Thu,Dec11,2025
ಕನ್ನಡ / English

ಕಾಂಗ್ರೆಸ್​​ನವರು ಆಂಜನೇಯನ ಬಾಲಕ್ಕೆ ಬೆಂಕಿ ಹಚ್ಚಿದ್ದಾರೆ! | JANATA NEWS

04 May 2023

ರಾಮನಗರ : ಕಾಂಗ್ರೆಸ್ ಅವರು ಆಂಜನೇಯನ ಬಾಲಕ್ಕೆ ಬೆಂಕಿ ಇಟ್ಟಿದ್ದೀರಿ, ಇದು ಇಡೀ ಪಕ್ಷವನ್ನು ಸುಟ್ಟು ಸರ್ವನಾಶ ಮಾಡುತ್ತೆ ಎಂದು ಸಚಿವ ಆರ್ ಅಶೋಕ್ ಎಚ್ಚರಿಕೆ ನೀಡಿದ್ದಾರೆ.

ಕನಕಪುರದಲ್ಲಿ ಇಂದು ಮಾತನಾಡಿದ ಅವರು, ತಾನು ಬಜರಂಗದಳದ ಸದಸ್ಯ, ಕಾಂಗ್ರೆಸ್ ನಾಯಕರಿಗೆ ಧಮ್ಮಿದ್ರೆ, ತಾಕತ್ತಿದ್ರೆ ಕ್ರಮ ಜರುಗಿಸಲಿ ನೋಡೋಣ ಅಂತ ಸವಾಲೆಸೆದರು. ಕಾಂಗ್ರೆಸ್ ನವರು ಆಂಜನೇಯನ ಬಾಲಕ್ಕೆ ಬೆಂಕಿ ಹಚ್ಚಿದ್ದಾರೆ, ಆ ಆಂಜನೇಯ ಬಾಲಕ್ಕೆ ಬೆಂಕಿ ಹತ್ತಿದಾಗ ಲಂಕೆಯನ್ನು ಸುಟ್ಟಂತೆಯೇ ಕಾಂಗ್ರೆಸ್ ಹಚ್ಚಿರುವ ಬೆಂಕಿ ಆ ಪಕ್ಷವನ್ನೇ ಅಗ್ನಿಗಾಹುತಿ ಮಾಡಲಿದೆ ಎಂದು ಕಿಡಿಕಾರಿದರು.

ಕನಕಪುರ ಕ್ಷೇತ್ರದಲ್ಲಿ ಈ ಬಾರಿ ಡಿಕೆ ಶಿವಕುಮಾರ್ ವಿರೋಧಿ ಅಲೆ ಇದೆ, ಹಾಗಾಗಿ ನಾವು ಗೆಲ್ಲುವ ವಾತಾವರಣ ಇದೆ. ಇಲ್ಲಿ ಜೆಡಿಎಸ್ ಕೂಡಾ ಪ್ರಚಾರ ಮಾಡುತ್ತಿಲ್ಲ. ಹೆಚ್​ಡಿ ಕುಮಾರಸ್ವಾಮಿ ಮತ್ತು ಹೆಚ್​ಡಿ ದೇವೇಗೌಡರು ಕ್ಷೇತ್ರಕ್ಕೆ ಬಂದಿಲ್ಲ. ನಾವು ಚುನಾವಣೆಯ ರಂಗನ್ನ ಕನಕಪುರಕ್ಕೆ ತಂದಿದ್ದೇವೆ.

ಬಜರಂಗದಳ ಬ್ಯಾನ್ ವಿಚಾರದಿಂದ ಕಾಂಗ್ರೆಸ್ ಇನ್ನಷ್ಟು ಸ್ಥಾನ ಕಳೆದುಕೊಳುತ್ತಾರೆ. ಹಿಂದೂ ರಕ್ಷಣೆ ಮಾಡುವವವರು ಬಜರಂಗದಳದವರು, ದೇಶ, ದೇವಸ್ಥಾನಗಳನ್ನು ರಕ್ಷಣೆ ಮಾಡೋದು ಬಜರಂಗದಳ. ಕಾಂಗ್ರೆಸ್ ನವರು ಬಜರಂಗದಳವನ್ನು ಪಿಎಫ್ಐಗೆ ಹೋಲಿಸುವುದನ್ನು ನಾನು ಖಂಡಿಸುತ್ತೇನೆ ಎಂದು ವಾಗ್ದಾಳಿ ನಡೆಸಿದರು.

ಸಿದ್ದರಾಮಯ್ಯ ಅವರು ಮೊದಲಿನಿಂದಲೂ ಕುಂಕುಮವನ್ನು ವಿರೋಧ ಮಾಡುತ್ತಾರೆ. ಟಿಪ್ಪು ಸುಲ್ತಾನ್ ಅವರನ್ನು ಒಲೈಕೆ ಮಾಡಿಕೊಳ್ಳುತ್ತಾರೆ. ಕಾಂಗ್ರೆಸ್​ ದೇಶದಲ್ಲಿ ಸರ್ವನಾಶವಾಗುತ್ತದೆ, ಲಂಕೆಯಲ್ಲಿ ರಾವಣ ಸಂಹಾರ ಆದ ರೀತಿ ರಾಜ್ಯದಲ್ಲಿ ಕಾಂಗ್ರೆಸ್ ಧೂಳಿಪಟವಾಗುತ್ತದೆ‌ ಎಂದರು.

RELATED TOPICS:
English summary :Congress has set Anjaneya tail on fire!

₹500 ಕೋಟಿ ಸೂಟ್‌ಕೇಸ್ ಕೊಟ್ಟವರು ಸಿಎಂ ಆಗಲು ಸಾಧ್ಯ - ಹೇಳಿಕೆ ಬೆನ್ನಲ್ಲೇ ಡಾ. ಕೌರ್ ಸಿಧು ಕಾಂಗ್ರೆಸ್ ಪಕ್ಷದಿಂದ ಅಮಾನತು
₹500 ಕೋಟಿ ಸೂಟ್‌ಕೇಸ್ ಕೊಟ್ಟವರು ಸಿಎಂ ಆಗಲು ಸಾಧ್ಯ - ಹೇಳಿಕೆ ಬೆನ್ನಲ್ಲೇ ಡಾ. ಕೌರ್ ಸಿಧು ಕಾಂಗ್ರೆಸ್ ಪಕ್ಷದಿಂದ ಅಮಾನತು
ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಸಿಎಂ ಡಿಕೆ ಶಿವಕುಮಾರಗೆ ದೆಹಲಿ ಪೊಲೀಸ ನೋಟಿಸ್ ಜಾರಿ
ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಸಿಎಂ ಡಿಕೆ ಶಿವಕುಮಾರಗೆ ದೆಹಲಿ ಪೊಲೀಸ ನೋಟಿಸ್ ಜಾರಿ
ಕಾರ್ತಿಗೈ ದೀಪ ಬೆಳಗಿಸುವ ಹೈಕೋರ್ಟ್‌ನ ಆದೇಶಗಳನ್ನು ಉದ್ದೇಶಪೂರ್ವಕವಾಗಿ ಉಲ್ಲಂಘಿಸಿದ ಡಿಎಂಕೆ ಸರ್ಕಾರ
ಕಾರ್ತಿಗೈ ದೀಪ ಬೆಳಗಿಸುವ ಹೈಕೋರ್ಟ್‌ನ ಆದೇಶಗಳನ್ನು ಉದ್ದೇಶಪೂರ್ವಕವಾಗಿ ಉಲ್ಲಂಘಿಸಿದ ಡಿಎಂಕೆ ಸರ್ಕಾರ
 ಎರಡು ದಿನಗಳ ಭಾರತ ಭೇಟಿಗಾಗಿ ಪುಟಿನ್ ಆಗಮನ : ವಿಮಾನ ನಿಲ್ದಾಣದಿಂದ ಪ್ರಧಾನಿ ಮೋದಿ ಕಾರಿನಲ್ಲಿ ಪ
ಎರಡು ದಿನಗಳ ಭಾರತ ಭೇಟಿಗಾಗಿ ಪುಟಿನ್ ಆಗಮನ : ವಿಮಾನ ನಿಲ್ದಾಣದಿಂದ ಪ್ರಧಾನಿ ಮೋದಿ ಕಾರಿನಲ್ಲಿ ಪ
ಗುಜರಾತ್ ಎಟಿಎಸ್ ಬೇಹುಗಾರಿಕೆ ಜಾಲವನ್ನು ಭೇದಿಸಿದೆ: 1 ಸೇನಾ ಸುಬೇದಾರ್, 1 ಮಹಿಳೆ ಬಂಧನ
ಗುಜರಾತ್ ಎಟಿಎಸ್ ಬೇಹುಗಾರಿಕೆ ಜಾಲವನ್ನು ಭೇದಿಸಿದೆ: 1 ಸೇನಾ ಸುಬೇದಾರ್, 1 ಮಹಿಳೆ ಬಂಧನ
 ಎಸ್ಐಆರ್, ಸಂಚಾರ ಸಾಥಿ -  ಸಂಸತ್ ಚಳಿಗಾಲದ ಅಧಿವೇಶನದ ಇಂದಿನ ಪ್ರಮುಖ ಚರ್ಚೆಗಳು
ಎಸ್ಐಆರ್, ಸಂಚಾರ ಸಾಥಿ - ಸಂಸತ್ ಚಳಿಗಾಲದ ಅಧಿವೇಶನದ ಇಂದಿನ ಪ್ರಮುಖ ಚರ್ಚೆಗಳು
ಭಾರತ ಜಾಗತಿಕ ಶಕ್ತಿಯಾಗಿ ಮುನ್ನಡೆ ಸಾಧಿಸುತ್ತಿದೆ: ಪ್ರಧಾನಿ ಮೋದಿ ನೀತಿ ದೃಷ್ಟಿಕೋನಕ್ಕೆ ಆಸ್ಟ್ರೇಲಿಯಾ ಮ
ಭಾರತ ಜಾಗತಿಕ ಶಕ್ತಿಯಾಗಿ ಮುನ್ನಡೆ ಸಾಧಿಸುತ್ತಿದೆ: ಪ್ರಧಾನಿ ಮೋದಿ ನೀತಿ ದೃಷ್ಟಿಕೋನಕ್ಕೆ ಆಸ್ಟ್ರೇಲಿಯಾ ಮ
ಬಹುಪತ್ನಿತ್ವದ ಮೇಲೆ ಸಂಪೂರ್ಣ ಕಾನೂನು ನಿಷೇಧವನ್ನು ಜಾರಿಗೆ ತಂದ ಮೊದಲ ಭಾರತೀಯ ರಾಜ್ಯ ಅಸ್ಸಾಂ
ಬಹುಪತ್ನಿತ್ವದ ಮೇಲೆ ಸಂಪೂರ್ಣ ಕಾನೂನು ನಿಷೇಧವನ್ನು ಜಾರಿಗೆ ತಂದ ಮೊದಲ ಭಾರತೀಯ ರಾಜ್ಯ ಅಸ್ಸಾಂ
ಕನಕನ ಕಿಂಡಿಗೆ ಚಿನ್ನದ ಕವಚ, 1 ಲಕ್ಷ ಭಕ್ತರಿಂದ ಸಾಮೂಹಿಕ ಭಗವದ್ಗೀತೆ ಪಠಣ : ಪ್ರಧಾನಿ ಮೋದಿ ಉಡುಪಿ ಭೇಟಿ
ಕನಕನ ಕಿಂಡಿಗೆ ಚಿನ್ನದ ಕವಚ, 1 ಲಕ್ಷ ಭಕ್ತರಿಂದ ಸಾಮೂಹಿಕ ಭಗವದ್ಗೀತೆ ಪಠಣ : ಪ್ರಧಾನಿ ಮೋದಿ ಉಡುಪಿ ಭೇಟಿ
ಪ್ರಧಾನಿ ಮೋದಿ ಅವರಿಂದ ಗೋವಾದಲ್ಲಿ ಶ್ರೀರಾಮ ನ 77 ಅಡಿ ಎತ್ತರದ  ಕಂಚಿನ ಪ್ರತಿಮೆ ಅನಾವರಣ : ವಿಶೇಷತೆಗಳು
ಪ್ರಧಾನಿ ಮೋದಿ ಅವರಿಂದ ಗೋವಾದಲ್ಲಿ ಶ್ರೀರಾಮ ನ 77 ಅಡಿ ಎತ್ತರದ ಕಂಚಿನ ಪ್ರತಿಮೆ ಅನಾವರಣ : ವಿಶೇಷತೆಗಳು
ಎಸ್ಐಆರ್ ಕೈಗೊಳ್ಳಲು ಭಾರತೀಯ ಚುನಾವಣಾ ಆಯೋಗ ಸಾಂವಿಧಾನಿಕ, ಶಾಸನಬದ್ಧ ಅಧಿಕಾರ ಹೊಂದಿದೆ - ಸರ್ವೋಚ್ಚ ನ್ಯಾಯಾಲಯ
ಎಸ್ಐಆರ್ ಕೈಗೊಳ್ಳಲು ಭಾರತೀಯ ಚುನಾವಣಾ ಆಯೋಗ ಸಾಂವಿಧಾನಿಕ, ಶಾಸನಬದ್ಧ ಅಧಿಕಾರ ಹೊಂದಿದೆ - ಸರ್ವೋಚ್ಚ ನ್ಯಾಯಾಲಯ
ಶೇಖ್ ಹಸೀನಾ ಅವರನ್ನು ಗಡಿಪಾರು ಮಾಡುವಂತೆ ಭಾರತಕ್ಕೆ ಬಾಂಗ್ಲಾದೇಶದ ಔಪಚಾರಿಕ ವಿನಂತಿ
ಶೇಖ್ ಹಸೀನಾ ಅವರನ್ನು ಗಡಿಪಾರು ಮಾಡುವಂತೆ ಭಾರತಕ್ಕೆ ಬಾಂಗ್ಲಾದೇಶದ ಔಪಚಾರಿಕ ವಿನಂತಿ

ನ್ಯೂಸ್ MORE NEWS...