Sat,Apr27,2024
ಕನ್ನಡ / English

ಸಿ ಪಿ ಯೋಗೇಶ್ವರ್ ಮೇಲೆ ಮೊಟ್ಟೆ, ಕಲ್ಲು ಎತ, ಜೆಡಿಎಸ್ ಕಾರ್ಯಕರ್ತರು ವಶಕ್ಕೆ | JANATA NEWS

01 Oct 2022
1929

ಚನ್ನಪಟ್ಟಣ : ಕಾಮಗಾರಿಗಳ ಶಂಕುಸ್ಥಾಪನೆಗೆ ಆಗಮಿಸಿದ್ದ ಬಿಜೆಪಿ ವಿಧಾನ ಪರಿಷತ್ ಸದಸ್ಯ ಸಿ.ಪಿ. ಯೋಗೇಶ್ವರ್ ವಿರುದ್ಧ ಶಿಷ್ಟಾಚಾರ ಉಲ್ಲಂಘಿಸಿದ್ದಾರೆ ಎಂದು ಆರೋಪಿಸಿ ಜೆಡಿಎಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿ, ಅವರ ಕಾರಿಗೆ ಮೊಟ್ಟೆ ಎಸೆದಿರುವ ಘಟನೆ ನಡೆದಿದೆ.

ಚನ್ನಪಟ್ಟಣದಲ್ಲಿ ಅಭಿವೃದ್ದಿ ವಿಚಾರಕ್ಕೆ ಸಂಬಂಧಿಸಿದಂತೆ ಜೆಡಿಎಸ್ ಹಾಗೂ ಬಿಜೆಪಿ ಕಾರ್ಯಕರ್ತರ ನಡುವೆ ರಾಜಕೀಯ ಜೋರಾಗಿದೆ. ಬೈರಾಪಟ್ಟಣ ಗ್ರಾಮದಲ್ಲಿ ಜೆಡಿಎಸ್ ಹಾಗೂ ಬಿಜೆಪಿ ಕಾರ್ಯಕರ್ತರ ನಡುವಿನ ಗಲಾಟೆ ವಿಕೋಪಕ್ಕೆ ತೆರಳಿದ್ದು, ಸಿ ಪಿ ಯೋಗೇಶ್ವರ್ ಮೇಲೆ ಮೊಟ್ಟೆ ಹಾಗೂ ಕಲ್ಲನ್ನು ಜೆಡಿಎಸ್ ಕಾರ್ಯಕರ್ತರು ಎಸೆದಿದ್ದಾರೆ. ಇದನ್ನು ನಿಯಂತ್ರಿಸಲು ಪೊಲೀಸರು ಲಾಠಿ ಚಾರ್ಜ್​ ನಡೆಸಿದ್ದಾರೆ.

ಇಂದು ಜಿಲ್ಲಾ ಉಸ್ತುವಾರಿ ಸಚಿವ ಡಾ.ಅಶ್ವತ್ಥ್​ ನಾರಾಯಣ್ ಹಾಗೂ ವಿಧಾನ‌ ಪರಿಷತ್ ಶಾಸಕರಾದ ಸಿ.ಪಿ. ಯೋಗೇಶ್ವರ್ ಕಾಂಕ್ರೀಟ್ ರಸ್ತೆ ಕಾಮಗಾರಿಯ ಭೂಮಿ ಪೂಜೆ ನೆರವೇರಿಸಲು ಸಿದ್ಧತೆ ಮಾಡಿಕೊಂಡಿದ್ದರು.

ತಾಲೂಕಿನ ರಾಂಪುರ ಗ್ರಾಮದಲ್ಲಿ ಮೊದಲು‌ ಕಾರ್ಯಕ್ರಮಕ್ಕೆ ವೇದಿಕೆ ಸಜ್ಜುಗೊಳಿಸಿ ಉಳಿದಂತೆ ವಿವಿಧ ಗ್ರಾಮಗಳ ಕಾಂಕ್ರೀಟ್ ರಸ್ತೆ ಅಭಿವೃದ್ಧಿಗೆ ಯೋಜನೆ ರೂಪಿಸಲಾಗಿತ್ತು. ಈ ಅನುದಾನ ತಂದವರು ನಾವು ಎಂದು ಜೆಡಿಎಸ್ ಹಾಗೂ ಬಿಜೆಪಿ ಪೈಪೋಟಿಗೆ ಬಿದ್ದಿರುವುದು ತಾಲೂಕಿನಲ್ಲಿ ರಾಜಕೀಯ ಜಿದ್ದಾಜಿದ್ದಿಗೆ ಕಾರಣವಾಗಿತ್ತು.

ಮಾಜಿ ಮುಖ್ಯಮಂತ್ರಿ, ಕ್ಷೇತ್ರದ ಶಾಸಕರೂ ಆಗಿರುವ ಎಚ್.ಡಿ ಕುಮಾರಸ್ವಾಮಿ ಅವರನ್ನು ಆಹ್ವಾನಿಸದೆ ಶಂಕುಸ್ಥಾಪನೆ ನೆರವೇರಿಸಿದಕ್ಕೆ ಜೆಡಿಎಸ್ ಕಾರ್ಯಕರ್ತರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ.

ಚನ್ನಪಟ್ಟಣ ವಿಧಾನಸಭಾ ಕ್ಷೇತ್ರಕ್ಕೆ ಮುಖ್ಯಮಂತ್ರಿ ವಿಶೇಷ ಅನುದಾನ 50 ಕೋಟಿ ಬಿಡುಗಡೆ ಮಾಡಿ, ಸ್ಥಳೀಯ ಶಾಸಕ ಹೆಚ್.ಡಿ.ಕುಮಾರಸ್ವಾಮಿ ರವರೊಂದಿಗೆ ಸಮಾಲೋಚನೆ ನಡೆಸಿ ಅವರ ಒಪ್ಪಿಗೆ ಪಡೆದು ಕಾಮಗಾರಿ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸ್ಪಷ್ಟವಾಗಿ ಸಿಎಂ ಸೂಚನೆ ನೀಡಿದ್ದಾರೆ.

ಆದರೆ ವಿಧಾನ ಪರಿಷತ್ ಸದಸ್ಯ ಶ್ರೀ.ಸಿ.ಪಿ.ಯೋಗೇಶ್ವರ್ ಮುಖ್ಯಮಂತ್ರಿಗಳು ನೀಡಿರುವ ಆದೇಶವನ್ನು ಧಿಕ್ಕರಿಸಿ ಕಾರ್ಯಕ್ರಮ ನಡೆಸುತ್ತಿದ್ದಾರೆ ಎಂದು ವಿರೋಧಿಸಿ ಇಂದು ಇಲ್ಲಿನ ರಾಂಪುರ ಗ್ರಾಮದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿಪೂಜೆ ಕಾರ್ಯಕ್ರಮಕ್ಕೆ ಆಗಮಿಸಿದ್ದ ಸಿ.ಪಿ. ಯೋಗೇಶ್ವರ್ ವಿರುದ್ಧ ಪ್ರತಿಭಟನೆ ನಡೆಸಿದ ಜೆಡಿಎಸ್ ಕಾರ್ಯಕರ್ತರು ಕಾರ್ಯಕ್ರಮಕ್ಕೆ ಅಡ್ಡಿಪಡಿಸಿ, ಅವರ ಕಾರಿಗೆ ಮೊಟ್ಟೆ ಎಸೆದಿದ್ದಾರೆ ಎಂದು ಹೇಳಲಾಗಿದೆ. ಈ ಸಂಬಂಧ ಪೊಲೀಸರು ಹಲವು ಪ್ರತಿಭಟನಾಕಾರರನ್ನು ವಶಕ್ಕೆ ಪಡೆದರು.

RELATED TOPICS:
English summary :JDS workers arrested for throwing eggs, stones at CP Yogeshwar

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ, ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ನ್ಯೂಸ್ MORE NEWS...