Thu,May02,2024
ಕನ್ನಡ / English

ಪ್ರಿಯಕರನ ಬ್ಲ್ಯಾಕ್‌ಮೇಲ್‌, ನವವಿವಾಹಿತೆ ಆತ್ಮಹತ್ಯೆ | JANATA NEWS

26 Apr 2023
2879

ವಿಜಯಪುರ : ವಿವಾಹಿತೆ ಮಹಿಳೆಯೊಬ್ಬರು ನೇಣಿಗೆ ಶರಣಾಗುವ ಮುನ್ನ ಮೊಬೈಲ್ ವಿಡಿಯೋ ಆನ್ ಮಾಡಿ ಲೈವ್ ಸೊಸೈಡ್ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಬಬಲೇಶ್ವರ ತಾಲೂಕಿನ ಉಪ್ಪಲದಿನ್ನಿ ಗ್ರಾಮದಲ್ಲಿ ನಡೆದಿದೆ.

ಸುಹಾನ್ ಸೋನಾರ್ (21) ಆತ್ಮಹತ್ಯೆ ಗೆ ಶರಣಾದ ವಿವಾಹಿತೆ ಮಹಿಳೆ. ಈಕೆ ನೇಣಿಗೆ ಶರಣಾಗುವ ಮುನ್ನ ಪ್ರಿಯಕರನ ಬ್ಲ್ಯಾಕ್ಮೇಲ್​ಗೆ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ಹೇಳಿದ್ದಾಳೆ.

ಉಪ್ಪಲದಿನ್ನಿ ಗ್ರಾಮದ ಅಸ್ಲಂ ಮುಲ್ಲಾ ಹಾಗೂ ಅದೇ ಗ್ರಾಮದ ದಸ್ತಗೀರ ಮುಳವಾಡ ಹಾಗೂ ಇನ್ನೂಸ್ ಪಾರ್ಥನಲ್ಲಿ ಅಲ್ತಾಫ್ ಸುಲೆಮಾನ್ ಇವರ ಮಧ್ಯೆ ರಾಜಕೀಯ ದ್ವೇಷವಿತ್ತು.

ಅಲ್ಲದೇ ದಸ್ತಗಿರಿ ಮುಲ್ಲಾ ಈತನ ಮಗಳ ಬಾಲ್ಯ ವಿವಾಹ ನಡೆಯುತ್ತಿದ್ದಾಗ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಧಿಕಾರಿಗಳು ಪ್ರವೇಶ ಮಾಡಿ ಬಾಲ್ಯ ವಿವಾಹ ತಡೆದಿದ್ದರು. ಮತ್ತೊಂದೆಡೆ 2020 ರಲ್ಲಿ ಇನ್ನೂಸ್ ಪಾರ್ಥನಲ್ಲಿ‌ ಅಲ್ತಾಫ್ ಸುಲೆಮಾನ್ ವಿರುದ್ಧ ಹತ್ಯೆಯತ್ನ ಪ್ರಕರಣ ದಾಖಲಾಗಿತ್ತು.

ಗ್ರಾಮದ ಅಲ್ತಾಫ್ ಸುಲೆಮಾನ್ 1 ವರ್ಷದ ಹಿಂದೆ ಸುಹಾನಾ ಜೊತೆ ಸಲುಗೆ ಬೆಳೆಸಿ ಪ್ರೀತಿಸುತ್ತಿದ್ದ. ಈ ವಿಷಯ ಸುಹಾನಾ ಪೋಷಕರಿಗೆ ಗೊತ್ತಾಗಿ ಹಿರಿಯರ ಸಮ್ಮುಖದಲ್ಲಿ ಅಲ್ತಾಫ್​ಗೆ ತಾಕೀತು ಮಾಡಿದ್ದರು. ಬಳಿಕ ಸುಹಾನಾ ಹೊಕ್ಕುಂಡಿ ಗ್ರಾಮದ ಷರೀಫ್ ಸೋನಾರ್ ಜೊತೆಗೆ ಇತ್ತೀಚೆಗೆ ಮದುವೆ ಮಾಡಿ ಕೊಟ್ಟಿದ್ದರು.

ಮಾಜಿ ಪ್ರಿಯಕರ ಅಲ್ತಾಫ್ ಕೂಡ ಗಂಡನನ್ನು ಬಿಟ್ಟು ತನ್ನೊಂದಿಗೆ ಬರಬೇಕು. ಇಲ್ಲವಾದಲ್ಲಿ ನನ್ನೊಂದಿಗಿರುವ ಫೋಟೋ ನಿನ್ನ ಗಂಡನಿಗೆ ತೋರಿಸುತ್ತೇನೆ ಎಂದು ಪ್ರಿಯಕರ ಅಲ್ತಾಫ್ ಸುಲೆಮಾನ್ ಬ್ಲ್ಯಾಕ್ಮೇಲ್ ಮಾಡಿದ್ದಾನೆ. ಇದಕ್ಕಾಗಿ ದಸ್ತಗೀರ ಹಾಗೂ ಇನ್ನೂಸ್ 5 ಲಕ್ಷ ರೂ. ಹಾಗೂ ಕಾರು ನೀಡಿದ್ದಾರೆ.

ಇದರಿಂದ ಬೆಸತ್ತಿದ್ದ ಸುಹಾನಾ, ಮೂವರ ಹೆಸರು ಹೇಳಿ ಆತ್ಮಹತ್ಯೆಗೆ ಶರಣಾಗಿದ್ದಳೆ. ಈ ಕುರಿತು ಸುಹಾನಾ ತಂದೆ ಅಸ್ಲಂ ಮುಲ್ಲಾ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಬಬಲೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

RELATED TOPICS:
English summary :Lover blackmail, newlywed suicide

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ, ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ನ್ಯೂಸ್ MORE NEWS...