Thu,Apr25,2024
ಕನ್ನಡ / English

ಅಕ್ರಮ ಆಸ್ತಿ ಗಳಿಕೆ: ನಿವೃತ್ತ ಸಾರಿಗೆ‌ ಅಧಿಕಾರಿಗೆ ನಾಲ್ಕು ವರ್ಷ ಶಿಕ್ಷೆ, 63 ಲಕ್ಷ ರೂ ದಂಡ | JANATA NEWS

21 Sep 2022
2607

ಬೆಳಗಾವಿ : ಅಕ್ರಮ ಆಸ್ತಿ ಸಂಪಾದಿಸಿದ ನಿವೃತ್ತ ಸಾರಿಗೆ ಅಧಿಕಾರಿಗೆ ನಾಲ್ಕು ವರ್ಷ ಕಠಿಣ ಶಿಕ್ಷೆ ಹಾಗೂ 63 ಲಕ್ಷ ರೂ ದಂಡ ವಿಧಿಸಿ ಬೆಳಗಾವಿಯ ಲೋಕಾಯುಕ್ತ ಕೋರ್ಟ್ ಮಂಗಳವಾರ ತೀರ್ಪು ನೀಡಿದೆ.

ಕೋಲಾರ ಮೂಲದ ಬೆಳಗಾವಿಯ ಆಂಜನೇಯ ನಗರ ನಿವಾಸಿ ಪಿ. ಶಾಂತಕುಮಾರ್ ಶಿಕ್ಷೆಗೆ ಒಳಗಾದವರು. ಬೀದರ್ ಜಿಲ್ಲೆಯ ಹುಮನಾಬಾದ್ ಸಹಾಯಕ ಪ್ರಾದೇಶಿಕ ಸಾರಿಗೆ ಅಧಿಕಾರಿ ಆಗಿದ್ದಾಗ ಅಕ್ರಮವಾಗಿ ಅಪಾರ ಆಸ್ತಿ ಸಂಪಾದಿಸಿದ್ದರು. ಈ ಬಗ್ಗೆ ಮಾಹಿತಿ ಕಲೆಹಾಕಿದ್ದ ಅಂದಿನ ಬೆಳಗಾವಿ ಲೋಕಾಯುಕ್ತ ಇನ್ಸ್‌ಪೆಕ್ಟರ್ ಆರ್. ಕೆ ಪಾಟೀಲ್ 2010ರ ಮೇ 3 ರಂದು ಪ್ರಕರಣ ದಾಖಲಿಸಿದ್ದರು.

ಶಾಂತಕುಮಾರನು ಬೆಳಗಾವಿಯ ಆಂಜನೇಯ ನಗರದಲ್ಲಿ ಹೊಂದಿದ ಮನೆ ಹಾಗೂ ಹುಮನಾಬಾದ್‌ ಕಚೇರಿ ಮೇಲೆ ದಾಳಿ ಮಾಡಿದ ಅಧಿಕಾರಿಗಳಿಗೆ 1.14 ಕೋಟಿ ಆಸ್ತಿ ಸಿಕ್ಕಿತ್ತು. ಲೋಕಾಯುಕ್ತ ಇನ್ಸ್​ಪೆಕ್ಟರ್‌ ಆಗಿದ್ದ ಆರ್‌. ಬಿ ಹವಾಲ್ದಾರ ಅವರು ದೋಷಾರೋಪ ಪಟ್ಟಿ ಸಲ್ಲಿಸಿದ್ದರು.

ಪ್ರಕರಣದ ‌ವಾದ-ಪ್ರತಿವಾದ ಆಲಿಸಿದ್ದ ನ್ಯಾಯಾಧೀಶ ಮೋಹನ ಪ್ರಭು ವಿಚಾರಣೆ ನಡೆಸಿದರು. ಇದರಲ್ಲಿ 63 ಲಕ್ಷ ರೂ. ಹಣವನ್ನು ಭ್ರಷ್ಟಾಚಾರದ ಹಾಗೂ ಅಕ್ರಮವಾಗಿ ಸಂಪಾದಿಸಿರುವ ಹಿನ್ನೆಲೆಯಲ್ಲಿ ಶಾಂತಕುಮಾರ್‌ಗೆ 4 ವರ್ಷ ಕಠಿಣ ಶಿಕ್ಷೆ ಹಾಗೂ 63 ಲಕ್ಷ ದಂಡ ವಿಧಿಸಿ ಕೋರ್ಟ್ ಶಿಕ್ಷೆಯ ಪ್ರಮಾಣವನ್ನು ಪ್ರಕಟಿಸಿದೆ.

RELATED TOPICS:
English summary :Illegal wealth gain: Retired transport officer sentenced to four years, fined Rs 63 lakh

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ

ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ

ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ

ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ

ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ

ನ್ಯೂಸ್ MORE NEWS...