Tue,Aug04,2026
ಕನ್ನಡ / English

ಈ ಬಾರಿ ಬಿಜೆಪಿ 150 ಸ್ಥಾನ ಪಡೆದು ಅಧಿಕಾರಕ್ಕೆ ಬಂದು ಆಡಳಿತ ನಡೆಸುವುದು ನಿಶ್ಚಿತ | JANATA NEWS

26 Apr 2023

ಗದಗ : ಈ ಚುನಾವಣೆಯಲ್ಲಿ ಬಿಜೆಪಿ ಬಹುಮತದಲ್ಲಿ ಅಧಿಕಾರಕ್ಕೆ ಬರಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಹೇಳಿದರು.

ಗದಗದಲ್ಲಿ ಮಾತನಾಡಿದ ಅವರು, ಮಾಜಿ ಸಿಎಂ ಬಿಎಸ್‌ ಯಡಿಯೂರಪ್ಪ ಮರ್ಗದರ್ಶನದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಚುನಾವಣೆ ನಡೆಯುತ್ತಿದೆ ಎಂದರು. ಸ್ವಜನ ಪಕ್ಷಪಾತ ಹಾಗೂ ಕಾಂಗ್ರೆಸ್ ಆಡಳಿತದಲ್ಲಿನ ಭ್ರಷ್ಟಾಚಾರ ನಿರ್ಮೂಲನೆಗಾಗಿ ಮತದಾರರು ಕಾಂಗ್ರೆಸ್ ನ್ನು ತಿರಸ್ಕರಿಸಿದ್ದಾರೆ. ಭಯೋತ್ಪಾದನೆಗೆ ಬೆಂಬಲಿಸಿರುವುದು, ನಿರಂತರವಾಗಿ ನಡೆದ ಗೋಹತ್ಯೆ, ರಾಜ್ಯದ 24 ಹಿಂದು ಕಾರ್ಯಕರ್ತರ ಹತ್ಯೆ ನಡೆಸಿರುವುದನ್ನು ಜನರು ನೋಡಿದ್ದಾರೆ ಎಂದು ಕಾಂಗ್ರೆಸ್ ವಿರುದ್ಧ ಹರಿಹಾಯ್ದರು.

ಗರೀಬಿ ಹಟಾವೊ ಹೆಸರಲ್ಲಿ ಕಾಂಗ್ರೆಸ್ ಮತಗಳನ್ನಷ್ಟೇ ಪಡೆದಿದೆ. ಆದರೆ ನರೇಂದ್ರ ಮೋದಿ ಸರ್ಕಾರದಲ್ಲಿ ಗರಿಬಿ ಹಟಾವೋ ಯೋಜನೆಗಳನ್ನ ತರಲಾಗಿದೆ. ಮನೆಗಳಿಗೆ ಗ್ಯಾಸ್, ಶೌಚಾಲಯ, ಜನರಿಕ್ ಔಷಧಿ ನೀಡಿದ್ದು ಜನರ ಮನಸ್ಸಿನಲ್ಲಿ ಉಳಿದಿದೆ ಎಂದು ಹೇಳಿದರು.

ಹಳೆ ಮೈಸೂರು ಭಾಗದಲ್ಲೂ ಅಭೂತಪೂರ್ವ ಬೆಂಬಲ ಸಿಗುತ್ತಿದೆ. ರೋಡ್ ಶೋನಲ್ಲಿ ನಿರೀಕ್ಷೆಗೂ ಮೀರಿ ಜನಸಾಗರ ಸೇರುತ್ತಿದೆ ಎಂದ ನಳಿನ್ ಕುಮಾರ್ ಕಟೀಲ್, ಭಯೋತ್ಪಾದನೆಗೆ ಬೆಂಗಾವಲಾಗಿ ನಿಂತು ಕಾಂಗ್ರೆಸ್ ಪುಷ್ಟೀಕರಣ ರಾಜಕಾರಣ ಮಾಡುತ್ತದೆ ಎಂದರು.

ಕಾಂಗ್ರೆಸ್ ನ ಸೋಲು ಖಚಿತವಾಗಿದ್ದು, ಬಿಜೆಪಿ 140ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಗೆಲುವು ದಾಖಲಿಸುವ ಮೂಲಕ ಬಿಜೆಪಿ ಅಧಿಕಾರಕ್ಕೆ ಬರುತ್ತದೆ ಎಂದರು.

ಹಿಂದಿನಿಂದಲೂ ಗದಗ ಕ್ಷೇತ್ರದಲ್ಲಿ ಗೂಂಡಾಗಿರಿ ಪ್ರವೃತ್ತಿ ಮಿತಿಮೀರಿದೆ. ಕಳೆದ ಕೆಲ ದಿನಗಳ ಹಿಂದೆ ನಾಮಪತ್ರ ಸಲ್ಲಿಸುವ ವೇಳೆ ಅಭ್ಯರ್ಥಿ ಅನಿಲ ಮೆಣಸಿನಕಾಯಿ ಅವರ ಮೇಲೆ ಹಲ್ಲೆಗೆ ಯತ್ನ ನಡೆಸಿರುವುದು ಕಾಂಗ್ರೆಸ್ ನ ಗೂಂಡಾಗಿರಿ ಪ್ರವೃತ್ತಿ ತಿಳಿಯುತ್ತದೆ. ಈ ಬಾರಿ ಚುನಾವಣೆಯಲ್ಲಿ ಜಿಲ್ಲೆಯ ನಾಲ್ಕು ಕ್ಷೇತ್ರಗಳಲ್ಲಿ ವಿಜಯ ದಾಖಲಿಸುತ್ತದೆ ಎಂದು ಹೇಳಿದರು.

RELATED TOPICS:
English summary :This time, BJP is sure to win 150 seats and come to power

 ದೆಹಲಿ ಪೊಲೀಸ್ ಕ್ರಮವನ್ನು ಸಮರ್ಥಿಸಿಕೊಂಡ ದೆಹಲಿ ಪೊಲೀಸ್ ಮಹಾಸಂಘ; ರಾಜಕೀಯ ನಿರ್ದೇಶನದ ಆರೋಪ ಸುಳ್ಳು
ದೆಹಲಿ ಪೊಲೀಸ್ ಕ್ರಮವನ್ನು ಸಮರ್ಥಿಸಿಕೊಂಡ ದೆಹಲಿ ಪೊಲೀಸ್ ಮಹಾಸಂಘ; ರಾಜಕೀಯ ನಿರ್ದೇಶನದ ಆರೋಪ ಸುಳ್ಳು
ಪ್ರತಿಭಟನೆಯ ವೇಳೆ ನಡೆದ ಸಂಘರ್ಷದಲ್ಲಿ ಗಾಯಗೊಂಡ ದೆಹಲಿ ಪೊಲೀಸ್ ಸಿಬ್ಬಂದಿಯ ಕುಟುಂಬಗಳಿಂದ ನ್ಯಾಯಕ್ಕಾಗಿ ಆಗ್ರಹ
ಪ್ರತಿಭಟನೆಯ ವೇಳೆ ನಡೆದ ಸಂಘರ್ಷದಲ್ಲಿ ಗಾಯಗೊಂಡ ದೆಹಲಿ ಪೊಲೀಸ್ ಸಿಬ್ಬಂದಿಯ ಕುಟುಂಬಗಳಿಂದ ನ್ಯಾಯಕ್ಕಾಗಿ ಆಗ್ರಹ
ಸಿಜೆಪಿ ಕಾನೂನು ಬೆಂಬಲಕ್ಕೆ ನಿಂತ ಕಪಿಲ್ ಸಿಬಲ್ ಶಿಕ್ಷಣ ಮಂತ್ರಿಯಾಗಿದ್ದಾಗ ಹೆಚ್ಚು ಪೇಪರ್ ಲೀಕ್ - ಬಿಜೆಪಿಯ ಸುಧಾಂಶು ತ್ರಿವೇದಿ
ಸಿಜೆಪಿ ಕಾನೂನು ಬೆಂಬಲಕ್ಕೆ ನಿಂತ ಕಪಿಲ್ ಸಿಬಲ್ ಶಿಕ್ಷಣ ಮಂತ್ರಿಯಾಗಿದ್ದಾಗ ಹೆಚ್ಚು ಪೇಪರ್ ಲೀಕ್ - ಬಿಜೆಪಿಯ ಸುಧಾಂಶು ತ್ರಿವೇದಿ
ಸಂಸತ್ತಿನಲ್ಲಿ ಆಧಾರರಹಿತ ಹೇಳಿಕೆ : ರಾಹುಲ್ ಗಾಂಧಿ ಕ್ಷಮೆಯಾಚಿಸಬೇಕೆಂದು ಎನ್‌ಡಿಎ ಸಂಸದರ ಆಗ್ರಹ
ಸಂಸತ್ತಿನಲ್ಲಿ ಆಧಾರರಹಿತ ಹೇಳಿಕೆ : ರಾಹುಲ್ ಗಾಂಧಿ ಕ್ಷಮೆಯಾಚಿಸಬೇಕೆಂದು ಎನ್‌ಡಿಎ ಸಂಸದರ ಆಗ್ರಹ
ಪಿಒಜೆಕೆಯಲ್ಲಿ ನಾಗರಿಕರ ಮೇಲೆ ಗುಂಡಿನ ಸುರಿಮಳೆ ಖಂಡಿಸಿ, ಪಾಕಿಸ್ತಾನ ಬೆಂಬಲಿತ ಚುನಾವಣೆಗಳನ್ನು ತೋರಿಕೆಯ ವ್ಯಾಯಾಮ ಎಂದ ಭಾರತ
ಪಿಒಜೆಕೆಯಲ್ಲಿ ನಾಗರಿಕರ ಮೇಲೆ ಗುಂಡಿನ ಸುರಿಮಳೆ ಖಂಡಿಸಿ, ಪಾಕಿಸ್ತಾನ ಬೆಂಬಲಿತ ಚುನಾವಣೆಗಳನ್ನು ತೋರಿಕೆಯ ವ್ಯಾಯಾಮ ಎಂದ ಭಾರತ
6 ಪ್ರಶ್ನೆ ಪತ್ರಿಕೆಗಳ ಸೋರಿಕೆ : ಪಂಜಾಬ್ ಸಚಿವರ ರಾಜೀನಾಮೆಗೆ ಎನ್‌ಡಿಎ ಸಂಸದರ ಆಗ್ರಹ; ಸಂಸತ್ತಿನಲ್ಲಿ ರಾಜಕೀಯ ಜಟಾಪಟಿ
6 ಪ್ರಶ್ನೆ ಪತ್ರಿಕೆಗಳ ಸೋರಿಕೆ : ಪಂಜಾಬ್ ಸಚಿವರ ರಾಜೀನಾಮೆಗೆ ಎನ್‌ಡಿಎ ಸಂಸದರ ಆಗ್ರಹ; ಸಂಸತ್ತಿನಲ್ಲಿ ರಾಜಕೀಯ ಜಟಾಪಟಿ
ಪರೀಕ್ಷಾ ಸುಧಾರಣೆಗಳ ಕುರಿತು ಉನ್ನತ ಅಧಿಕಾರದ ಕಾರ್ಯಪಡೆ ಘೋಷಿಸಿದ ಪ್ರಧಾನಿ ಮೋದಿ : ನೇತೃತ್ವ ವಹಿಸಲು ನಂದನ್ ನಿಲೇಕಣಿ ಆಯ್ಕೆ
ಪರೀಕ್ಷಾ ಸುಧಾರಣೆಗಳ ಕುರಿತು ಉನ್ನತ ಅಧಿಕಾರದ ಕಾರ್ಯಪಡೆ ಘೋಷಿಸಿದ ಪ್ರಧಾನಿ ಮೋದಿ : ನೇತೃತ್ವ ವಹಿಸಲು ನಂದನ್ ನಿಲೇಕಣಿ ಆಯ್ಕೆ
ಅಣೆಕಟ್ಟುಗಳ ಹೂಳೆತ್ತುವಿಕೆ, ಮೇಕೆದಾಟು ಮತ್ತು ಮಹದಾಯಿ ಯೋಜನೆಗಳಿಗೆ ಕೇಂದ್ರದ ಬೆಂಬಲದ ಭರವಸೆ
ಅಣೆಕಟ್ಟುಗಳ ಹೂಳೆತ್ತುವಿಕೆ, ಮೇಕೆದಾಟು ಮತ್ತು ಮಹದಾಯಿ ಯೋಜನೆಗಳಿಗೆ ಕೇಂದ್ರದ ಬೆಂಬಲದ ಭರವಸೆ
ಲೋಕಸಭೆಯಲ್ಲಿ ವಿರೋಧ ಪಕ್ಷಗಳ ಗದ್ದಲ: ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆ ತಡೆ ಮಸೂದೆ ಮೇಲಿನ ಚರ್ಚೆ ಮುಂದೂಡಿಕೆ
ಲೋಕಸಭೆಯಲ್ಲಿ ವಿರೋಧ ಪಕ್ಷಗಳ ಗದ್ದಲ: ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆ ತಡೆ ಮಸೂದೆ ಮೇಲಿನ ಚರ್ಚೆ ಮುಂದೂಡಿಕೆ
 ಹಿಂದೂ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಆರೋಪ: ಕುನಾಲ್ ಕಮ್ರಾ, ವಾಂಗ್‌ಚುಕ್ ಮತ್ತು ಡಿಪ್ಕೆ ವಿರುದ್ಧ ದೂರು ದಾಖಲು
ಹಿಂದೂ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಆರೋಪ: ಕುನಾಲ್ ಕಮ್ರಾ, ವಾಂಗ್‌ಚುಕ್ ಮತ್ತು ಡಿಪ್ಕೆ ವಿರುದ್ಧ ದೂರು ದಾಖಲು
ಪ್ರಶ್ನೆ ಪತ್ರಿಕೆ ಸೋರಿಕೆ ಆದರೆ ಜಿಲ್ಲಾಧಿಕಾರಿಗಳೇ ಹೊಣೆ ಎನ್ನುವುದು ಹೊಣೆಗೇಡಿತನ - ಶಾಸಕ ಯತ್ನಾಳ್
ಪ್ರಶ್ನೆ ಪತ್ರಿಕೆ ಸೋರಿಕೆ ಆದರೆ ಜಿಲ್ಲಾಧಿಕಾರಿಗಳೇ ಹೊಣೆ ಎನ್ನುವುದು ಹೊಣೆಗೇಡಿತನ - ಶಾಸಕ ಯತ್ನಾಳ್
ರಾಜನಾಥ್ ಸಿಂಗ್ - ಪಾಕಿಸ್ತಾನದೊಂದಿಗೆ ಮಾತುಕತೆ ಪಿಒಕೆ ಬಗ್ಗೆ ಮಾತ್ರ; ಭಯೋತ್ಪಾದಕರು ಮತ್ತು ಭಯೋತ್ಪಾದನೆ ಪ್ರಾಯೋಜಿಸುವ ದೇಶ ಒಂದೇ
ರಾಜನಾಥ್ ಸಿಂಗ್ - ಪಾಕಿಸ್ತಾನದೊಂದಿಗೆ ಮಾತುಕತೆ ಪಿಒಕೆ ಬಗ್ಗೆ ಮಾತ್ರ; ಭಯೋತ್ಪಾದಕರು ಮತ್ತು ಭಯೋತ್ಪಾದನೆ ಪ್ರಾಯೋಜಿಸುವ ದೇಶ ಒಂದೇ

ನ್ಯೂಸ್ MORE NEWS...