Sun,Nov27,2022
ಕನ್ನಡ / English

ದಕ್ಷಿಣ ಪಿನಾಕಿನಿ ನದಿ ನೀರು ಹಂಚಿಕೆ ನೆಪದಲ್ಲಿ ನ್ಯಾಯಾಧಿಕರಣ ರಚಿಸಲು ಕೇಂದ್ರ ಹುನ್ನಾರ | JANATA NEWS

18 Nov 2022
384

ಬೆಂಗಳೂರು : ದಕ್ಷಿಣ ಪಿನಾಕಿನಿ ನದಿ ನೀರಿನ ವಿಷಯದಲ್ಲಿ ಕೇಂದ್ರ ಸರ್ಕಾರ ಕನ್ನಡಿಗರ ಹಕ್ಕು ಕಸಿಯಲು ಹೊರಟಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್​ಡಿ ಕುಮಾರಸ್ವಾಮಿ ಗಂಭೀರ ಆರೋಪ ಮಾಡಿದ್ದಾರೆ.

ದಕ್ಷಿಣ ಪಿನಾಕಿನಿ ನದಿ ನೀರಿನ ವಿಷಯಕ್ಕೆ ಹೊಸ ನ್ಯಾಯಾಧಿಕರಣ ರಚನೆ ಮಾಡುವ ಕೇಂದ್ರ ಬಿಜೆಪಿ ಸರ್ಕಾರದ ನಿರ್ಧಾರ ಅಕ್ಷಶಃ ರಾಜ್ಯದ ಪಾಲಿಗೆ ಮರಣಶಾಸನ.

ಇದನ್ನು ರಾಜ್ಯ ಬಿಜೆಪಿ ಸರ್ಕಾರ ಮುಲಾಜಿಲ್ಲದೆ ವಿರೋಧಿಸಬೇಕು ಎಂದು ಸರಣಿ ಟ್ವೀಟ್ ಮಾಡಿದ್ದಾರೆ.

ಕಾವೇರಿ ವಿವಾದದಲ್ಲಿ ಕರ್ನಾಟಕವು ಒಂದು ಶತಮಾನ ಕಾಲ ಸಂಘರ್ಷ ನಡೆಸಿದ್ದಾಯಿತು. ಮೇಕೆದಾಟು ವಿವಾದಕ್ಕೆ ನರೇಂದ್ರ ಮೋದಿ ಸರಕಾರ ಇನ್ನೂ ತುಪ್ಪ ಸುರಿಯುತ್ತಾ, ಆ ಯೋಜನೆಗೆ ಅನುಮತಿ ನೀಡಲು ಮೀನಾಮೇಷ ಎಣಿಸುತ್ತಿದೆ. ಆಗಲೇ, ಪಿನಾಕಿನಿ ನದಿ ವಿಷಯದಲ್ಲಿ ರಾಜ್ಯಕ್ಕೆ ಕಾನೂನು ಕುಣಿಕೆ ಬಿಗಿಯಲು ಬಿಜೆಪಿ ಸರ್ಕಾರ ಹುನ್ನಾರ ನಡೆಸಿದೆ ಎಂದಿದ್ದಾರೆ.

ರಾಜಕೀಯ ಕಾರಣಕ್ಕಾಗಿ ದಕ್ಷಿಣ ಪಿನಾಕಿನಿ ನದಿ ನೀರಿನ ಹಕ್ಕನ್ನು ಕರ್ನಾಟಕದಿಂದ ಕಸಿಯಲು ಕೇಂದ್ರ ಹವಣಿಸುತ್ತಿದೆ. ಕಾವೇರಿ, ಕೃಷ್ಣಾ, ಮಹದಾಯಿ ಸೇರಿ ವಿವಿಧ ಜಲ ವಿವಾದಗಳಲ್ಲಿ ಕರ್ನಾಟಕವನ್ನು ಕಾಡಿದಂತೆ, ವಿವಾದವೇ ಅಲ್ಲದ ದಕ್ಷಿಣ ಪಿನಾಕಿನಿಯನ್ನೂ ವಿವಾದದ ಕೂಪಕ್ಕೆ ತಳ್ಳಿ ಕನ್ನಡಿಗರನ್ನು ಕಾಡುವ ಹವಣಿಕೆ ಇದಷ್ಟೇ.

ದಕ್ಷಿಣ ಪಿನಾಕಿನಿ ನದಿ ನೀರಿನ ವಿಷಯಕ್ಕೆ ಹೊಸ ನ್ಯಾಯಾಧಿಕರಣ ರಚನೆ ಮಾಡುವ ಕೇಂದ್ರ ಬಿಜೆಪಿ ಸರಕಾರದ ನಿರ್ಧಾರ ಅಕ್ಷಶಃ ರಾಜ್ಯದ ಪಾಲಿಗೆ ಮರಣಶಾಸನ. ಇದನ್ನು ರಾಜ್ಯ ಸರ್ಕಾರ ಮುಲಾಜಿಲ್ಲದೆ ವಿರೋಧಿಸಬೇಕು ಎಂದು ಒತ್ತಾಯಿಸಿದ್ದಾರೆ.

ರಾಜಕೀಯ ಲಾಭದ ಉದ್ದೇಶಕ್ಕಾಗಿ ಕೇಂದ್ರ ಸರ್ಕಾರ ನೆಲ, ಜಲ, ಭಾಷೆಯಂತಹ ವಿಷಯಗಳನ್ನು ಇಟ್ಟುಕೊಂಡು ದಕ್ಷಿಣ ರಾಜ್ಯಗಳ ನಡುವೆ ಜಗಳ ಹಚ್ಚಲು ಷಡ್ಯಂತ್ರ ನಡೆಸಿದೆ. ರಾಜ್ಯದ ವಿರೋಧವಿದ್ದರೂ ಕೇಂದ್ರವು ನ್ಯಾಯಾಧಿಕರಣ ರಚನೆ ಮಾಡಲು ಹೊರಟಿದೆ. ಇದು ಸರಿಯಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

RELATED TOPICS:
English summary :Central Hunnara to set up a tribunal on the pretext of sharing South Pinakini river water

ಭಾರತ್ ಜೋಡೋ ಯಾತ್ರೆಯಲ್ಲಿ ಪಾಕಿಸ್ತಾನ್ ಜಿಂದಾಬಾದ್ ಘೋಷಣೆ : ಕಾಂಗ್ರೆಸ್ ಬೆಂಬಲಿಗರ ಎಡವಟ್ಟು
ಭಾರತ್ ಜೋಡೋ ಯಾತ್ರೆಯಲ್ಲಿ ಪಾಕಿಸ್ತಾನ್ ಜಿಂದಾಬಾದ್ ಘೋಷಣೆ : ಕಾಂಗ್ರೆಸ್ ಬೆಂಬಲಿಗರ ಎಡವಟ್ಟು
ಬಾಣಂತಿ ಡಿಸ್ಚಾರ್ಜ್ ಮಾಡಲು 6 ಸಾವಿರ ಫಿಕ್ಸ್, ವಿಡಿಯೋ ವೈರಲ್​, ವೈದ್ಯೆಯರಿಬ್ಬರ ಅಮಾನತು!
ಬಾಣಂತಿ ಡಿಸ್ಚಾರ್ಜ್ ಮಾಡಲು 6 ಸಾವಿರ ಫಿಕ್ಸ್, ವಿಡಿಯೋ ವೈರಲ್​, ವೈದ್ಯೆಯರಿಬ್ಬರ ಅಮಾನತು!
ಸೆಲ್ಫಿ ತೆಗೆದುಕೊಳ್ಳುವಾಗ ದುರಂತ: ಪಾಲ್ಸ್​ಗೆ ಬಿದ್ದು ನಾಲ್ವರು ಯುವತಿಯರು ಸಾವು
ಸೆಲ್ಫಿ ತೆಗೆದುಕೊಳ್ಳುವಾಗ ದುರಂತ: ಪಾಲ್ಸ್​ಗೆ ಬಿದ್ದು ನಾಲ್ವರು ಯುವತಿಯರು ಸಾವು
ಒಂದೇ ದಿನದೊಳಗೆ ಮಹಿಳಾ ಆಯೋಗದ ದೂರುಗಳ ತನಿಖೆ ಪ್ರಾರಂಭಿಸಲು ಸೂಚನೆ
ಒಂದೇ ದಿನದೊಳಗೆ ಮಹಿಳಾ ಆಯೋಗದ ದೂರುಗಳ ತನಿಖೆ ಪ್ರಾರಂಭಿಸಲು ಸೂಚನೆ
ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣ: ಎನ್‌ಐಎಗೆ ವರ್ಗಾಯಿಸಿದ ರಾಜ್ಯ ಸರ್ಕಾರ
ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣ: ಎನ್‌ಐಎಗೆ ವರ್ಗಾಯಿಸಿದ ರಾಜ್ಯ ಸರ್ಕಾರ
ರೋಸ್ ಕಾರ್ಯಕ್ರಮದಲ್ಲಿ ಯುವತಿ ಕುಸಿದು ಬಿದ್ದು ಸಾವು!
ರೋಸ್ ಕಾರ್ಯಕ್ರಮದಲ್ಲಿ ಯುವತಿ ಕುಸಿದು ಬಿದ್ದು ಸಾವು!
ಕದನ ವಿರಾಮ ಉಲ್ಲಂಘಿಸಿದರೆ ಸೂಕ್ತ ಉತ್ತರ, ಪಿಒಕೆ ಕುರಿತು ಸರ್ಕಾರದ ಆದೇಶಕ್ಕೆ ಸಿದ್ದ - ಲೆಫ್ಟಿನೆಂಟ್ ಜನರಲ್

ತೆಲಂಗಾಣ : ಕಾಡಿನ ಮರ ಕಡೆಯುವವರ ದಾಳಿಗೆ ಅರಣ್ಯ ವಲಯ ಅಧಿಕಾರಿ ಸಾವು
ತೆಲಂಗಾಣ : ಕಾಡಿನ ಮರ ಕಡೆಯುವವರ ದಾಳಿಗೆ ಅರಣ್ಯ ವಲಯ ಅಧಿಕಾರಿ ಸಾವು
ಚಿಲುಮೆ ಸಂಸ್ಥೆಯ ಕಚೇರಿ ಮೇಲೆ ಪೊಲೀಸರ ದಾಳಿ, ನಾಲ್ವರು ಪೊಲೀಸ್ ವಶಕ್ಕೆ, ಆರ್​ಒ ಸಸ್ಪೆಂಡ್
ಚಿಲುಮೆ ಸಂಸ್ಥೆಯ ಕಚೇರಿ ಮೇಲೆ ಪೊಲೀಸರ ದಾಳಿ, ನಾಲ್ವರು ಪೊಲೀಸ್ ವಶಕ್ಕೆ, ಆರ್​ಒ ಸಸ್ಪೆಂಡ್
ದಕ್ಷಿಣ ಪಿನಾಕಿನಿ ನದಿ ನೀರು ಹಂಚಿಕೆ ನೆಪದಲ್ಲಿ ನ್ಯಾಯಾಧಿಕರಣ ರಚಿಸಲು ಕೇಂದ್ರ ಹುನ್ನಾರ
ದಕ್ಷಿಣ ಪಿನಾಕಿನಿ ನದಿ ನೀರು ಹಂಚಿಕೆ ನೆಪದಲ್ಲಿ ನ್ಯಾಯಾಧಿಕರಣ ರಚಿಸಲು ಕೇಂದ್ರ ಹುನ್ನಾರ
ಸಿದ್ದರಾಮಯ್ಯ ಚುನಾವಣೆಗೆ ಸ್ಪರ್ಧಿಸದಿದ್ದರೆ ಒಳ್ಳೆಯದು
ಸಿದ್ದರಾಮಯ್ಯ ಚುನಾವಣೆಗೆ ಸ್ಪರ್ಧಿಸದಿದ್ದರೆ ಒಳ್ಳೆಯದು

ನ್ಯೂಸ್ MORE NEWS...