ವಿಚಾರಣಾಧೀನ ಕೈದಿ ಪಂಚೆಯಿಂದ ನೇಣುಬಿಗಿದುಕೊಂಡು ಆತ್ಮಹತ್ಯೆ | JANATA NEWS

ಉಡುಪಿ : ವಿಚಾರಣಾಧೀನ ಕೈದಿ ಪಂಚೆಯಿಂದ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಸಬ್ಜೈಲಿನಲ್ಲಿ ನಡೆದಿದೆ.
ಕೊಲೆ ಪ್ರಕರಣದಲ್ಲಿ ಜೈಲು ಸೇರಿದ್ದ ಕಾರ್ಕಳ ಮೂಲದ ಸದಾನಂದ ಸೇರಿಗಾರ್ ಆತ್ಮಹತ್ಯೆ ಮಾಡಿಕೊಂಡ ವಿಚಾರಣಾಧೀನ ಕೈದಿ. ಇಂದು ಮುಂಜಾನೆ ಐದು ಗಂಟೆಗೆ 20 ಮಂದಿ ಕೈದಿಗಳಿದ್ದ ಕೊಠಡಿಯಲ್ಲಿ ಪಂಚೆಯಿಂದ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಈ ಘಟನೆಯನ್ನು ಸಹ ಕೈದಿಗಳು ಗಮನಿಸಿ ನೇಣಿನ ಕುಣಿಕೆಯಿಂದ ಬಿಡಿಸಿ ಆಸ್ಪತ್ರೆಗೆ ಕರೆದುಕೊಂಡು ಹೋಗುವಾಗ ಮಾರ್ಗ ಮಧ್ಯದಲ್ಲಿ ಆರೋಪಿ ಸಾವನ್ನಪ್ಪಿದ್ದಾರೆ.
English summary :Under-trial prisoner commits suicide by hanging himself from the gallows