Wed,Apr24,2024
ಕನ್ನಡ / English

ಶಾಲೆಗಳಲ್ಲಿ ಪೋಷಕರಿಂದ ₹100 ವಸೂಲಿಗೆ ಸುತ್ತೋಲೆ: 48 ಗಂಟೆಯಲ್ಲಿ ಸುತ್ತೋಲೆ ಹಿಂಪಡೆದ ಶಿಕ್ಷಣ ಇಲಾಖೆ | JANATA NEWS

22 Oct 2022
1495

ಮೈಸೂರು : ಸರ್ಕಾರಿ ಶಾಲೆಗಳಲ್ಲಿ ಪೋಷಕರಿಂದ ದೇಣಿಗೆ ಸಂಗ್ರಹಿಸುವ ಬಗ್ಗೆ ಶಿಕ್ಷಣ ಇಲಾಖೆ ಹೊರಡಿಸಿದ್ದ ಸುತ್ತೋಲೆಯನ್ನು ಹಿಂಪಡೆಯಲಾಗಿದೆ.

ಸಾರ್ವಜನಿಕರು, ಪೋಷಕರ ವಿರೋಧ ಹಿನ್ನೆಲೆ ಶಾಲಾ ಶ್ರೇಯೋಭಿವೃದ್ಧಿಗೆ ಪೋಷಕರಿಂದ 100 ರೂ. ದೇಣಿಗೆ ಸಂಗ್ರಹ ಆದೇಶವನ್ನು ಶಿಕ್ಷಣ ಇಲಾಖೆ ವಾಪಸ್ ಪಡೆದಿದೆ.

ಇದೀಗ ಈ ವಿಚಾರವು ಭಾರೀ ವಿವಾದಕ್ಕೆ ಕಾರಣವಾಗಿದೆ. ಸರ್ಕಾರಿ ಶಾಲೆಗಳಲ್ಲಿ ಕೂಲಿ ಕಾರ್ಮಿಕರ ಮಕ್ಕಳು ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ಸರ್ಕಾರಿ ಶಾಲೆಯ ಅಭಿವೃದ್ಧಿಗಾಗಿ ಮಕ್ಕಳ ಪೋಷಕರಿಂದಲೇ ತಿಂಗಳಿಗೆ 100 ರೂಪಾಯಿ ದೇಣಿಗೆ ನೀಡುವಂತೆ ಸುತ್ತೋಲೆಯಲ್ಲಿ ತಿಳಿಸಲಾಗಿತ್ತು. ಅಷ್ಟೇ ಅಲ್ಲದೇ ಈ ಸುತ್ತೋಲೆಯಲ್ಲಿ ಪೋಷಕರು ನೀಡುವ ಹಣವನ್ನ ಅಭಿವೃದ್ಧಿ ಪೂರಕ ಕಾರ್ಯಗಳಿಗೆ ಹಣ ಬಳಕೆ ಮಾಡಬಹುದು ಅಂತ ತಿಳಿಸಿತ್ತು.

ಈ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಶಿಕ್ಷಣ ಸಚಿವ ಬಿ.ಸಿ.ನಾಗೇಶ್​, ಇದು ಶಿಕ್ಷಣ ಇಲಾಖೆ ಆಯುಕ್ತರು ಹೊರಡಿಸಿರುವ ಸುತ್ತೋಲೆ. ಇದು ಶಿಕ್ಷಣ ಮಂತ್ರಿಗಳಿಗಾಗಲಿ, ಮುಖ್ಯಮಂತ್ರಿಗಳಿಗೆ ಸಂಬಂಧಿಸಿದ್ದಲ್ಲ. ಕೆಲವರು ಈ ಸುತ್ತೋಲೆಯನ್ನ ಸರಿಯಾಗಿ ಓದಿಕೊಳ್ಳದೆ ಪ್ರತಿಕ್ರಿಯೆ ನೀಡಿದ್ದಾರೆ.

ಶಿಕ್ಷಣ ಇಲಾಖೆ ಅಕ್ಟೋಬರ್ 19ರಂದು ಈ ಸುತ್ತೋಲೆಯನ್ನು ಹೊರಡಿಸಿತ್ತು. ಪ್ರತಿಪಕ್ಷಗಳು ಹಾಗೂ ಸಾರ್ವಜನಿಕರಿಂದ ತೀವ್ರ ಆಕ್ಷೇಪ ವ್ಯಕ್ತವಾದ ಹಿನ್ನೆಲೆ, ಸಚಿವ ಬಿ ಸಿ ನಾಗೇಶ್ ಆದೇಶವನ್ನು ಹಿಂಪಡೆಯುವಂತೆ ಸೂಚಿಸಿದ್ದಾರೆ. ಈ ಹಿನ್ನೆಲೆ ಆದೇಶ ಜಾರಿಯಾದ 48 ಗಂಟೆ ಒಳಗೆ ವಾಪಸ್ ಪಡೆಯಲ್ಪಟ್ಟಿದೆ.

ಶಿಕ್ಷಣ ಇಲಾಖೆಯ ಸುತ್ತೋಲೆಗೆ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದ್ದು, ಶಿಕ್ಷಣ ಇಲಾಖೆ ನಡೆಗೆ ಪೋಷಕರು ಹಾಗೂ ಖಾಸಗಿ ಶಾಲಾ ಸಂಘಟನೆಗಳಿಂದಲೂ ವಿರೋಧ ಕೇಳಿಬರುತ್ತಿದೆ. ಶಾಲೆಗಳ ಖಾಸಗಿರಣದ ಹುನ್ನಾರ ಎಂದು ಪೋಷಕರು ಕಿಡಿಕಾರಿದ್ದಾರೆ.

RELATED TOPICS:
English summary :Circular to collect ₹100 from parents in schools: Education department withdraws circular in 48 hours

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ
ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ
ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ
ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ
ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ
ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ
ಪ್ರಧಾನಿ ಮೋದಿ ಬೆಂಬಲಿಸಿ ಮಹಾರಾಷ್ಟ್ರ ರ್ಯಾಲಿಯಲ್ಲಿ ಎಂಎನ್‌ಎಸ್ ಅಧ್ಯಕ್ಷ ರಾಜ್ ಠಾಕ್ರೆ
ಪ್ರಧಾನಿ ಮೋದಿ ಬೆಂಬಲಿಸಿ ಮಹಾರಾಷ್ಟ್ರ ರ್ಯಾಲಿಯಲ್ಲಿ ಎಂಎನ್‌ಎಸ್ ಅಧ್ಯಕ್ಷ ರಾಜ್ ಠಾಕ್ರೆ

ನ್ಯೂಸ್ MORE NEWS...