Sat,Apr20,2024
ಕನ್ನಡ / English

ಹನಿಟ್ರ್ಯಾಪ್ ಪ್ರಕರಣ: ಉದ್ಯಮಿಯಿಂದ ಲಕ್ಷ ಲಕ್ಷ ವಸೂಲಿ, ಯುವತಿ ಅರೆಸ್ಟ್ | JANATA NEWS

22 Aug 2022
2554

ಮಂಡ್ಯ : ಚಿನ್ನಾಭರಣ ಅಂಗಡಿ ಮಾಲೀಕನನ್ನು ಹನಿಟ್ರಾಪ್‌ಗೆ ಒಳಪಡಿಸಿ 50 ಲಕ್ಷ ರೂ. ವಸೂಲಿ ಮಾಡಿರುವ 6 ತಿಂಗಳ ಬಳಿಕ ಮಂಡ್ಯ ಪಶ್ಚಿಮ ಪೊಲೀಸ್ ಠಾಣೆಯಲ್ಲಿ ಆರೋಪಿಗಳ ವಿರುದ್ಧ ದೂರು ದಾಖಲಿಸಿದ್ದಾರೆ.

ಜಗನ್ನಾಥಶೆಟ್ಟಿ ಎಂಬುವರೇ ಹನಿಟ್ರ್ಯಾಪ್‌ಗೆ ಒಳಗಾಗಿ 50 ಲಕ್ಷ ಕಳೆದುಕೊಂಡವರಾಗಿದ್ದಾರೆ. ಸುಭಾಷ್‌ನಗರ ಬಡಾವಣೆಯ ಸಲ್ಮಾಬಾನು, ಜಯಂತ್ ಹಾಗೂ ಇತರೆ ನಾಲ್ಕು ಮಂದಿ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ಫೆಬ್ರವರಿ 26 ರಂದು ಮೈಸೂರಿನಲ್ಲಿ ಈ ಕೃತ್ಯ ನಡೆದಿದ್ದು, ಮಂಗಳೂರಿಗೆ ತೆರಳಲು ಆ ದಿನ ರಾತ್ರಿ ಮಂಡ್ಯದಲ್ಲಿ ಬಸ್ಸಿಗಾಗಿ ಜಗನ್ನಾಥ್ ಶೆಟ್ಟಿ ಕಾಯುತ್ತಿದ್ದರು. ಈ ವೇಳೆ ಮೈಸೂರಿಗೆ ಡ್ರಾಪ್ ಕೊಡುವುದಾಗಿ ತಿಳಿಸಿ ನಾಲ್ವರು ಕಾರಿನಲ್ಲಿ ಅವರನ್ನು ಕರೆದೊಯ್ದಿದ್ದಾರೆ.

ಸ್ವಲ್ಪ ಪರಿಚಯವಿದ್ದ ಕಾರಣ ಜಗನ್ನಾಥ್ ಕಾರಿನಲ್ಲಿ ಹೋಗಿದ್ದಾರೆ . ಮೈಸೂರು ಸಿಟಿ ತಲುಪುತ್ತಿದ್ದಂತೆ ಕಾರಿನಲ್ಲಿದ್ದವರು ತಮ್ಮ ಬಳಿ ಇದ್ದ ಚಿನ್ನದ ಬಿಸ್ಕೇಟ್ ಮಾದರಿಯನ್ನು ತೆಗೆದು ಇದು ಚಿನ್ನದ ಬಿಸ್ಕೆಟ್ಟಾ ಎಂದು ಪ್ರಶ್ನಿಸಿದರು. ಈ ಬಗ್ಗೆ ಪರಿಶೀಲಿಸಬೇಕು ಎಂದು ತಿಳಿಸಿದಾಗ ಇಲ್ಲೇ ಬಂದು ನೋಡಿ ತಿಳಿಸಿ ಹೋಗುವಂತೆ ಬಲವಂತ ಮಾಡಿದ್ದಾರೆ.

ಬಳಿಕ ಅವರು ಖಾಸಗಿ ಹೊಟೇಲೊಂದರ ಕೊಠಡಿಗೆ ಕರೆದೊಯ್ದರು. ರೂಮ್‍ನಲ್ಲಿ ಯುವತಿ ಜೊತೆ ವಿಡಿಯೋ ಚಿತ್ರೀಕರಿಸಿಕೊಂಡು ಬಳಿಕ 4 ಕೋಟಿ ರೂಪಾಯಿಗೆ ಬೇಡಿಕೆ ಇಟ್ಟಿದ್ದಾರೆ.

ಕೊನೆಗೆ 50 ಲಕ್ಷ ಕೊಟ್ಟು ಅಲ್ಲಿಂದ ಜಗನ್ನಾಥ್ ತೆರಳಿದ್ದರು. ಇಷ್ಟೆಲ್ಲಾ ಆದರೂ ಮತ್ತೆ ಈಗ ಹಣಕ್ಕಾಗಿ ಆರೋಪಿಗಳು ಪೀಡಿಸುತ್ತಿದ್ದು, ಕೊಲೆ ಮಾಡುವುದಾಗಿ ಬೆದರಿಕೆಯೊಡ್ಡಿದೆ. ಇದರಿಂದ ಬೇಸತ್ತ ಜಗನ್ನಾಥ್ ಶೆಟ್ಟಿ ಅವರು 6 ತಿಂಗಳ ಬಳಿಕ ಮಂಡ್ಯ ಪಶ್ಚಿಮ ಪೊಲೀಸ್ ಠಾಣೆಯಲ್ಲಿ ಆರೋಪಿಗಳ ವಿರುದ್ಧ ದೂರು ದಾಖಲಿಸಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಸಲ್ಮಾ ಬಾನು ಅವರನ್ನು ಬಂಧಿಸಿರುವ ಪೊಲೀಸರು ಆಕೆಯನ್ನು ನ್ಯಾಯಾಧೀಶರ ಮುಂದೆ ಹಾಜಪಡಿಸಿ ಹೆಚ್ಚಿನ ವಿಚಾರಣೆಗಾಗಿ ಪೊಲೀಸ್ ವಶಕ್ಕೆ ಪಡೆಯಲಾಗಿದೆ.

RELATED TOPICS:
English summary :Honeytrap case: Millions recovered from businessman, young woman arrested

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ
ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ
ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ
ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ
ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ
ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ
ಪ್ರಧಾನಿ ಮೋದಿ ಬೆಂಬಲಿಸಿ ಮಹಾರಾಷ್ಟ್ರ ರ್ಯಾಲಿಯಲ್ಲಿ ಎಂಎನ್‌ಎಸ್ ಅಧ್ಯಕ್ಷ ರಾಜ್ ಠಾಕ್ರೆ
ಪ್ರಧಾನಿ ಮೋದಿ ಬೆಂಬಲಿಸಿ ಮಹಾರಾಷ್ಟ್ರ ರ್ಯಾಲಿಯಲ್ಲಿ ಎಂಎನ್‌ಎಸ್ ಅಧ್ಯಕ್ಷ ರಾಜ್ ಠಾಕ್ರೆ
ಕಾಂಗ್ರೆಸ್‌ನಿಂದ ಮಹಿಳೆಯರ ಗೌರವ ಮತ್ತು ಘನತೆಗೆ ಧಕ್ಕೆ : ಖರ್ಗೆ, ಸುರ್ಜೇವಾಲಾ ಗೆ ಚುನಾವಣಾ ಆಯೋಗ ಶೋಕಾಸ್ ನೋಟಿಸ್
ಕಾಂಗ್ರೆಸ್‌ನಿಂದ ಮಹಿಳೆಯರ ಗೌರವ ಮತ್ತು ಘನತೆಗೆ ಧಕ್ಕೆ : ಖರ್ಗೆ, ಸುರ್ಜೇವಾಲಾ ಗೆ ಚುನಾವಣಾ ಆಯೋಗ ಶೋಕಾಸ್ ನೋಟಿಸ್
ಕಾಂಗ್ರೆಸ್ ಪಕ್ಷದ ಪ್ರಣಾಳಿಕೆ ಸ್ವಾತಂತ್ರ್ಯ ಪೂರ್ವದ ಮುಸ್ಲಿಂ ಲೀಗ್‌ನ ಮನಸ್ಥಿತಿ ಹೊಂದಿದೆ - ಪ್ರಧಾನಿ ಮೋದಿ
ಕಾಂಗ್ರೆಸ್ ಪಕ್ಷದ ಪ್ರಣಾಳಿಕೆ ಸ್ವಾತಂತ್ರ್ಯ ಪೂರ್ವದ ಮುಸ್ಲಿಂ ಲೀಗ್‌ನ ಮನಸ್ಥಿತಿ ಹೊಂದಿದೆ - ಪ್ರಧಾನಿ ಮೋದಿ
ಲೋಕಸಭಾ ಚುನಾವಣೆ ಪ್ರಚಾರ ಚುರುಕು : ಚಾಮರಾಜನಗರದಲ್ಲಿ 98.52 ಕೋಟಿ ರೂಪಾಯಿ ಮೌಲ್ಯದ ಅಕ್ರಮ ಮದ್ಯ ವಶ
ಲೋಕಸಭಾ ಚುನಾವಣೆ ಪ್ರಚಾರ ಚುರುಕು : ಚಾಮರಾಜನಗರದಲ್ಲಿ 98.52 ಕೋಟಿ ರೂಪಾಯಿ ಮೌಲ್ಯದ ಅಕ್ರಮ ಮದ್ಯ ವಶ
ಬಿಜೆಪಿ ಸೇರುವ ನಿರ್ಧಾರ ಘೋಷಿಸಿದ ಮಂಡ್ಯ ಸಂಸದೆ ಸುಮಲತಾ ಅಂಬರೀಶ್ : ಮಂಡ್ಯ ಚುನಾವಣೆಯಲ್ಲಿ ಎಚ್ಡಿಕೆ  ಬಲವರ್ಧನೆ
ಬಿಜೆಪಿ ಸೇರುವ ನಿರ್ಧಾರ ಘೋಷಿಸಿದ ಮಂಡ್ಯ ಸಂಸದೆ ಸುಮಲತಾ ಅಂಬರೀಶ್ : ಮಂಡ್ಯ ಚುನಾವಣೆಯಲ್ಲಿ ಎಚ್ಡಿಕೆ ಬಲವರ್ಧನೆ

ನ್ಯೂಸ್ MORE NEWS...