Thu,Sep11,2025
ಕನ್ನಡ / English

85 ವರ್ಷದ ವೃದ್ಧೆಯನ್ನು ಅತ್ಯಾಚಾರ ಮಾಡಿ ಕೊಂದ ಆರೋಪಿ ಅರೆಸ್ಟ್! | JANATA NEWS

06 Apr 2023

ಹಾಸನ : 85 ವರ್ಷದ ವೃದ್ಧೆಯ ಮೇಲೆ ಅತ್ಯಾಚಾರ ಎಸಗಿ ಕೊಂದಿರುವ ಪೈಶಾಚಿಕ ಕೃತ್ಯ ಹಾಸನ ಜಿಲ್ಲೆಯಲ್ಲಿ ತಡವಾಗಿ ಬೆಳಕಿಗೆ ಬಂದಿದೆ. ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

32 ವರ್ಷದ ಮಿಥುನ್ ಕುಮಾರ್ ಬಂಧಿತ ವ್ಯಕ್ತಿ. ಮಿಥುನ್ ಅರಸೀಕೆರೆ ತಾಲ್ಲೂಕಿನ ಯರೆಹಳ್ಳಿ ಗ್ರಾಮದ ನಿವಾಸಿಯಾಗಿದ್ದಾನೆ. ಮಿಥುನ್ ವೃದ್ಧೆಯ ಮೇಲೆ ಅತ್ಯಾಚಾರ ಎಸಗಿ ಕೊಂದಿದ್ದಾನೆ .

ಹಾಸನ ಜಿಲ್ಲೆ ಅರಸೀಕೆರೆ ತಾಲ್ಲೂಕಿನ ಯರೇಹಳ್ಳಿ ಗ್ರಾಮದಲ್ಲಿ ಏಪ್ರಿಲ್ 1 ರಂದು ವೃದ್ಧೆ ತನ್ನ ಜಮೀನನ ಬಳಿ ತೆರಳಿದ್ದಳು. ತಾಯಿ ಮನೆಗೆ ಬಂದಿಲ್ಲ ಎಂದು ಏಪ್ರಿಲ್ 2 ರಂದು ವೃದ್ಧೆ ಕುಟುಂಬ ಸದಸ್ಯರು ಹುಡುಕಾಟ ನಡೆಸಿದ್ದಾರೆ. ಈ ವೇಳೆ ಯರೆಹಳ್ಳಿ ಗ್ರಾಮದ ಜಮೀನಿನಲ್ಲಿ ಸಂಪೂರ್ಣ ನಗ್ನ ಸ್ಥಿತಿಯಲ್ಲಿ ವೃದ್ಧೆ ಮೃತದೇಹ ಪತ್ತೆಯಾಗಿದೆ. ಪ್ರಕರಣ ಸಂಬಂಧ ಅನುಮಾನಸ್ಪದ ಸಾವು ಕೇಸ್ ದಾಖಲಿಸಿಕೊಂಡ ಪೊಲೀಸರು ತನಿಖೆ ಆರಂಭಿಸಿದ್ದರು.

ಏಪ್ರಿಲ್ 1 ರಂದು ತನ್ನ ಜಮೀನನ ಬಳಿ ತೆರಳಿದ್ದ 85 ವರ್ಷದ ವೃದ್ಧೆ ದಾರಿ ಗೊತ್ತಿಲ್ಲದೆ ಬೇರೆ ಕಡೆ ಹೋಗಿದ್ದಾರೆ. ಈ ವೇಳೆ ಬೈಕ್​ ಮೂಲಕ ಬಂದ ಮಿಥುನ್ ಕುಮಾರ್ (32) ಎಂಬಾತ ವೃದ್ಧೆ ಜೊತೆ ಮಾತನಾಡಿ ಜಮೀನಿಗೆ ಡ್ರಾಪ್ ಮಾಡುವುದಾಗಿ ಹೇಳಿದ್ದಾನೆ. ನಡೆಯಲು ಕಷ್ಟಸಾಧ್ಯವೆಂದರಿತ ವೃದ್ಧೆ ಈತನ ಮಾತು ನಂಬಿದ ಬೈಕ್​ನಲ್ಲಿ ಕುಳಿತಿದ್ದಾರೆ. ಆದರೆ ಅಜ್ಜಿಯನ್ನು ಜಮೀನಿಗೆ ಕರೆದುಕೊಂಡು ಹೋಗದೆ ನಿರ್ಜನ ಪ್ರದೇಶಕ್ಕೆ ಕೊಂಡೊಯ್ದಿದ್ದಾನೆ. ಈ ವೇಳೆ ಅತ್ಯಾಚಾರ ಯತ್ನಕ್ಕೆ ಪ್ರತಿರೋಧ ತೋರಿದ ಅಜ್ಜಿಯ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆಗೈದಿದ್ದಾನೆ.

ಆರೋಪಿ ಮಿಥುನ್​​ ಐದು ವರ್ಷಗಳ ಹಿಂದೆ ಇದೇ ರೀತಿಯಲ್ಲಿ ವೃದ್ಧೆ ಮೇಲೆ ಅತ್ಯಾಚಾರ ಯತ್ನ ಮಾಡಿದ್ದನು. ಅದೇ ಸುಳಿವು ಹಿಡಿದು ವಿಚಾರಣೆ ನಡೆಸಿದಾಗ ಮಾಡಿದ ಕೃತ್ಯ ಒಪ್ಪಿಕೊಂಡಿದ್ದಾನೆ. ಬಾಣಾವರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

RELATED TOPICS:
English summary :Accused of raping and killing an 85-year-old woman arrested!

ಕಾಂಗ್ರೆಸ್ ಶಾಸಕ ಕೆ.ಸಿ.ವೀರೇಂದ್ರ ಅಕ್ರಮ ಆನ್‌ಲೈನ್ ಬೆಟ್ಟಿಂಗ್‌ನಲ್ಲಿ ವಂಚಿಸಿದ ಪ್ರಕರಣ : ಇಡಿ ದಾಳಿಯಲ್ಲಿ ರೂ.100 ಕೋಟಿ ಚಿನ್ನ ಬೆಳ್ಳಿ ವಶ
ಕಾಂಗ್ರೆಸ್ ಶಾಸಕ ಕೆ.ಸಿ.ವೀರೇಂದ್ರ ಅಕ್ರಮ ಆನ್‌ಲೈನ್ ಬೆಟ್ಟಿಂಗ್‌ನಲ್ಲಿ ವಂಚಿಸಿದ ಪ್ರಕರಣ : ಇಡಿ ದಾಳಿಯಲ್ಲಿ ರೂ.100 ಕೋಟಿ ಚಿನ್ನ ಬೆಳ್ಳಿ ವಶ
ಉಪರಾಷ್ಟ್ರಪತಿ ಚುನಾವಣೆಯಲ್ಲಿ ಎನ್‌ಡಿಎ ಅಭ್ಯರ್ಥಿ ಸಿ.ಪಿ. ರಾಧಾಕೃಷ್ಣನ್ ಗೆಲವು
ಉಪರಾಷ್ಟ್ರಪತಿ ಚುನಾವಣೆಯಲ್ಲಿ ಎನ್‌ಡಿಎ ಅಭ್ಯರ್ಥಿ ಸಿ.ಪಿ. ರಾಧಾಕೃಷ್ಣನ್ ಗೆಲವು
ನೇಪಾಳದಲ್ಲಿ ಕಮ್ಯುನಿಸ್ಟ್ ಪಕ್ಷದ ಸರ್ಕಾರದ ಪತನದ ಬಳಿಕವೂ ಸಂಸತ್ತು, ಸುಪ್ರೀಂ ಕೋರ್ಟ್ ಮೇಲೆ ದಾಳಿ ನಡೆಸಿದ ಪ್ರತಿಭಟನಾಕಾರರು :
ನೇಪಾಳದಲ್ಲಿ ಕಮ್ಯುನಿಸ್ಟ್ ಪಕ್ಷದ ಸರ್ಕಾರದ ಪತನದ ಬಳಿಕವೂ ಸಂಸತ್ತು, ಸುಪ್ರೀಂ ಕೋರ್ಟ್ ಮೇಲೆ ದಾಳಿ ನಡೆಸಿದ ಪ್ರತಿಭಟನಾಕಾರರು :
ನಿಮ್ಮ ನಡವಳಿಕೆಯು ಕಾಂಗ್ರೆಸ್ ಪಕ್ಷದ ಸಾಂಪ್ರದಾಯಿಕ ದುರಹಂಕಾರ ಮತ್ತು ಅಹಂಕಾರಕ್ಕೆ ಸಾಕ್ಷಿಯಾಗಿದೆ - ಖರ್ಗೆ ರನ್ನು ತರಾಟೆಗೆ ತೆಗೆದುಕೊಂಡ ಎಚ್‌ಡಿಕೆ
ನಿಮ್ಮ ನಡವಳಿಕೆಯು ಕಾಂಗ್ರೆಸ್ ಪಕ್ಷದ ಸಾಂಪ್ರದಾಯಿಕ ದುರಹಂಕಾರ ಮತ್ತು ಅಹಂಕಾರಕ್ಕೆ ಸಾಕ್ಷಿಯಾಗಿದೆ - ಖರ್ಗೆ ರನ್ನು ತರಾಟೆಗೆ ತೆಗೆದುಕೊಂಡ ಎಚ್‌ಡಿಕೆ
ಶ್ರೀ ನಾರಾಯಣ ಗುರುಗಳ ಜನ್ಮ ದಿನಾಚರಣೆಯಂದು  ಅವರ ದೃಷ್ಟಿಕೋನ, ಪ್ರಭಾವ ಸ್ಮರಿಸಿದ ಪ್ರಧಾನಿ ಮೋದಿ
ಶ್ರೀ ನಾರಾಯಣ ಗುರುಗಳ ಜನ್ಮ ದಿನಾಚರಣೆಯಂದು ಅವರ ದೃಷ್ಟಿಕೋನ, ಪ್ರಭಾವ ಸ್ಮರಿಸಿದ ಪ್ರಧಾನಿ ಮೋದಿ
ಭಾರತ-ಅಮೆರಿಕ ನಡುವೆ ಜಾಗತಿಕ ಕಾರ್ಯತಂತ್ರದ ಸಹಭಾಗಿತ್ವ ಬಹಳ ಸಕಾರಾತ್ಮಕವಾಗಿದೆ - ಪ್ರಧಾನಿ ಮೋದಿ
ಭಾರತ-ಅಮೆರಿಕ ನಡುವೆ ಜಾಗತಿಕ ಕಾರ್ಯತಂತ್ರದ ಸಹಭಾಗಿತ್ವ ಬಹಳ ಸಕಾರಾತ್ಮಕವಾಗಿದೆ - ಪ್ರಧಾನಿ ಮೋದಿ
ಭಾರತೀಯ ಪೌರತ್ವ ಪಡೆಯುವ ಮೂರು ವರ್ಷಗಳ ಮೊದಲೇ ಮತ ಚಲಾವಣೆ : ಸೋನಿಯಾ ಗಾಂಧಿ ವಿರುದ್ಧ ಕ್ರಿಮಿನಲ್ ದೂರು
ಭಾರತೀಯ ಪೌರತ್ವ ಪಡೆಯುವ ಮೂರು ವರ್ಷಗಳ ಮೊದಲೇ ಮತ ಚಲಾವಣೆ : ಸೋನಿಯಾ ಗಾಂಧಿ ವಿರುದ್ಧ ಕ್ರಿಮಿನಲ್ ದೂರು
11
11
ಭಾರತವನ್ನು ಹೆಸರಿಸುವಾಗ ಹೆಚ್ಚು ಗೌರವಯುತ ವಿಧಾನ ಬಳಸಲು ಅಮೆರಿಕಕ್ಕೆ ನಿರ್ದೇಶಿಸಿದ ಫಿನ್ಲ್ಯಾಂಡ್ ಅಧ್ಯಕ್ಷ
ಭಾರತವನ್ನು ಹೆಸರಿಸುವಾಗ ಹೆಚ್ಚು ಗೌರವಯುತ ವಿಧಾನ ಬಳಸಲು ಅಮೆರಿಕಕ್ಕೆ ನಿರ್ದೇಶಿಸಿದ ಫಿನ್ಲ್ಯಾಂಡ್ ಅಧ್ಯಕ್ಷ
2 ಮತದಾರರ ಗುರುತಿನ ಚೀಟಿಹೊಂದಿದಕ್ಕಾಗಿ ಕಾಂಗ್ರೆಸ್ ವಕ್ತಾರ ಪವನ್ ಖೇರಾಗೆ ಚುನಾವಣಾ ಕಚೇರಿಯ ನೋಟಿಸ್
2 ಮತದಾರರ ಗುರುತಿನ ಚೀಟಿಹೊಂದಿದಕ್ಕಾಗಿ ಕಾಂಗ್ರೆಸ್ ವಕ್ತಾರ ಪವನ್ ಖೇರಾಗೆ ಚುನಾವಣಾ ಕಚೇರಿಯ ನೋಟಿಸ್
ರಾಜಕೀಯಕ್ಕೂ ಯಾವುದೇ ಸಂಬಂಧವಿಲ್ಲದ ನನ್ನ ತಾಯಿ ವಿರುದ್ಧ ಅನುಚಿತ ಭಾಷೆಯನ್ನು ಏಕೆ ಬಳಸಿದ್ದಾರೆ? - ಪ್ರಧಾನಿ ಮೋದಿ
ರಾಜಕೀಯಕ್ಕೂ ಯಾವುದೇ ಸಂಬಂಧವಿಲ್ಲದ ನನ್ನ ತಾಯಿ ವಿರುದ್ಧ ಅನುಚಿತ ಭಾಷೆಯನ್ನು ಏಕೆ ಬಳಸಿದ್ದಾರೆ? - ಪ್ರಧಾನಿ ಮೋದಿ
ಸೆಮಿಕಾನ್ ಇಂಡಿಯಾ 2025 : ವಿಕ್ರಮ್ 32-ಬಿಟ್ ಪ್ರೊಸೆಸರ್  ಸೆಮಿಕಂಡಕ್ಟರ್ ಚಿಪ್ ಬಿಡುಗಡೆ ಮಾಡಿದ ಪ್ರಧಾನಿ ಮೋದಿ
ಸೆಮಿಕಾನ್ ಇಂಡಿಯಾ 2025 : ವಿಕ್ರಮ್ 32-ಬಿಟ್ ಪ್ರೊಸೆಸರ್ ಸೆಮಿಕಂಡಕ್ಟರ್ ಚಿಪ್ ಬಿಡುಗಡೆ ಮಾಡಿದ ಪ್ರಧಾನಿ ಮೋದಿ

ನ್ಯೂಸ್ MORE NEWS...