ನಮ್ಮದು ಸಣ್ಣ ಪಕ್ಷ. ಅಂತ ದೊಡ್ಡ ನಾಯಕರನ್ನು ನಾವು ನಿರೀಕ್ಷೆ ಇಟ್ಟುಕೊಳ್ಳುವುದಿಲ್ಲ! | JANATA NEWS
ಬೆಳ್ತಂಗಡಿ : ಅಂತಹ ದೊಡ್ಡ ನಾಯಕರು ಅವಶ್ಯಕತೆ ಇಲ್ಲನಮ್ಮದು ಸಣ್ಣ ಪಕ್ಷ. ಅಂತ ದೊಡ್ಡ ನಾಯಕರನ್ನು ನಾವು ನಿರೀಕ್ಷೆ ಇಟ್ಟುಕೊಳ್ಳುವುದಿಲ್ಲ, ಅಂತಹ ದೊಡ್ಡ ನಾಯಕರ ಬಗ್ಗೆ ಯಾವುದೇ ನಿರೀಕ್ಷೆಯಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಹೇಳಿದರು.
ಜಗದೀಶ್ ಶೆಟ್ಟರ್ ಬಿಜೆಪಿಗೆರಾಜೀನಾಮೆ ವಿಚಾರವಾಗಿ ಪ್ರತಿಕ್ರಿಯಿಸಿ, ಜಗದೀಶ್ ಶೆಟ್ಟರ್ ನನ್ನೊಂದಿಗೆ ಯಾವುದೇ ಸಂಪರ್ಕದಲ್ಲಿ ಇಲ್ಲ. ಅಂತಹ ದೊಡ್ಡ ನಾಯಕರ ಅವಶ್ಯಕತೆ ನಮಗಿಲ್ಲ, ಸಣ್ಣವರು ಬಂದ್ರೆ ಸೇರಿಸಿಕೊಳ್ಳುತ್ತೇವೆ. ನಮ್ಮದು ಸಣ್ಣ ಪಕ್ಷ, ದೊಡ್ಡ ನಾಯಕರ ಬಗ್ಗೆ ನಿರೀಕ್ಷೆ ಇಟ್ಟುಕೊಳ್ಳುವುದಿಲ್ಲ ಎಂದು ಸ್ಪಷ್ಟಪಡಿಸಿದರು.
ಜಗದೀಶ್ ಶೆಟ್ಟರ್ ರಾಜೀನಾಮೆ ಬಿಜೆಪಿಯ ಆಂತರಿಕ ವಿಚಾರವಾಗಿದೆ. ಅವರೊಬ್ಬ ಅನುಭವಸ್ಥ ರಾಜಕಾರಣಿ, ಜನಸಂಘದ ಕಾಲದಿಂದ ಕೆಲಸ ಮಾಡಿದವರು. ಅವರಂತವರೇ ಇವತ್ತು ಇಂತಹ ತೀರ್ಮಾನ ಮಾಡಿದ್ದಾರೆ. ನಾನು ಈ ಹಿಂದೆ ಬಿಜೆಪಿಯ ಡಿಎನ್ ಬಗ್ಗೆ ಮಾತಾಡಿದ್ದೆ. ಪ್ರಸ್ತುತ ಬಿಜೆಪಿಯಲ್ಲಿನ ಚಟುವಟಿಕೆಗಳಿಗೆ ಪೂರಕವಾಗಿದೆ ಎಂದು ವ್ಯಂಗ್ಯವಾಡಿದರು.
ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಆಗಮಿಸಿ ಇಂದು ಮುಂಜಾನೆ ಮಂಜುನಾಥ ಸ್ವಾಮಿಯ ದರ್ಶನ ಪಡೆದ ಅವರು ಬಳಿಕ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾಗಿ ಆಶೀರ್ವಾದ ಪಡೆದರು. ಹೆಗ್ಗಡೆಯವರು ಮಾಜಿ ಮುಖ್ಯಮಂತ್ರಿಗಳನ್ನು ಕ್ಷೇತ್ರದ ಪರವಾಗಿ ಗೌರವಿಸಿದರು.