Thu,Sep11,2025
ಕನ್ನಡ / English

ಡಬಲ್ ಇಂಜಿನ್ ಸರ್ಕಾರದಿಂದ ಕರ್ನಾಟಕದ ಅಭಿವೃದ್ಧಿ ಗ್ಯಾರಂಟಿ | JANATA NEWS

29 Apr 2023

ಬೀದರ್​ : ವಿಧಾನಸಭೆ ಚುನಾವಣೆ ಹಿನ್ನಲೆಯಲ್ಲಿ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರು ಬೀದರ್ ಗೆ ಬಂದಿಳಿದಿದ್ದಾರೆ. ಪ್ರಧಾನಿ ಮೋದಿ ಅವರಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಮತ್ತು ಕೇಂದ್ರ ಸಚಿವ ಭಗವಂತ ಖೂಬಾ ಅವರು ಸಾಥ್ ನೀಡಿದರು.

ಜಗದ್ಗುರು ಬಸವೇಶ್ವರ, ಶಿವಶರಣರ ನಾಡಿಗೆ ನನ್ನ ನಮನಗಳು ಎಂದು ಬೀದರ್​ನ ಹುಮನಾಬಾದ್​ನಲ್ಲಿ ನಡೆಯುತ್ತಿರುವ ಬಿಜೆಪಿ ಸಮಾವೇಶದಲ್ಲಿ ಕನ್ನಡದಲ್ಲಿ ಮಾತು ಆರಂಭಿಸಿದ ಪ್ರಧಾನಿ ಮೋದಿ, ನನ್ನ ಚುನಾವಣೆಯ ಪ್ರಚಾರ ಬಸವಣ್ಣನವರ ನಾಡಿನಿಂದ ಆರಂಭವಾಗಿದೆ. ಇಷ್ಟೊಂದು ಸಂಖ್ಯೆಯಲ್ಲಿ ಬಂದಿರುವ ನನ್ನ ಪ್ರೀತಿಯ ಸಹೋದರರಿಗೆ ನಮಸ್ಕಾರ ಎಂದರು.

ಬೀದರ ಜಿಲ್ಲೆಯ ಆರು ಮತ್ತು ಕಲ್ಬುರ್ಗಿ ಜಿಲ್ಲೆಯ ಮೂರು ಸೇರಿ ಒಂಬತ್ತು ಕ್ಷೇತ್ರಗಳ ಬಿಜೆಪಿ‌ ಅಭ್ಯರ್ಥಿಗಳ ಪರ ಭರ್ಜರಿ ಪ್ರಚಾರ ಮಾಡಿದರು.

ಯಾರಿಂದಲೂ ತಡೆಯೋದಕ್ಕೆ ಆಗೋದಿಲ್ಲ

ಕರ್ನಾಟಕದ ಜನತೆ ಅಭಿವೃದ್ಧಿಯ ಕರ್ನಾಟಕವನ್ನು ನೋಡುತ್ತಿರಿ. ನಿಮ್ಮ ಅಭಿವೃದ್ಧಿಯ‌ ಕನಸನ್ನು ಬಿಜೆಪಿ ನನಸು ಮಾಡುತ್ತದೆ. ಕರ್ನಾಟಕ ನಂಬರ್ ಒನ್ ರಾಜ್ಯ ಮಾಡಬೇಕು ಅಂದ್ರೆ ಡಬಲ್ ಇಂಜಿನ್ ಸರ್ಕಾರ ಇರಬೇಕು. ಡಬಲ್ ಇಂಜಿನ್ ಸರ್ಕಾರದಿಂದ ಕರ್ನಾಟಕದ ಅಭಿವೃದ್ಧಿ ಗ್ಯಾರಂಟಿ. ಕರ್ನಾಟಕವನ್ನು ನಂಬರ್ ಒನ್ ಆಗೋದನ್ನು ಯಾರಿಂದಲೂ ತಡೆಯೋದಕ್ಕೆ ಆಗೋದಿಲ್ಲ.

ಕಾಂಗ್ರೆಸ್ ಸರ್ಕಾರದಲ್ಲಿ ಕರ್ನಾಟಕಕ್ಕೆ 30 ಸಾವಿರ ಕೋಟಿ ಕೇಂದ್ರದಿಂದ ಅನುದಾನ ಬರ್ತಿತ್ತು. ಆದರೆ, ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ 90 ಸಾವಿರ ಕೋಟಿ ಬರ್ತಿದೆ. ಅನುದಾನ ಮೂರು ಪಟ್ಟು ಹೆಚ್ಚಾಗಿದೆ. ಡಬಲ್‌ ಇಂಜಿನ್ ಸರ್ಕಾರದಿಂದ ಡಬಲ್ ಸ್ಪೀಡ್​ ಕೆಲಸ ಆಗ್ತಿದೆ. ಕರ್ನಾಟಕದಲ್ಲಿ ಡಬಲ್ ಇಂಜಿನ್​​ ಸರ್ಕಾರ ಇಲ್ಲದೆ ಇದ್ದಾಗ ಅಭಿವೃದ್ಧಿ ಮರಿಚೀಕೆ ಆಗಿತ್ತು ಎಂದು ಪ್ರಧಾನಿ ಹೇಳಿದರು.

RELATED TOPICS:
English summary :Double Engine Development Guarantee of Karnataka by Govt

ಕಾಂಗ್ರೆಸ್ ಶಾಸಕ ಕೆ.ಸಿ.ವೀರೇಂದ್ರ ಅಕ್ರಮ ಆನ್‌ಲೈನ್ ಬೆಟ್ಟಿಂಗ್‌ನಲ್ಲಿ ವಂಚಿಸಿದ ಪ್ರಕರಣ : ಇಡಿ ದಾಳಿಯಲ್ಲಿ ರೂ.100 ಕೋಟಿ ಚಿನ್ನ ಬೆಳ್ಳಿ ವಶ
ಕಾಂಗ್ರೆಸ್ ಶಾಸಕ ಕೆ.ಸಿ.ವೀರೇಂದ್ರ ಅಕ್ರಮ ಆನ್‌ಲೈನ್ ಬೆಟ್ಟಿಂಗ್‌ನಲ್ಲಿ ವಂಚಿಸಿದ ಪ್ರಕರಣ : ಇಡಿ ದಾಳಿಯಲ್ಲಿ ರೂ.100 ಕೋಟಿ ಚಿನ್ನ ಬೆಳ್ಳಿ ವಶ
ಉಪರಾಷ್ಟ್ರಪತಿ ಚುನಾವಣೆಯಲ್ಲಿ ಎನ್‌ಡಿಎ ಅಭ್ಯರ್ಥಿ ಸಿ.ಪಿ. ರಾಧಾಕೃಷ್ಣನ್ ಗೆಲವು
ಉಪರಾಷ್ಟ್ರಪತಿ ಚುನಾವಣೆಯಲ್ಲಿ ಎನ್‌ಡಿಎ ಅಭ್ಯರ್ಥಿ ಸಿ.ಪಿ. ರಾಧಾಕೃಷ್ಣನ್ ಗೆಲವು
ನೇಪಾಳದಲ್ಲಿ ಕಮ್ಯುನಿಸ್ಟ್ ಪಕ್ಷದ ಸರ್ಕಾರದ ಪತನದ ಬಳಿಕವೂ ಸಂಸತ್ತು, ಸುಪ್ರೀಂ ಕೋರ್ಟ್ ಮೇಲೆ ದಾಳಿ ನಡೆಸಿದ ಪ್ರತಿಭಟನಾಕಾರರು :
ನೇಪಾಳದಲ್ಲಿ ಕಮ್ಯುನಿಸ್ಟ್ ಪಕ್ಷದ ಸರ್ಕಾರದ ಪತನದ ಬಳಿಕವೂ ಸಂಸತ್ತು, ಸುಪ್ರೀಂ ಕೋರ್ಟ್ ಮೇಲೆ ದಾಳಿ ನಡೆಸಿದ ಪ್ರತಿಭಟನಾಕಾರರು :
ನಿಮ್ಮ ನಡವಳಿಕೆಯು ಕಾಂಗ್ರೆಸ್ ಪಕ್ಷದ ಸಾಂಪ್ರದಾಯಿಕ ದುರಹಂಕಾರ ಮತ್ತು ಅಹಂಕಾರಕ್ಕೆ ಸಾಕ್ಷಿಯಾಗಿದೆ - ಖರ್ಗೆ ರನ್ನು ತರಾಟೆಗೆ ತೆಗೆದುಕೊಂಡ ಎಚ್‌ಡಿಕೆ
ನಿಮ್ಮ ನಡವಳಿಕೆಯು ಕಾಂಗ್ರೆಸ್ ಪಕ್ಷದ ಸಾಂಪ್ರದಾಯಿಕ ದುರಹಂಕಾರ ಮತ್ತು ಅಹಂಕಾರಕ್ಕೆ ಸಾಕ್ಷಿಯಾಗಿದೆ - ಖರ್ಗೆ ರನ್ನು ತರಾಟೆಗೆ ತೆಗೆದುಕೊಂಡ ಎಚ್‌ಡಿಕೆ
ಶ್ರೀ ನಾರಾಯಣ ಗುರುಗಳ ಜನ್ಮ ದಿನಾಚರಣೆಯಂದು  ಅವರ ದೃಷ್ಟಿಕೋನ, ಪ್ರಭಾವ ಸ್ಮರಿಸಿದ ಪ್ರಧಾನಿ ಮೋದಿ
ಶ್ರೀ ನಾರಾಯಣ ಗುರುಗಳ ಜನ್ಮ ದಿನಾಚರಣೆಯಂದು ಅವರ ದೃಷ್ಟಿಕೋನ, ಪ್ರಭಾವ ಸ್ಮರಿಸಿದ ಪ್ರಧಾನಿ ಮೋದಿ
ಭಾರತ-ಅಮೆರಿಕ ನಡುವೆ ಜಾಗತಿಕ ಕಾರ್ಯತಂತ್ರದ ಸಹಭಾಗಿತ್ವ ಬಹಳ ಸಕಾರಾತ್ಮಕವಾಗಿದೆ - ಪ್ರಧಾನಿ ಮೋದಿ
ಭಾರತ-ಅಮೆರಿಕ ನಡುವೆ ಜಾಗತಿಕ ಕಾರ್ಯತಂತ್ರದ ಸಹಭಾಗಿತ್ವ ಬಹಳ ಸಕಾರಾತ್ಮಕವಾಗಿದೆ - ಪ್ರಧಾನಿ ಮೋದಿ
ಭಾರತೀಯ ಪೌರತ್ವ ಪಡೆಯುವ ಮೂರು ವರ್ಷಗಳ ಮೊದಲೇ ಮತ ಚಲಾವಣೆ : ಸೋನಿಯಾ ಗಾಂಧಿ ವಿರುದ್ಧ ಕ್ರಿಮಿನಲ್ ದೂರು
ಭಾರತೀಯ ಪೌರತ್ವ ಪಡೆಯುವ ಮೂರು ವರ್ಷಗಳ ಮೊದಲೇ ಮತ ಚಲಾವಣೆ : ಸೋನಿಯಾ ಗಾಂಧಿ ವಿರುದ್ಧ ಕ್ರಿಮಿನಲ್ ದೂರು
11
11
ಭಾರತವನ್ನು ಹೆಸರಿಸುವಾಗ ಹೆಚ್ಚು ಗೌರವಯುತ ವಿಧಾನ ಬಳಸಲು ಅಮೆರಿಕಕ್ಕೆ ನಿರ್ದೇಶಿಸಿದ ಫಿನ್ಲ್ಯಾಂಡ್ ಅಧ್ಯಕ್ಷ
ಭಾರತವನ್ನು ಹೆಸರಿಸುವಾಗ ಹೆಚ್ಚು ಗೌರವಯುತ ವಿಧಾನ ಬಳಸಲು ಅಮೆರಿಕಕ್ಕೆ ನಿರ್ದೇಶಿಸಿದ ಫಿನ್ಲ್ಯಾಂಡ್ ಅಧ್ಯಕ್ಷ
2 ಮತದಾರರ ಗುರುತಿನ ಚೀಟಿಹೊಂದಿದಕ್ಕಾಗಿ ಕಾಂಗ್ರೆಸ್ ವಕ್ತಾರ ಪವನ್ ಖೇರಾಗೆ ಚುನಾವಣಾ ಕಚೇರಿಯ ನೋಟಿಸ್
2 ಮತದಾರರ ಗುರುತಿನ ಚೀಟಿಹೊಂದಿದಕ್ಕಾಗಿ ಕಾಂಗ್ರೆಸ್ ವಕ್ತಾರ ಪವನ್ ಖೇರಾಗೆ ಚುನಾವಣಾ ಕಚೇರಿಯ ನೋಟಿಸ್
ರಾಜಕೀಯಕ್ಕೂ ಯಾವುದೇ ಸಂಬಂಧವಿಲ್ಲದ ನನ್ನ ತಾಯಿ ವಿರುದ್ಧ ಅನುಚಿತ ಭಾಷೆಯನ್ನು ಏಕೆ ಬಳಸಿದ್ದಾರೆ? - ಪ್ರಧಾನಿ ಮೋದಿ
ರಾಜಕೀಯಕ್ಕೂ ಯಾವುದೇ ಸಂಬಂಧವಿಲ್ಲದ ನನ್ನ ತಾಯಿ ವಿರುದ್ಧ ಅನುಚಿತ ಭಾಷೆಯನ್ನು ಏಕೆ ಬಳಸಿದ್ದಾರೆ? - ಪ್ರಧಾನಿ ಮೋದಿ
ಸೆಮಿಕಾನ್ ಇಂಡಿಯಾ 2025 : ವಿಕ್ರಮ್ 32-ಬಿಟ್ ಪ್ರೊಸೆಸರ್  ಸೆಮಿಕಂಡಕ್ಟರ್ ಚಿಪ್ ಬಿಡುಗಡೆ ಮಾಡಿದ ಪ್ರಧಾನಿ ಮೋದಿ
ಸೆಮಿಕಾನ್ ಇಂಡಿಯಾ 2025 : ವಿಕ್ರಮ್ 32-ಬಿಟ್ ಪ್ರೊಸೆಸರ್ ಸೆಮಿಕಂಡಕ್ಟರ್ ಚಿಪ್ ಬಿಡುಗಡೆ ಮಾಡಿದ ಪ್ರಧಾನಿ ಮೋದಿ

ನ್ಯೂಸ್ MORE NEWS...