ಸಿದ್ದರಾಮಯ್ಯರನ್ನು ಸೋಲಿಸಲು ಕಾಂಗ್ರೆಸ್ನಲ್ಲೇ ತಂಡ ಸಿದ್ಧವಾಗಿದೆ | JANATA NEWS
ಬೆಂಗಳೂರು : ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಸೋಲಿಸಲು ಅವರ ಪಕ್ಷದಲ್ಲೇ ತಂಡ ಸಿದ್ಧವಾಗಿದೆ ಎಂದು ಜೆಡಿಎಸ್ ನಾಯಕ ಹೆಚ್ಡಿ ಕುಮಾರಸ್ವಾಮಿ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಅವರು, ರಾಷ್ಟ್ರೀಯ ಪಕ್ಷದಲ್ಲಿ ಮುಖ್ಯಮಂತ್ರಿ ಅಭ್ಯರ್ಥಿಗೆ ಕ್ಷೇತ್ರ ಸಿಗುತ್ತಿಲ್ಲ ಅಂದರೆ ಏನರ್ಥ? ಅವರಿಗೆ ಇಂಥ ಸ್ಥಿತಿ ಬರಬಾರದಿತ್ತು. ಈ ರೀತಿ ಗೊಂದಲ ಸೃಷ್ಟಿ ಮಾಡಿದ್ದು ಅವರ ಪಕ್ಷದವರೇ ಎಂದು ಕುಮಾರಸ್ವಾಮಿ ಹೇಳಿದ್ದಾರೆ.
ಜೆಡಿಎಸ್ ಪಕ್ಷದ ನಾಯಕರ್ಯಾರೂ ಕಾಂಗ್ರೆಸ್ ಸೇರುವುದಿಲ್ಲ ಅಂತ ಹೇಳಿದರು. ಸಿದ್ದರಾಮಯ್ಯನವರನ್ನು ಸೋಲಿಸಲು ಅವರ ಪಕ್ಷದ ಕೆಲ ನಾಯಕರೇ ಒಂದು ಷಡ್ಯಂತ್ರ ರೂಪಿಸಿ ಅದನ್ನು ಕಾರ್ಯರೂಪಕ್ಕೆ ತರುವ ಪ್ರಯತ್ನದಲ್ಲಿದ್ದಾರೆ, ಆ ಪಕ್ಷವನ್ನು ಸೋಲಿಸಲು ಎದುರಾಳಿಗಳೇ ಬೇಡ, ಅವರ ಆಂತರಿಕ ಜಗಳಗಳಿಂದ ತಾವು ತೋಡಿಕೊಂಡ ಖೆಡ್ಡಾಗೆ ಬೀಳುತ್ತಾರೆ ಎಂದು ಕುಮಾರಸ್ವಾಮಿ ಹೇಳಿದರು.