Thu,Sep11,2025
ಕನ್ನಡ / English

ಅಧಿಕಾರಿಗಳ ಕಿರುಕುಳ ​​ತಾಳಲಾರದೆ ಶಿಕ್ಷಕ ಆತ್ಮಹತ್ಯೆ! | JANATA NEWS

13 Feb 2023

ವಿಜಯಪುರ : ನನಗಿಂತಲೂ ನನ್ನ ವಿದ್ಯಾರ್ಥಿಗಳ ಭವಿಷ್ಯ ಮುಖ್ಯ ಎಂದು ಡೆತ್​ನೋಟ್ ಬರೆದಿಟ್ಟು ಸಿಂದಗಿ ತಹಶೀಲ್ದಾರ್ ಕಚೇರಿಯ ಆವರಣದ ಮರಕ್ಕೆ ಶಿಕ್ಷಕ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಸಾಸಾಬಳ ಗ್ರಾಮದ ಸರ್ಕಾರಿ ಶಾಲೆಯ ಶಿಕ್ಷಕ ಬಸವರಾಜ್ (55) ಆತ್ಮಹತ್ಯೆಗೆ ಶರಣಾದವರು. ಶಿಕ್ಷಕ ಡೆತ್ ನೋಟ್ ಬರೆದಿಟ್ಟು ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಶಾಲೆಯ ಹಿಂದಿನ ಮುಖ್ಯ ಶಿಕ್ಷಕ ಎಸ್.ಎಲ್.ಭಜಂತ್ರಿ, ಸಿಂದಗಿ ಬಿಇಓ, ಸಿಆರ್​ಪಿ ಜಿ.ಎನ್.ಪಾಟೀಲ್ ಅವರ ಕಿರುಕುಳವೇ ಆತ್ಮಹತ್ಯೆಗೆ ಕಾರಣ ಎಂದು ಡೆತ್​ನೋಟ್​ನಲ್ಲಿ ಉಲ್ಲೇಖ ಮಾಡಿದ್ದಾರೆ.

ಡೆತ್​ ನೋಟ್​ನಲ್ಲಿ ಏನಿದೆ?

ಎಸ್​ ಎಲ್ ಭಜಂತ್ರಿ ಮುಖ್ಯಶಿಕ್ಷಕ ಹುದ್ದೆಯನ್ನು, ಶಿಕ್ಷಕ ಬಸವರಾಜಗೆ ವರ್ಗಾಯಿಸಿದ್ದರು. ಈ ವೇಳೆ ಶಿಕ್ಷಕರ, ಹಾಗೂ ಮಕ್ಕಳ ಹಾಜರಾತಿ ದಾಖಲಿಸುವ 1ನೇ ನಂಬರ್ ರಿಜಿಸ್ಟರ್​ನ್ನು ಹಸ್ತಾಂತರ ಮಾಡಿದ್ದರು. ಆದರೆ ಭಜಂತ್ರಿ ವಿದ್ಯಾರ್ಥಿಗಳ ದಾಖಲಾತಿ ವಿವರ, ಜಾತಿ, ಜನ್ಮ ದಿನಾಂಕಗಳನ್ನು 1ನೇ ನಂಬರ್ ರಿಜಿಸ್ಟರ್​ ಸರಿಯಾಗಿ ದಾಖಲಿಸದೇ,​ ಅಪೂರ್ಣ ರೀತಿಯಲ್ಲಿ ವರ್ಗಾಯಿಸಿದ್ದರು.

ಈ ಸಂಬಂಧ ಎಸ್​ ಎಲ್ ಭಜಂತ್ರಿಯನ್ನು, ಶಿಕ್ಷಕ ಬಸವರಾಜ್​ ಪ್ರಶ್ನಿಸಿದರೇ “ನಾನು ಸಿಆರ್​ಪಿ ಆಗುತ್ತೇನೆ, ಆಗಾಗ ಬಂದು 1ನೇ ನಂಬರ್ ರಿಜಿಸ್ಟರ್ ಸರಿಪಡಿಸುವುದಾಗಿ ಹೇಳಿದ್ದರು. ಆದರೆ ಹಿಂದಿನ ಮುಖ್ಯ ಶಿಕ್ಷಕ ಎಸ್ ಎಲ್ ಭಜಂತ್ರಿ ರಿಜಿಸ್ಟರ್​ನ್ನು ಸರಿಪಡಿಸದೇ ಸತಾಯಿಸುತ್ತಿದ್ದರು. ಈ ಬಗ್ಗೆ ಸಿಂದಗಿ ಬಿಇಓ ಗಮನಕ್ಕೂ ತಂದಿದ್ದರೂ ಪ್ರಯೋಜನವಾಗಿಲ್ಲ. ಇದಕ್ಕೆ ಪ್ರತಿಯಾಗಿ ಬಿಇಓ ಹೆಚ್ ಎಂ ಹರಿನಾಳ ಟಾರ್ಚರ್ ನೋಟಿಸ್ ಕೊಡುತ್ತಿದ್ದನು. ಸಾಸಾಬಳ ಶಾಲೆಯ ಸಹಶಿಕ್ಷಕ ಶಿಕ್ಷಕ ಬಿಎಂ ತಳವಾರ ನಿಂದಲೂ ಕಿರುಕುಳ ನೀಡಿದ್ದಾನೆ ಎಂದು ಆರೋಪಿಸಿದ್ದಾರೆ.

ಅಲ್ಲದೇ ನನ್ನ ಮೇಲೆ ಅಲಿಗೆಷನ್ ಮಾಡಿ, ಗ್ರಾಮದ ಸಂಗಮೇಶ್ ಚಿಂಚೋಳಿ ಎಂಬುವರು ಹಾಗೂ ಸಿಆರ್​ಪಿ ​​ನನ್ನಿಂದ ಹಣ ಪಡೆದಿದ್ದರು. ಹಾಗೇ ಬಿಸಿಯೂಟ ಯೋಜನೆಯಗೆ ಹೆಚ್ಚುವರಿ ವಿದ್ಯಾರ್ಥಿಗಳ ದಾಖಲಾತಿ ತೋರಿಸಿ ಹಣ ಲಪಟಾಯಿಸುತ್ತಿದ್ದರು. ಶಿಕ್ಷಕ ಬಸವರಾಜ್ ವಿರುದ್ಧ ಸಂಗಮೇಶ್ ಚಿಂಚೋಳಿ ಬಿಇಓಗೆ ದೂರು ಕೊಟ್ಟಿದ್ದರು. ನನಗಿಂತಲೂ ನನ್ನ ವಿದ್ಯಾರ್ಥಿಗಳ ಭವಿಷ್ಯ ಮುಖ್ಯ. ನನ್ನ ಹೆಂಡತಿ ಓರ್ವ ಮಗಳಿಗೆ ನ್ಯಾಯ ಒದಗಿಸಿಕೊಡಬೇಕು ಎಂದು ಡೆತ್ ನೋಟ್​​ನಲ್ಲಿ ಮನವಿ ಮಾಡಿದ್ದಾರೆ.

ಈ ಕುರಿತು ಡೆತ್ ನೋಟಿನಲ್ಲಿ ಬಸವರಾಜ ಉಲ್ಲೇಖಿಸಿದ ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎಂ.ಹರನಾಳ, ಜಿ.ಎನ್ ಪಾಟೀಲ, ಎಸ್.ಎಲ್.ಬಜಂತ್ರಿ, ಸಂಗಮೇಶ ಚಿಂಚೊಳ್ಳಿ, ಎಸ್.ಎಲ್.ಬಜಂತ್ರಿ, ಬಿ.ಎಂ.ತಳವಾರ ಅವರುಗಳೇ ನನ್ನ ಗಂಡನ ಸಾವಿಗೆ ನೇರ ಕಾರಣ ಎಂದು ಪತ್ನಿ ಮಹಾದೇವಿ ಬಸವರಾಜ ನಾಯಕಲ್ ಸಿಂದಗಿ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

RELATED TOPICS:
English summary :Unable to bear the harassment of the authorities, the teacher committed suicide

ಕಾಂಗ್ರೆಸ್ ಶಾಸಕ ಕೆ.ಸಿ.ವೀರೇಂದ್ರ ಅಕ್ರಮ ಆನ್‌ಲೈನ್ ಬೆಟ್ಟಿಂಗ್‌ನಲ್ಲಿ ವಂಚಿಸಿದ ಪ್ರಕರಣ : ಇಡಿ ದಾಳಿಯಲ್ಲಿ ರೂ.100 ಕೋಟಿ ಚಿನ್ನ ಬೆಳ್ಳಿ ವಶ
ಕಾಂಗ್ರೆಸ್ ಶಾಸಕ ಕೆ.ಸಿ.ವೀರೇಂದ್ರ ಅಕ್ರಮ ಆನ್‌ಲೈನ್ ಬೆಟ್ಟಿಂಗ್‌ನಲ್ಲಿ ವಂಚಿಸಿದ ಪ್ರಕರಣ : ಇಡಿ ದಾಳಿಯಲ್ಲಿ ರೂ.100 ಕೋಟಿ ಚಿನ್ನ ಬೆಳ್ಳಿ ವಶ
ಉಪರಾಷ್ಟ್ರಪತಿ ಚುನಾವಣೆಯಲ್ಲಿ ಎನ್‌ಡಿಎ ಅಭ್ಯರ್ಥಿ ಸಿ.ಪಿ. ರಾಧಾಕೃಷ್ಣನ್ ಗೆಲವು
ಉಪರಾಷ್ಟ್ರಪತಿ ಚುನಾವಣೆಯಲ್ಲಿ ಎನ್‌ಡಿಎ ಅಭ್ಯರ್ಥಿ ಸಿ.ಪಿ. ರಾಧಾಕೃಷ್ಣನ್ ಗೆಲವು
ನೇಪಾಳದಲ್ಲಿ ಕಮ್ಯುನಿಸ್ಟ್ ಪಕ್ಷದ ಸರ್ಕಾರದ ಪತನದ ಬಳಿಕವೂ ಸಂಸತ್ತು, ಸುಪ್ರೀಂ ಕೋರ್ಟ್ ಮೇಲೆ ದಾಳಿ ನಡೆಸಿದ ಪ್ರತಿಭಟನಾಕಾರರು :
ನೇಪಾಳದಲ್ಲಿ ಕಮ್ಯುನಿಸ್ಟ್ ಪಕ್ಷದ ಸರ್ಕಾರದ ಪತನದ ಬಳಿಕವೂ ಸಂಸತ್ತು, ಸುಪ್ರೀಂ ಕೋರ್ಟ್ ಮೇಲೆ ದಾಳಿ ನಡೆಸಿದ ಪ್ರತಿಭಟನಾಕಾರರು :
ನಿಮ್ಮ ನಡವಳಿಕೆಯು ಕಾಂಗ್ರೆಸ್ ಪಕ್ಷದ ಸಾಂಪ್ರದಾಯಿಕ ದುರಹಂಕಾರ ಮತ್ತು ಅಹಂಕಾರಕ್ಕೆ ಸಾಕ್ಷಿಯಾಗಿದೆ - ಖರ್ಗೆ ರನ್ನು ತರಾಟೆಗೆ ತೆಗೆದುಕೊಂಡ ಎಚ್‌ಡಿಕೆ
ನಿಮ್ಮ ನಡವಳಿಕೆಯು ಕಾಂಗ್ರೆಸ್ ಪಕ್ಷದ ಸಾಂಪ್ರದಾಯಿಕ ದುರಹಂಕಾರ ಮತ್ತು ಅಹಂಕಾರಕ್ಕೆ ಸಾಕ್ಷಿಯಾಗಿದೆ - ಖರ್ಗೆ ರನ್ನು ತರಾಟೆಗೆ ತೆಗೆದುಕೊಂಡ ಎಚ್‌ಡಿಕೆ
ಶ್ರೀ ನಾರಾಯಣ ಗುರುಗಳ ಜನ್ಮ ದಿನಾಚರಣೆಯಂದು  ಅವರ ದೃಷ್ಟಿಕೋನ, ಪ್ರಭಾವ ಸ್ಮರಿಸಿದ ಪ್ರಧಾನಿ ಮೋದಿ
ಶ್ರೀ ನಾರಾಯಣ ಗುರುಗಳ ಜನ್ಮ ದಿನಾಚರಣೆಯಂದು ಅವರ ದೃಷ್ಟಿಕೋನ, ಪ್ರಭಾವ ಸ್ಮರಿಸಿದ ಪ್ರಧಾನಿ ಮೋದಿ
ಭಾರತ-ಅಮೆರಿಕ ನಡುವೆ ಜಾಗತಿಕ ಕಾರ್ಯತಂತ್ರದ ಸಹಭಾಗಿತ್ವ ಬಹಳ ಸಕಾರಾತ್ಮಕವಾಗಿದೆ - ಪ್ರಧಾನಿ ಮೋದಿ
ಭಾರತ-ಅಮೆರಿಕ ನಡುವೆ ಜಾಗತಿಕ ಕಾರ್ಯತಂತ್ರದ ಸಹಭಾಗಿತ್ವ ಬಹಳ ಸಕಾರಾತ್ಮಕವಾಗಿದೆ - ಪ್ರಧಾನಿ ಮೋದಿ
ಭಾರತೀಯ ಪೌರತ್ವ ಪಡೆಯುವ ಮೂರು ವರ್ಷಗಳ ಮೊದಲೇ ಮತ ಚಲಾವಣೆ : ಸೋನಿಯಾ ಗಾಂಧಿ ವಿರುದ್ಧ ಕ್ರಿಮಿನಲ್ ದೂರು
ಭಾರತೀಯ ಪೌರತ್ವ ಪಡೆಯುವ ಮೂರು ವರ್ಷಗಳ ಮೊದಲೇ ಮತ ಚಲಾವಣೆ : ಸೋನಿಯಾ ಗಾಂಧಿ ವಿರುದ್ಧ ಕ್ರಿಮಿನಲ್ ದೂರು
11
11
ಭಾರತವನ್ನು ಹೆಸರಿಸುವಾಗ ಹೆಚ್ಚು ಗೌರವಯುತ ವಿಧಾನ ಬಳಸಲು ಅಮೆರಿಕಕ್ಕೆ ನಿರ್ದೇಶಿಸಿದ ಫಿನ್ಲ್ಯಾಂಡ್ ಅಧ್ಯಕ್ಷ
ಭಾರತವನ್ನು ಹೆಸರಿಸುವಾಗ ಹೆಚ್ಚು ಗೌರವಯುತ ವಿಧಾನ ಬಳಸಲು ಅಮೆರಿಕಕ್ಕೆ ನಿರ್ದೇಶಿಸಿದ ಫಿನ್ಲ್ಯಾಂಡ್ ಅಧ್ಯಕ್ಷ
2 ಮತದಾರರ ಗುರುತಿನ ಚೀಟಿಹೊಂದಿದಕ್ಕಾಗಿ ಕಾಂಗ್ರೆಸ್ ವಕ್ತಾರ ಪವನ್ ಖೇರಾಗೆ ಚುನಾವಣಾ ಕಚೇರಿಯ ನೋಟಿಸ್
2 ಮತದಾರರ ಗುರುತಿನ ಚೀಟಿಹೊಂದಿದಕ್ಕಾಗಿ ಕಾಂಗ್ರೆಸ್ ವಕ್ತಾರ ಪವನ್ ಖೇರಾಗೆ ಚುನಾವಣಾ ಕಚೇರಿಯ ನೋಟಿಸ್
ರಾಜಕೀಯಕ್ಕೂ ಯಾವುದೇ ಸಂಬಂಧವಿಲ್ಲದ ನನ್ನ ತಾಯಿ ವಿರುದ್ಧ ಅನುಚಿತ ಭಾಷೆಯನ್ನು ಏಕೆ ಬಳಸಿದ್ದಾರೆ? - ಪ್ರಧಾನಿ ಮೋದಿ
ರಾಜಕೀಯಕ್ಕೂ ಯಾವುದೇ ಸಂಬಂಧವಿಲ್ಲದ ನನ್ನ ತಾಯಿ ವಿರುದ್ಧ ಅನುಚಿತ ಭಾಷೆಯನ್ನು ಏಕೆ ಬಳಸಿದ್ದಾರೆ? - ಪ್ರಧಾನಿ ಮೋದಿ
ಸೆಮಿಕಾನ್ ಇಂಡಿಯಾ 2025 : ವಿಕ್ರಮ್ 32-ಬಿಟ್ ಪ್ರೊಸೆಸರ್  ಸೆಮಿಕಂಡಕ್ಟರ್ ಚಿಪ್ ಬಿಡುಗಡೆ ಮಾಡಿದ ಪ್ರಧಾನಿ ಮೋದಿ
ಸೆಮಿಕಾನ್ ಇಂಡಿಯಾ 2025 : ವಿಕ್ರಮ್ 32-ಬಿಟ್ ಪ್ರೊಸೆಸರ್ ಸೆಮಿಕಂಡಕ್ಟರ್ ಚಿಪ್ ಬಿಡುಗಡೆ ಮಾಡಿದ ಪ್ರಧಾನಿ ಮೋದಿ

ನ್ಯೂಸ್ MORE NEWS...