Tue,Aug04,2026
ಕನ್ನಡ / English

ರಂಗಭೂಮಿ ಹಿರಿಯ ಕಲಾವಿದ ಬೆಳಗಲ್ಲು ವೀರಣ್ಣ ನಿಧನ | JANATA NEWS

02 Apr 2023

ಬಳ್ಳಾರಿ : ಭೀಕರ ರಸ್ತೆ ಅಪಘಾತದಲ್ಲಿ ಅಂತಾರಾಷ್ಟ್ರೀಯ ತೊಗಲುಗೊಂಬೆ ಕಲಾವಿದ ನಾಡೋಜ ಬೆಳಗಲ್ಲು ವೀರಣ್ಣ ಅವರ ಕಾರು ನಿಯಂತ್ರಣ ತಪ್ಪಿ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ಬಳಿ ಪಲ್ಟಿಯಾಗಿದೆ.

ಘಟನೆಯಲ್ಲಿ ಹಿರಿಯ ರಂಗಕಲಾವಿದ ನಾಡೋಜ ಬೆಳಗಲ್ಲು ವೀರಣ್ಣ ಅವರು ಮೃತಪಟ್ಟಿದ್ದಾರೆ. ಬೆಳಗಲ್ಲು ವೀರಣ್ಣನವರ ನಿಧನಕ್ಕೆ ಮುಖ್ಯಮಂತ್ರಿ ಸೇರಿದಂತೆ ರಂಗ ಕಲಾವಿದರು, ಗೊಂಬ ಕಲಾತಂಡದ ಸದಸ್ಯರು ಸೇರಿದಂತೆ ಅನೇಕ ಗಣ್ಯರು ಸಂತಾಪ ಸೂಚಿಸಿದ್ದಾರೆ.

ಈ ಅಪಘಾತದಲ್ಲಿ ಬೆಳಗಲ್ಲು ವೀರಣ್ಣನವರ ಪುತ್ರ ಹನುಮಂತಪ್ಪ ಅವರಿಗೂ ಗಾಯಗಳಾಗಿವೆ. ಅವರಿಗೆ ಸ್ಥಳಿಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

ಅಮೆರಿಕಾ ಸೇರಿದಂತೆ ಬೇರೆ ಬೇರೆ ದೇಶಗಳಲ್ಲಿ ತೊಗಲುಗೊಂಬೆ ಪ್ರದರ್ಶನ ನೀಡಿದ್ದ ನಾಡೋಜ ಬೆಳಗಲ್ಲು ವೀರಣ್ಣ ಸಾವನ್ನಪ್ಪಿದ್ದಾರೆ. ಬಳ್ಳಾರಿ ಮೂಲದ ಬೆಳಗಲ್ಲು ವೀರಣ್ಣ ನಾಡೋಜ ಪ್ರಶಸ್ತಿ ಸೇರಿದಂತೆ ಹಲವು ಪ್ರಶಸ್ತಿ, ಪುರಸ್ಕಾರಗಳು ಸಂದಿವೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ತೊಗಲು ಗೊಂಬೆಯಾಟ ಎಂಬ ಜಾನಪದ ಕಲೆಗೆ ಹೊಸ ಸ್ಪರ್ಶ ನೀಡಿ, ಹೊಸ ವೈಭವವನ್ನು ಸೃಷ್ಟಿಸಿದ ಖ್ಯಾತ ರಂಗಭೂಮಿ ಮತ್ತು ಜಾನಪದ ಕಲಾವಿದ ನಾಡೋಜ ಬೆಳಗಲ್ಲು ವೀರಣ್ಣನವರು ರಸ್ತೆ ಅಪಘಾತಕ್ಕೀಡಾಗಿ ಇಹಲೋಕ ತ್ಯಜಿಸಿದರು ಎಂಬ ಸುದ್ದಿ ತಿಳಿದು ಅತ್ಯಂತ ದುಃಖವಾಯಿತು. ಮೃತರ ಆತ್ಮಕ್ಕೆ ಸದ್ಗತಿ ದೊರೆಯಲಿ. ನಿಧನದ ದುಃಖ ತಡೆದುಕೊಳ್ಳುವ ಶಕ್ತಿ ಅವರ ಕುಟುಂಬಕ್ಕೆ ದೇವರು ಕರುಣಿಸಲೆಂದು ಪ್ರಾರ್ಥಿಸುತ್ತೇನೆ ಎಂದು ಅವರು ಸಂತಾಪ ವ್ಯಕ್ತಪಡಿಸಿದ್ದಾರೆ.

RELATED TOPICS:
English summary :Belgal Veeranna passed away

 ದೆಹಲಿ ಪೊಲೀಸ್ ಕ್ರಮವನ್ನು ಸಮರ್ಥಿಸಿಕೊಂಡ ದೆಹಲಿ ಪೊಲೀಸ್ ಮಹಾಸಂಘ; ರಾಜಕೀಯ ನಿರ್ದೇಶನದ ಆರೋಪ ಸುಳ್ಳು

ಪ್ರತಿಭಟನೆಯ ವೇಳೆ ನಡೆದ ಸಂಘರ್ಷದಲ್ಲಿ ಗಾಯಗೊಂಡ ದೆಹಲಿ ಪೊಲೀಸ್ ಸಿಬ್ಬಂದಿಯ ಕುಟುಂಬಗಳಿಂದ ನ್ಯಾಯಕ್ಕಾಗಿ ಆಗ್ರಹ

ಸಿಜೆಪಿ ಕಾನೂನು ಬೆಂಬಲಕ್ಕೆ ನಿಂತ ಕಪಿಲ್ ಸಿಬಲ್ ಶಿಕ್ಷಣ ಮಂತ್ರಿಯಾಗಿದ್ದಾಗ ಹೆಚ್ಚು ಪೇಪರ್ ಲೀಕ್ - ಬಿಜೆಪಿಯ ಸುಧಾಂಶು ತ್ರಿವೇದಿ

ಸಂಸತ್ತಿನಲ್ಲಿ ಆಧಾರರಹಿತ ಹೇಳಿಕೆ : ರಾಹುಲ್ ಗಾಂಧಿ ಕ್ಷಮೆಯಾಚಿಸಬೇಕೆಂದು ಎನ್‌ಡಿಎ ಸಂಸದರ ಆಗ್ರಹ

ಪಿಒಜೆಕೆಯಲ್ಲಿ ನಾಗರಿಕರ ಮೇಲೆ ಗುಂಡಿನ ಸುರಿಮಳೆ ಖಂಡಿಸಿ, ಪಾಕಿಸ್ತಾನ ಬೆಂಬಲಿತ ಚುನಾವಣೆಗಳನ್ನು ತೋರಿಕೆಯ ವ್ಯಾಯಾಮ ಎಂದ ಭಾರತ

6 ಪ್ರಶ್ನೆ ಪತ್ರಿಕೆಗಳ ಸೋರಿಕೆ : ಪಂಜಾಬ್ ಸಚಿವರ ರಾಜೀನಾಮೆಗೆ ಎನ್‌ಡಿಎ ಸಂಸದರ ಆಗ್ರಹ; ಸಂಸತ್ತಿನಲ್ಲಿ ರಾಜಕೀಯ ಜಟಾಪಟಿ

ಪರೀಕ್ಷಾ ಸುಧಾರಣೆಗಳ ಕುರಿತು ಉನ್ನತ ಅಧಿಕಾರದ ಕಾರ್ಯಪಡೆ ಘೋಷಿಸಿದ ಪ್ರಧಾನಿ ಮೋದಿ : ನೇತೃತ್ವ ವಹಿಸಲು ನಂದನ್ ನಿಲೇಕಣಿ ಆಯ್ಕೆ

ಅಣೆಕಟ್ಟುಗಳ ಹೂಳೆತ್ತುವಿಕೆ, ಮೇಕೆದಾಟು ಮತ್ತು ಮಹದಾಯಿ ಯೋಜನೆಗಳಿಗೆ ಕೇಂದ್ರದ ಬೆಂಬಲದ ಭರವಸೆ

ಲೋಕಸಭೆಯಲ್ಲಿ ವಿರೋಧ ಪಕ್ಷಗಳ ಗದ್ದಲ: ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆ ತಡೆ ಮಸೂದೆ ಮೇಲಿನ ಚರ್ಚೆ ಮುಂದೂಡಿಕೆ

 ಹಿಂದೂ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಆರೋಪ: ಕುನಾಲ್ ಕಮ್ರಾ, ವಾಂಗ್‌ಚುಕ್ ಮತ್ತು ಡಿಪ್ಕೆ ವಿರುದ್ಧ ದೂರು ದಾಖಲು

ಪ್ರಶ್ನೆ ಪತ್ರಿಕೆ ಸೋರಿಕೆ ಆದರೆ ಜಿಲ್ಲಾಧಿಕಾರಿಗಳೇ ಹೊಣೆ ಎನ್ನುವುದು ಹೊಣೆಗೇಡಿತನ - ಶಾಸಕ ಯತ್ನಾಳ್

ರಾಜನಾಥ್ ಸಿಂಗ್ - ಪಾಕಿಸ್ತಾನದೊಂದಿಗೆ ಮಾತುಕತೆ ಪಿಒಕೆ ಬಗ್ಗೆ ಮಾತ್ರ; ಭಯೋತ್ಪಾದಕರು ಮತ್ತು ಭಯೋತ್ಪಾದನೆ ಪ್ರಾಯೋಜಿಸುವ ದೇಶ ಒಂದೇ

ನ್ಯೂಸ್ MORE NEWS...