ಡಿಸಿ ಕಚೇರಿ ಮೇಲೆ ನಿಂತು ಆಜಾನ್ ಕೂಗಿದ ಯುವಕ | JANATA NEWS
ಶಿವಮೊಗ್ಗ : ಇಂದು ಜಿಲ್ಲಾಧಿಕಾರಿಗಳ ಕಚೇರಿಯ ಬಳಿ ತೆರಳಿದಂತ ಯುವಕನೊಬ್ಬ, ಆಜಾನ್ ಕೂಗಿರುವಂತ ಘಟನೆ ನಡೆದಿದೆ. ಅಲ್ಲದೇ ಆಜಾನ್ ಕೂಗಿದಂತ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ.
ಶಾಸಕ ಕೆ.ಎಸ್.ಈಶ್ವರಪ್ಪ ಅವರು ಆಜಾನ್ ವಿಚಾರದಲ್ಲಿ ಲಘುವಾಗಿ ಮಾತನಾಡಿದ್ದಾರೆಂದು ಆರೋಪಿಸಿ ಮುಸ್ಲಿಂ ಸಂಘಟನೆಗಳು ಡಿಸಿ ಕಚೇರಿ ಎದುರು ನಡೆಸಿದ ಧರಣಿ ವೇಳೆ ಪ್ರತಿಭಟನಾಕಾರನೊಬ್ಬ ಆಜಾನ್ ಕೂಗಿದ್ದು ಇದೀಗ ವಿವಾದಕ್ಕೆ ಕಾರಣವಾಗಿದೆ.
ವಿಡಿಯೋ ವೈರಲ್ ಆಗಿದೆ. ಆಜಾನ್ ಹಾಗೂ ಅಲ್ಲಾಹು ಬಗ್ಗೆ ಮಾಜಿ ಸಚಿವ ಈಶ್ವರಪ್ಪ ಅವಹೇಳನ ಮಾಡಿದ ಆರೋಪ ಹಿನ್ನೆಲೆ ಶಿವಮೊಗ್ಗದ ಜಿಲ್ಲಾಧಿಕಾರಿ ಕಚೇರಿ ಎದುರು ಮುಸ್ಲಿಂ ಸಮುದಾಯದವರು ಪ್ರತಿಭಟನೆ ನಡೆಸಿದ್ದರು. ಈಶ್ವರಪ್ಪ ವಿರುದ್ದ ಘೋಷಣೆ ಕೂಗಿ ಆಕ್ರೋಶ ಹಾಕಿದ್ದರು. ಪ್ರತಿಭಟನೆ ವೇಳೆ ಮುಸ್ಲಿಂ ಯುವಕನೊಬ್ಬ ಜಿಲ್ಲಾಧಿಕಾರಿ ಕಚೇರಿ ಮೇಲೆ ಹತ್ತಿ ಆಜಾನ್ ಕೂಗಿ ಉದ್ದಟತನ ಪ್ರದರ್ಶಿಸಿದ್ದ. ಎರಡು ದಿನಗಳ ಹಿಂದೆ ನಡೆದಿದ್ದ ಈ ಘಟನೆ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಆಜಾನ್ ಕೂಗಿದ್ದಕ್ಕೆ ಸ್ಥಳದಲ್ಲಿದ್ದ ಪೊಲೀಸರು ಕೂಡ ವಿರೋಧ ವ್ಯಕ್ತಪಡಿಸಿದ್ದಾರೆ. ಈ ವೇಳೆ ಪೊಲೀಸರು ಹಾಗೂ ಪ್ರತಿಭಟನಾಕಾರರ ನಡುವೆ ಮಾತಿನ ಚಕಮಕಿ ನಡೆದಿದೆ. ಜಯನಗರ ಠಾಣೆಗೆ ತೆರಳಿದ್ದಂತ ಆತನ ಪರ ವಕೀಲರು ಠಾಣಾ ಜಾಮೀನಿನ ಮೇಲೆ ಬಿಡುಗಡೆ ಮಾಡಿಸಿದ್ದರು. ಡಿಸಿ ಕಚೇರಿ ಮುಂದೆ ಆಜಾನ್ ಕೂಗದಂತೆ ಪೊಲೀಸರ ತಾಕೀತು ಮಾಡಿ ಕಳುಹಿಸಿದ್ದಾರೆ.