Thu,Apr25,2024
ಕನ್ನಡ / English

ರಾಜ್ಯ ಕಾಂಗ್ರೆಸ್ ಸರ್ಕಾರ ಸಂಪುಟ ವಿಸ್ತರಣೆ : 24 ನೂತನ ಸಚಿವರ ಪ್ರಮಾಣವಚನ ಸ್ವೀಕಾರ | JANATA NEWS

27 May 2023
1698

ಬೆಂಗಳೂರು : ರಾಜ್ಯ ಕಾಂಗ್ರೆಸ್ ಸರ್ಕಾರ ರಚನೆಗೊಂಡ ಒಂದು ವಾರದ ಬಳಿಕ ಸಂಪುಟ ವಿಸ್ತರಣೆಯಾಗಿದ್ದು, ಇಂದು ಶನಿವಾರ(ಮೇ 27) ರಾಜಭವನದಲ್ಲಿ ನಡೆದ ಸಮಾರಂಭದಲ್ಲಿ 24 ನೂತನ ಸಚಿವರು ಪ್ರಮಾಣವಚನ ಸ್ವೀಕರಿಸಿದರು. ಗೌರವಾನ್ವಿತ ರಾಜ್ಯಪಾಲರಾದ ಥಾವರ್​ ಚಂದ್​ ಗೆಹ್ಲೋಟ್​ ಅವರು ನೂತನ ಸಚಿವರಿಗೆ ಪ್ರತಿಜ್ಞಾವಿಧಿಯನ್ನು ಬೋದಿಸಿದರು.

ಕಳೆದ ಶನಿವಾರ (ಮೇ 20) ಕಂಠೀರವ ಸ್ಟೇಡಿಯಂನಲ್ಲಿ 8 ಮಂದಿ ಸಚಿವರೊಂದಿಗೆ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿ ಹಾಗೂ ಡಿ.ಕೆ.ಶಿವಕುಮಾರ್​ ಅವರು ಉಪಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕಾರ ಮಾಡಿದ್ದರು.

ಮಧು ಬಂಗಾರಪ್ಪ, ಎಚ್‌.ಕೆ ಪಾಟೀಲ್‌, ಈಶ್ವರ್‌ ಖಂಡ್ರೆ, ಮಂಕಾಳ ವೈದ್ಯ, ಶರಣಬಸಪ್ಪ ದರ್ಶನಾಪುರ, ತಿಮ್ಮಾಪೂರ್‌ ರಾಮಪ್ಪ ಬಾಲಪ್ಪ, ಎನ್‌.ಚಲುವನಾರಾಯಣ ಸ್ವಾಮಿ, ಕೆ. ವೆಂಕಟೇಶ್‌, ಎಸ್‌.ಎಸ್‌. ಮಲ್ಲಿಕಾರ್ಜುನ್‌, ಶಿವರಾಜ ತಂಗಡಗಿ, ಶರಣ ಪ್ರಕಾಶ್​ ಪಾಟೀಲ್​, ಡಿ. ಸುಧಾಕರ್‌, ಸಂತೋಷ್‌ ಲಾಡ್, ಎನ್‌.ಎಸ್‌. ಬೋಸೆರಾಜು, ಬೈರತಿ ಸುರೇಶ್, ಎಂ.ಸಿ. ಸುಧಾಕರ್ ಮತ್ತು ಬಿ.ನಾಗೇಂದ್ರ​​ ಅವರು ದೇವರ ಹೆಸರಿನಲ್ಲಿ ಪ್ರಮಾಣ ವಚನವನ್ನು ಸ್ವೀಕರಿಸಿದರು.

ಇಂಗ್ಲಿಷ್​ನಲ್ಲಿ ಪ್ರತಿಜ್ಞಾವಿಧಿ ಸ್ವೀಕರಿಸಿದ ರಹೀಂ ಖಾನ್‌ ಅವರು ಅಲ್ಲಾ ಹೆಸರಿನಲ್ಲಿ, ಡಾ.ಎಚ್‌. ಸಿ. ಮಹಾದೇವಪ್ಪ ಅವರು ಸತ್ಯ ನಿಷ್ಠೆ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದ್ದು ವಿಶೇಷವೇನಿಸಿದೆ. ಶಿವಾನಂದ ಪಾಟೀಲ್‌ ಅವರು ಬಸವಣ್ಣನ ಹೆಸರಿನಲ್ಲಿ ಪ್ರತಿಜ್ಞಾವಿಧಿ ಸ್ವೀಕರಿಸಿದರು. ಲಕ್ಷ್ಮೀ ಹೆಬ್ಬಾಳ್ಕರ್​ ಅವರು ಬಸವಣ್ಣ, ಶಿವಾಜಿ ಹಾಗೂ ಅಂಬೇಡ್ಕರ್​ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕಾರ ಮಾಡಿದರು.

ಕೃಷ್ಣ ಭೈರೇಗೌಡ ಹಾಗೂ ದಿನೇಶ್‌ ಗುಂಡೂರಾವ್‌ ಅವರು ಯಾರ ಹೆಸರನ್ನೂ ಉಲ್ಲೇಖಸದೇ ಶ್ರದ್ಧಾಪೂರ್ವಕವಾಗಿ ದೃಢೀಕರಣ ಮಾಡುತ್ತೇನೆ ಎನ್ನುವ ಮೂಲಕ ಪ್ರಮಾಣ ವಚನ ಸ್ವೀಕರಿಸಿದ್ದಾರೆ.

English summary : State Congress Government Cabinet Expansion: 24 new ministers sworn in

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ
ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ
ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ
ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ
ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ
ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ

ನ್ಯೂಸ್ MORE NEWS...