ನಾವು ಮತ್ತೆ ಅಧಿಕಾರಕ್ಕೆ ಬರುತ್ತೇವೆ: ಎಚ್ಡಿಕೆ ವಿಶ್ವಾಸ | JANATA NEWS
ಮೈಸೂರು : ಇಂದು ಹೆಚ್.ಡಿ ಕುಮಾರಸ್ವಾಮಿ ಕುಟುಂಬ ಸಮೇತ ತಾಯಿ ಚಾಮುಂಡಿ ಬೆಟ್ಟಕ್ಕೆ ದೇವಿಯ ದರ್ಶನ ಪಡೆದಿದ್ದಾರೆ.
ಮುಂದಿನ ಸಂಭವನೀಯ ಅಭ್ಯರ್ಥಿಗಳು, ಶಾಸಕರು, ಮಾಜಿ ಶಾಸಕರ ಜೊತೆ ನಾಡದೇವತೆ ತಾಯಿ ಚಾಮುಂಡೇಶ್ವರಿ ದರ್ಶನ ಪಡೆದಿದ್ದೇನೆ.
ಪೂರ್ಣ ಪ್ರಮಾಣದ ಸರ್ಕಾರ ಅಸ್ತಿತ್ವಕ್ಕೆ ತರುವಂತೆ ತಾಯಿ ಚಾಮುಂಡೇಶ್ವರಿಯನ್ನು ಬೇಡಿಕೊಂಡಿದ್ದೇನೆ. ಹಾಗೂ ತಾಯಿ ಅನುಗ್ರಹದಿಂದ ಹಾಗೂ ಜನರ ಆಶೀರ್ವಾದದಿಂದ ನಾವು ಅಧಿಕಾರಕ್ಕೆ ಬರುತ್ತೇವೆ ಎಂದರು.
ನಿಖಿಲ್ ಜೆಡಿಎಸ್ ಪಕ್ಷದ ಶಾಸಕರ 126 ಸ್ಥಾನ ಗೆಲ್ಲಿಸಿ ರಾಜ್ಯದಲ್ಲಿ ಜೆಡಿಎಸ್ ಸರ್ಕಾರ ತರಲು ರಾಜ್ಯಾದ್ಯಂತ ಪ್ರವಾಸ ಮಾಡುತ್ತಾರೆ. ಆದರೆ 126 ರಲ್ಲಿ ನಿಖಿಲ್ ಇರಬಹುದು ಎಂದು ಪರೋಕ್ಷವಾಗಿ ಹೇಳಿದ್ದಾರೆ.
ಜನಪರ ಯೋಜನೆಯನ್ನು ಚಾಚೂ ತಪ್ಪದೆ ಜಾರಿಗೊಳಿಸಲು 123 ಸೀಟ್ ಪಡೆಯುವುದು ನನ್ನ ಗುರಿ ಆಗಿದೆ. ಜೆಡಿಎಸ್ ರಾಜ್ಯ ಮಟ್ಟದ ಕಾರ್ಯಾಗಾರದಲ್ಲಿ ಪಂಚರತ್ನ ಕಾರ್ಯಕ್ರಮದ ಬಗ್ಗೆ ಚರ್ಚೆ ಮಾಡುತ್ತಿದ್ದು, ಎಲ್ಲರಿಂದ ಮಾಹಿತಿ ಪಡೆಯಲು ಸಿದ್ದವಾಗಿದ್ದೇನೆ. ನಮ್ಮ ಪಕ್ಷದವರೆ ಅಲ್ಲ, ಎಲ್ಲಾ ಪಕ್ಷದವರಲ್ಲಿ ಮೈತ್ರಿ ಸರ್ಕಾರ ಬರುತ್ತದೆ ಎಂಬ ನಿಲುವಿದೆ. ಆದರೆ ಜೆಡಿಎಸ್ ಪೂರ್ಣ ಪ್ರಮಾಣದ ಸರ್ಕಾರ ರಚಿಸಲಿದೆ ಎಂದರು.