Sun,May19,2024
ಕನ್ನಡ / English

ಬ್ರಿಟಿಷ್ ಹೈಕಮಿಷನ್ ಕಛೇರಿಗೆ, ನಿವಾಸಕ್ಕೆ ಭದ್ರತೆ ರದ್ದು : ತಕ್ಕಪಾಠ ಕಲಿಸಿದ ಭಾರತ | JANATA NEWS

22 Mar 2023
1455

ನವದೆಹಲಿ : ಭಾರತವು ಬ್ರಿಟಿಷ್ ಹೈಕಮಿಷನ್ ಮತ್ತು ಹೈಕಮಿಷನರ್ ನಿವಾಸದ ಹೊರಗಡೆ ನೀಡಲಾಗಿದ್ದ ಎಲ್ಲಾ ಭದ್ರತೆಯನ್ನು ತೆಗೆದುಹಾಕಿದೆ. ಲಂಡನ್‌ನಲ್ಲಿರುವ ಭಾರತೀಯ ಆಯೋಗವನ್ನು ಖಲಿಸ್ತಾನಿ ಉಗ್ರರು ಧ್ವಂಸಗೊಳಿಸಿದ ನಂತರ ಈ ಕ್ರಮಗಳು ಬೆಳಕಿಗೆ ಬಂದಿವೆ.

ಭಾರತದ ನವದೆಹಲಿಯಲ್ಲಿರುವ ಬ್ರಿಟಿಷ್ ಹೈಕಮಿಷನ್ ಮತ್ತು ಹೈ ಕಮಿಷನರ್ ನಿವಾಸದ ಹೊರಗೆ ಭದ್ರತಾ ಬ್ಯಾರಿಕೇಡ್‌ಗಳು ಮತ್ತು ಭದ್ರತಾ ವಾಹನಗಳನ್ನು ತೆಗೆದುಹಾಕಲಾಗಿದೆ.

ಈ ಕ್ರಮವನ್ನು ಯುಕೆ ಲಂಡನ್‌ನಲ್ಲಿರುವ ಭಾರತೀಯ ಹೈಕಮಿಷನ್‌ನಲ್ಲಿನ ಭದ್ರತೆಯ ಕೊರತೆಯ ಪ್ರತಿಕ್ರಿಯೆಯಾಗಿ ಪರಿಗಣಿಸಬಹುದಾಗಿದೆ, ಅಲ್ಲಿ ಭಾರತದ ಧ್ವಜವನ್ನು ಖಾಲಿಸ್ತಾನಿ ಗೂಂಡಾಗಳು ಕೆಳಗಿಳಿಸಿದ್ದರು. ಭಾನುವಾರದಂದು ಖಲಿಸ್ತಾನ್ ಪರ ಘೋಷಣೆಗಳನ್ನು ಕೂಗುತ್ತಿದ್ದ ತೀವ್ರಗಾಮಿ ಗೂಂಡಾಗಳ ಗುಂಪೊಂದು ಲಂಡನ್‌ನಲ್ಲಿರುವ ಕಾನ್ಸುಲೇಟ್ ಅನ್ನು ಧ್ವಂಸಗೊಳಿಸಿತ್ತು.

ಭದ್ರತೆಯನ್ನು ಕಡಿತ ಮಾಡುವ ಸಾಧ್ಯತೆಯ ಕುರಿತು ಭಾರತ ಸರ್ಕಾರದಿಂದ ಯಾವುದೇ ಅಧಿಕೃತ ಹೇಳಿಕೆಯಿಲ್ಲದಿದ್ದರೂ, ಕಂಡುಬರುವ ಭದ್ರತೆಯ ಕೊರತೆ, ತೆರವುಗೊಳಿಸಲಾದ ಭದ್ರತಾ ವಾಹನಗಳು ಮತ್ತು ಬ್ಯಾರಿಕೇಡ್‌ ಗಳು ಬುಧವಾರದಂದು ಭಾರತ ಸರ್ಕಾರದ ಕ್ರಮಕ್ಕೆ ಪುರಾವೆ ನೀಡುವಂತಿದೆ.

ಏತನ್ಮಧ್ಯೆ, "ನಾವು ಭದ್ರತಾ ವಿಷಯಗಳ ಬಗ್ಗೆ ಪ್ರತಿಕ್ರಿಯಿಸುವುದಿಲ್ಲ" ಎಂದು ಬ್ರಿಟಿಷ್ ಹೈ ಕಮಿಷನ್ ವಕ್ತಾರರು ಹೇಳಿದ್ದಾರೆ.

ಲಂಡನ್‌ನಲ್ಲಿರುವ ಭಾರತೀಯ ದೂತಾವಾಸದ ಮೇಲೆ ನಡೆದ ದಾಳಿಯ ನಂತರ, ಭಾರತ ಸರ್ಕಾರವು ಬ್ರಿಟಿಷ್ ಹೈಕಮಿಷನ್‌ನಲ್ಲಿ ಅತ್ಯಂತ ಹಿರಿಯ ರಾಜತಾಂತ್ರಿಕರನ್ನು ಕರೆಸುವ ಮೂಲಕ ಪ್ರತಿಭಟನೆಯನ್ನು ಸಲ್ಲಿಸಿತ್ತು. ದಾಳಿಕೊರರು ಹೈಕಮಿಷನ್ ಆವರಣಕ್ಕೆ ಪ್ರವೇಶಿಸಲು ಅನುಮತಿಸಿದ ಬ್ರಿಟಿಷ್ ಭದ್ರತೆಯ ಸಂಪೂರ್ಣ ಅನುಪಸ್ಥಿತಿಯ ಬಗ್ಗೆ ಭಾರತೀಯ ವಿದೇಶಾಂಗ ಸಚಿವಾಲಯ ವಿವರಣೆಯನ್ನು ಕೋರಿತ್ತು.

English summary : Security canceled for British High Commission office, residence: India gave good lesson

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
ಸಂಸದ ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...