆ. ಅದಕ್ಕಾಗಿ 23 ಕೋಟಿ ಖರ್ಚು ಮಾಡಿ ನಗರದ ರಸ್ತೆ ಗುಂಡಿ ಮುಚ್ಚಲಾಗಿದೆ. ಇದನ್ನು ಗಮನಿಸಿದರೆ ಪ್ರಧಾನಿ ನಗರದ ಬೇರೆ ಬೇರೆ ಮಾರ್ಗಗಳಲ್ಲಿ ಆಗಾಗ್ಗೆ ಸಂಚರಿಸಬೇಕು. ಆಗ ಅವರನ್ನು ಮೆಚ್ಚಿಸುವ ಸಲುವಾಗಿಯಾದರೂ ಅಧಿಕಾರಿಗಳು ಹಾಳಾಗಿರುವ ರಸ್ತೆಗಳನ್ನು ಸರಿಪಡಿಸಬಹುದು" ಎಂದು ಕೋರ್ಟ್ ಚಾಟಿ ಬೀಸಿದೆ.

ಇನ್ನು, ಪ್ರಧಾನಿಗಳಿಗಾಗಿ ಸಿದ್ಧಪಡಿಸಿದ ರಸ್ತೆಯೇ ಕುಸಿದುಬಿದ್ದಿದೆ. 40% ಕಮಿಷನ್‌ & ಕಳಪೆ ಕಾಮಗಾರಿಯ ಫಲಶ್ರುತಿ ಇದು. ದೇಶದ ಪ್ರಧಾನಿಯೇ ಸಂಚರಿಸಿದ ರಸ್ತೆಯೇ ಕಳಪೆ!! ಬಿಜೆಪಿ ಅಭಿವೃದ್ಧಿ ಮಾದರಿ ಎಂದರೆ ಇದೇನಾ? ಐಟಿ ಸಿಟಿಯ ಸ್ಥಿತಿ ಅಯ್ಯೋ ಎನ್ನುವಂತಿದೆ ಎಂದಿದ್ದಾರೆ.

RELATED TOPICS:
English summary :The BJP is in power, the party is not in the party

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
ಸಂಸದ ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ
ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ

ನ್ಯೂಸ್ MORE NEWS...