Fri,May10,2024
ಕನ್ನಡ / English

ಉತ್ತರ ಕನ್ನಡ ಜಿಲ್ಲೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ: ಇನ್ನೆಷ್ಟು ಜನರು ರಸ್ತೆಗಳ ಮೇಲೆಯೇ ಜೀವ ಕಳೆದುಕೊಳ್ಳಬೇಕು? | JANATA NEWS

25 Jul 2022
2321

ಉತ್ತರ ಕನ್ನಡ : ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಾಗಿ ಉತ್ತರ ಕನ್ನಡ ಜಿಲ್ಲೆಯ ಜನರು ನಡೆಸುತ್ತಿರುವ ಹೋರಾಟಕ್ಕೆ ನನ್ನ ಪರಿಪೂರ್ಣ ಬೆಂಬಲವಿದೆ ಮತ್ತು ಹೋರಾಟದಲ್ಲಿ ನಮ್ಮ ಪಕ್ಷವೂ ಜೊತೆಗೆ ನಿಲ್ಲುತ್ತದೆ. ವರ್ಷಗಳ ಕಾಲದ ನ್ಯಾಯಯುತವಾದ ಈ ಬೇಡಿಕೆಯನ್ನು ರಾಜ್ಯ ಬಿಜೆಪಿ ಸರ್ಕಾರ ಆದ್ಯತೆಯ ಮೇರೆಗೆ ಈಡೇರಿಸಬೇಕು ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಒತ್ತಾಯಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಆರೋಗ್ಯ ಸಚಿವ ಡಾ.ಕೆ ಸುಧಾಕರ್ ಅವರೇ ಖುದ್ದು ಕ್ರಮ ವಹಿಸಬೇಕು ಎಂದು ಆಗ್ರಹಿಸಿದ್ದಾರೆ.

ರಾಜ್ಯದ ಕೆಲವೆಡೆ ಮಾತ್ರ ಸುಸಜ್ಜಿತ ಆಸ್ಪತ್ರೆಗಳಿವೆ. ಬಹುತೇಕ ಜಿಲ್ಲೆಗಳಲ್ಲಿ ಇಲ್ಲ. ತುರ್ತು ಚಿಕಿತ್ಸೆ ಬೇಕೆಂದರೆ, ಬೆಂಗಳೂರು, ಹುಬ್ಬಳ್ಳಿ, ಮಂಗಳೂರು, ಮೈಸೂರು, ಬೆಳಗಾವಿಯಂತಹ ಕೆಲವಷ್ಟೇ ನಗರಗಳಲ್ಲಿ ಮಾತ್ರ ಲಭ್ಯವಿದೆ. ಜನ ಹೋಗುವುದು ಹೇಗೆ? ಆರೋಗ್ಯ ಸೌಲಭ್ಯದಲ್ಲಿ ಅಸಮಾನತೆ ರಾಜ್ಯಕ್ಕೆ ಭೂಷಣವಲ್ಲ ಎಂದು ಹೇಳಿದ್ದಾರೆ.

ಕೋವಿಡ್ ವೇಳೆ ಎಲ್ಲಾ ಸಮುದಾಯ ಕೇಂದ್ರ, ತಾಲೂಕು, ಜಿಲ್ಲಾ ಆಸ್ಪತ್ರೆಗಳನ್ನು ಮೇಲ್ದರ್ಜೆಗೇರಿಸುತ್ತೇವೆ ಎಂದು ಅಬ್ಬರಿಸಿ ಬೊಬ್ಬಿರಿದ ಸರ್ಕಾರ, ಕೋವಿಡ್ ಇಳಿದ ಮೇಲೆ ತಣ್ಣಗಾಗಿದೆ. ಆಕ್ಸಿಜನ್ ಘಟಕ, ವೆಂಟೆಲೇಟರ್ ಸೇರಿ ಖರೀದಿ ಮಾಡಿದ ವೈದ್ಯ ಪರಿಕರಗಳೆಲ್ಲ ಅನೇಕ ಕಡೆ ಧೂಳು ತಿನ್ನುತ್ತಿವೆ ಎಂದಿದ್ದಾರೆ.

ರಾಜ್ಯದಲ್ಲಿ ಇನ್ನೆಷ್ಟು ಆಂಬ್ಯುಲೆನ್ಸ್ ದುರಂತಗಳು ಆಗಬೇಕು? ಇನ್ನೆಷ್ಟು ಜನರು ರಸ್ತೆಗಳ ಮೇಲೆಯೇ ಜೀವ ಕಳೆದುಕೊಳ್ಳಬೇಕು? ಶಿರೂರು ಟೋಲ್ ಬಳಿ ಸಂಭವಿಸಿದ ಭೀಕರ ಅಪಘಾತದಿಂದ ಸರ್ಕಾರ ಕಣ್ತೆರೆಯಲೇಬೇಕು. ಆರೋಗ್ಯ ಸೌಲಭ್ಯ ಕಲ್ಪಿಸುವುದರ ಜೊತೆಗೆ ಇರುವ ವ್ಯವಸ್ಥೆಯ ಸಮರ್ಪಕ ನಿರ್ವಹಣೆ ಸರ್ಕಾರದ ಹೊಣೆ. ಆರೋಗ್ಯ ಎಲ್ಲರ ಹಕ್ಕು, ನಾನು ರೂಪಿಸಿರುವ ಪಂಚರತ್ನ ಕಾರ್ಯಕ್ರಮದಲ್ಲಿ ಆರೋಗ್ಯವೂ ಪ್ರಮುಖ ಕಾರ್ಯಕ್ರಮ. ಜನತೆಗೆ ಅತ್ಯುತ್ತಮ ಆರೋಗ್ಯ ಸೌಲಭ್ಯ ಕೊಡುವುದು ನನ್ನ ಗುರಿ ಎಂದು ಕುಮಾರಸ್ವಾಮಿ ಹೇಳಿದ್ದಾರೆ.

RELATED TOPICS:
English summary :HDK support for Uttara Kannada district peoples super specialty hospital struggle

ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ
ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ
ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ
ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ನ್ಯೂಸ್ MORE NEWS...