Thu,Sep11,2025
ಕನ್ನಡ / English

ಅಕ್ಕಿ ವಿಷಯವಾಗಿ ಕಾಂಗ್ರೆಸ್ ಸರ್ಕಾರ ಪರ್ಯಾಯ ವ್ಯವಸ್ಥೆ ಮಾಡಬೇಕಿತ್ತು, ಸರ್ಕಾರದ ಜನಪ್ರಿಯತೆ ಬಹಳ ದಿನ ಉಳಿಯಲ್ಲ! | JANATA NEWS

18 Jun 2023

ಹುಬ್ಬಳ್ಳಿ : ಕಾಂಗ್ರೆಸ್ ಸರ್ಕಾರದ ಜನಪ್ರಿಯತೆ ಬಹಳ ದಿನ ಉಳಿಯುವುದಿಲ್ಲ. ಅಕ್ಕಿ ವಿಷಯವಾಗಿ ಕಾಂಗ್ರೆಸ್ ನಾಯಕರು ಪರ್ಯಾಯ ವ್ಯವಸ್ಥೆ ಮಾಡುವ ಬದಲಿಗೆ ಕುಂಟು ನೆಪ ಹೇಳುತ್ತಿದ್ದಾರೆ. ಕೇಂದ್ರದ ವಿರುದ್ಧ ಬೆಟ್ಟು ಮಾಡುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಹೇಳಿದರು.

ಹುಬ್ಬಳ್ಳಿ ತಾಲೂಕಿನ ಛಬ್ಬಿ ಗ್ರಾಮದಲ್ಲಿ ಮಾತನಾಡಿದ ಅವರು, ಇದು ಕಾಂಗ್ರೆಸ್ ಗ್ಯಾರಂಟಿಯಿಂದ ಹಿಂದೆ ಹೋದಂತೆ ಅರ್ಥ. ಇದೀಗ ಛತ್ತೀಸಗಡದಿಂದ ಅಕ್ಕಿ ತರುತ್ತೇವೆ ಎನ್ನುತ್ತಿದ್ದಾರೆ. ನಮಗೆ ಬಡಜನರಿಗೆ ಒಳ್ಳೆಯದು ಆದರೆ ಸಾಕು. ಎಲ್ಲಿಂದ ತೆಗೆದುಕೊಳ್ಳಬೇಕು, ಹೇಗೆ ತೆಗೆದುಕೊಳ್ಳಬೇಕು ಎನ್ನುವ ಪ್ರಶ್ನೆಯೇ ಇಲ್ಲ. ರಾಜ್ಯದ ರೈತರು ಅಕ್ಕಿ ಕೊಡಲು ಮುಂದೆ ಬಂದರೆ ಅದನ್ನು ಖರೀದಿ ಮಾಡಬೇಕು. ಬಿಜೆಪಿಯವರೇ ಕೊಡಸಿ ಎನ್ನುವುದು ಸರಿ ಅಲ್ಲ ಎಂದರು.

ಗ್ಯಾರಂಟಿ ಭ್ರಮೆ ಹುಟ್ಟಿಸಿದ್ದು ನೋಡಿದರೆ, ಸರಕಾರದ ಜನಪ್ರಿಯತೆ ಬಹಳ ದಿನ ಉಳಿಯಲ್ಲ. ನೀರು ಕೊಡದ ಸರಕಾರ ತೆಗೆದುಕೊಂಡು ಏನು ಮಾಡಬೇಕು ಎಂದರು.

ಅಕ್ಕಿ ವಿಷಯವಾಗಿ ಕಾಂಗ್ರೆಸ್ ಸರ್ಕಾರ ಪರ್ಯಾಯ ವ್ಯವಸ್ಥೆ ಮಾಡಬೇಕಿತ್ತು. ಇದೀಗ ಅಕ್ಕಿ ಬರಲ್ಲ ಅಂತ ಕುಂಟುನೆಪ ಹೇಳುತ್ತಿದ್ದಾರೆ. ಇದು ಕಾಂಗ್ರೆಸ್ ಗ್ಯಾರಂಟಿಯಿಂದ ಹಿಂದೆ ಹೋದಂತೆ ಅರ್ಥ. ಈಗ ಛತ್ತೀಸ್ ಗಢದಿಂದ ಅಕ್ಕಿ ತರುತ್ತೇವೆ ಎನ್ನುತ್ತಿದ್ದಾರೆ. ಏನೆಯಾದರು ಬಡ ಜನರಿಗೆ ಒಳ್ಳೆಯದಾದರೆ ಸಾಕು ನಮಗೆ ಎಂದರು.

ಅಕ್ಕಿಯನ್ನು ಎಲ್ಲಿಂದ ತೆಗೆದುಕೊಳ್ಳಬೇಕು, ಹೇಗೆ ತೆಗೆದುಕೊಳ್ಳಬೇಕು ಎನ್ನುವ ಪ್ರಶ್ನೆ ಇದೆ. ರಾಜ್ಯದ ರೈತರು ಅಕ್ಕಿ ಕೊಡುವುದಕ್ಕೆ ಮುಂದೆ ಬಂದರೆ ಅದನ್ನು ಖರೀದಿ ಮಾಡಬೇಕು. ಬಿಜೆಪಿಯವರೇ ಕೊಡಸಿ ಎನ್ನುವುದು ಸರಿಯಲ್ಲ. ಒಂದು ವೇಳೆ ಪ್ರತಿ ತಿಂಗಳೂ ಒಂದನೇ ತಾರೀಕಿಗೆ ರಾಜ್ಯದ ಜನರಿಗೆ ಅಕ್ಕಿ ಕೊಡದೆ ಹೋದರೆ, ನಾವು ಪ್ರತಿಭಟನೆ ಮಾಡುತ್ತೇವೆ ಎಂದು ಅವರು ಎಚ್ಚರಿಕೆ ನೀಡಿದರು.

ರಾಜ್ಯದಲ್ಲಿ ಬರಗಾಲ ಇದೆ. 500 ಹಳ್ಳಿಗೆ ಕುಡಿಯುವ ನೀರಿನ ಸಮಸ್ಯೆ ಇದೆ. ಸರ್ಕಾರ ಇದನ್ನು ಗಂಭೀರವಾಗಿ ಪರಿಗಣಸುತ್ತಿಲ್ಲ. ಕೇವಲ ವಿಡಿಯೋ ಕಾನ್ಫರೆನ್ಸ್ ಮಾಡಿ ಸುಮ್ಮನಾಗಿದೆ. ಬರಗಾಲ ಇದ್ದ ಕಡೆ ಟಾಸ್ಕಪೋರ್ಸ್ ರಚನೆ ಮಾಡಬೇಕು ಎಂದರು.

RELATED TOPICS:
English summary :The Congress government should have made an alternative arrangement in the matter of rice

ಕಾಂಗ್ರೆಸ್ ಶಾಸಕ ಕೆ.ಸಿ.ವೀರೇಂದ್ರ ಅಕ್ರಮ ಆನ್‌ಲೈನ್ ಬೆಟ್ಟಿಂಗ್‌ನಲ್ಲಿ ವಂಚಿಸಿದ ಪ್ರಕರಣ : ಇಡಿ ದಾಳಿಯಲ್ಲಿ ರೂ.100 ಕೋಟಿ ಚಿನ್ನ ಬೆಳ್ಳಿ ವಶ
ಕಾಂಗ್ರೆಸ್ ಶಾಸಕ ಕೆ.ಸಿ.ವೀರೇಂದ್ರ ಅಕ್ರಮ ಆನ್‌ಲೈನ್ ಬೆಟ್ಟಿಂಗ್‌ನಲ್ಲಿ ವಂಚಿಸಿದ ಪ್ರಕರಣ : ಇಡಿ ದಾಳಿಯಲ್ಲಿ ರೂ.100 ಕೋಟಿ ಚಿನ್ನ ಬೆಳ್ಳಿ ವಶ
ಉಪರಾಷ್ಟ್ರಪತಿ ಚುನಾವಣೆಯಲ್ಲಿ ಎನ್‌ಡಿಎ ಅಭ್ಯರ್ಥಿ ಸಿ.ಪಿ. ರಾಧಾಕೃಷ್ಣನ್ ಗೆಲವು
ಉಪರಾಷ್ಟ್ರಪತಿ ಚುನಾವಣೆಯಲ್ಲಿ ಎನ್‌ಡಿಎ ಅಭ್ಯರ್ಥಿ ಸಿ.ಪಿ. ರಾಧಾಕೃಷ್ಣನ್ ಗೆಲವು
ನೇಪಾಳದಲ್ಲಿ ಕಮ್ಯುನಿಸ್ಟ್ ಪಕ್ಷದ ಸರ್ಕಾರದ ಪತನದ ಬಳಿಕವೂ ಸಂಸತ್ತು, ಸುಪ್ರೀಂ ಕೋರ್ಟ್ ಮೇಲೆ ದಾಳಿ ನಡೆಸಿದ ಪ್ರತಿಭಟನಾಕಾರರು :
ನೇಪಾಳದಲ್ಲಿ ಕಮ್ಯುನಿಸ್ಟ್ ಪಕ್ಷದ ಸರ್ಕಾರದ ಪತನದ ಬಳಿಕವೂ ಸಂಸತ್ತು, ಸುಪ್ರೀಂ ಕೋರ್ಟ್ ಮೇಲೆ ದಾಳಿ ನಡೆಸಿದ ಪ್ರತಿಭಟನಾಕಾರರು :
ನಿಮ್ಮ ನಡವಳಿಕೆಯು ಕಾಂಗ್ರೆಸ್ ಪಕ್ಷದ ಸಾಂಪ್ರದಾಯಿಕ ದುರಹಂಕಾರ ಮತ್ತು ಅಹಂಕಾರಕ್ಕೆ ಸಾಕ್ಷಿಯಾಗಿದೆ - ಖರ್ಗೆ ರನ್ನು ತರಾಟೆಗೆ ತೆಗೆದುಕೊಂಡ ಎಚ್‌ಡಿಕೆ
ನಿಮ್ಮ ನಡವಳಿಕೆಯು ಕಾಂಗ್ರೆಸ್ ಪಕ್ಷದ ಸಾಂಪ್ರದಾಯಿಕ ದುರಹಂಕಾರ ಮತ್ತು ಅಹಂಕಾರಕ್ಕೆ ಸಾಕ್ಷಿಯಾಗಿದೆ - ಖರ್ಗೆ ರನ್ನು ತರಾಟೆಗೆ ತೆಗೆದುಕೊಂಡ ಎಚ್‌ಡಿಕೆ
ಶ್ರೀ ನಾರಾಯಣ ಗುರುಗಳ ಜನ್ಮ ದಿನಾಚರಣೆಯಂದು  ಅವರ ದೃಷ್ಟಿಕೋನ, ಪ್ರಭಾವ ಸ್ಮರಿಸಿದ ಪ್ರಧಾನಿ ಮೋದಿ
ಶ್ರೀ ನಾರಾಯಣ ಗುರುಗಳ ಜನ್ಮ ದಿನಾಚರಣೆಯಂದು ಅವರ ದೃಷ್ಟಿಕೋನ, ಪ್ರಭಾವ ಸ್ಮರಿಸಿದ ಪ್ರಧಾನಿ ಮೋದಿ
ಭಾರತ-ಅಮೆರಿಕ ನಡುವೆ ಜಾಗತಿಕ ಕಾರ್ಯತಂತ್ರದ ಸಹಭಾಗಿತ್ವ ಬಹಳ ಸಕಾರಾತ್ಮಕವಾಗಿದೆ - ಪ್ರಧಾನಿ ಮೋದಿ
ಭಾರತ-ಅಮೆರಿಕ ನಡುವೆ ಜಾಗತಿಕ ಕಾರ್ಯತಂತ್ರದ ಸಹಭಾಗಿತ್ವ ಬಹಳ ಸಕಾರಾತ್ಮಕವಾಗಿದೆ - ಪ್ರಧಾನಿ ಮೋದಿ
ಭಾರತೀಯ ಪೌರತ್ವ ಪಡೆಯುವ ಮೂರು ವರ್ಷಗಳ ಮೊದಲೇ ಮತ ಚಲಾವಣೆ : ಸೋನಿಯಾ ಗಾಂಧಿ ವಿರುದ್ಧ ಕ್ರಿಮಿನಲ್ ದೂರು
ಭಾರತೀಯ ಪೌರತ್ವ ಪಡೆಯುವ ಮೂರು ವರ್ಷಗಳ ಮೊದಲೇ ಮತ ಚಲಾವಣೆ : ಸೋನಿಯಾ ಗಾಂಧಿ ವಿರುದ್ಧ ಕ್ರಿಮಿನಲ್ ದೂರು
11
11
ಭಾರತವನ್ನು ಹೆಸರಿಸುವಾಗ ಹೆಚ್ಚು ಗೌರವಯುತ ವಿಧಾನ ಬಳಸಲು ಅಮೆರಿಕಕ್ಕೆ ನಿರ್ದೇಶಿಸಿದ ಫಿನ್ಲ್ಯಾಂಡ್ ಅಧ್ಯಕ್ಷ
ಭಾರತವನ್ನು ಹೆಸರಿಸುವಾಗ ಹೆಚ್ಚು ಗೌರವಯುತ ವಿಧಾನ ಬಳಸಲು ಅಮೆರಿಕಕ್ಕೆ ನಿರ್ದೇಶಿಸಿದ ಫಿನ್ಲ್ಯಾಂಡ್ ಅಧ್ಯಕ್ಷ
2 ಮತದಾರರ ಗುರುತಿನ ಚೀಟಿಹೊಂದಿದಕ್ಕಾಗಿ ಕಾಂಗ್ರೆಸ್ ವಕ್ತಾರ ಪವನ್ ಖೇರಾಗೆ ಚುನಾವಣಾ ಕಚೇರಿಯ ನೋಟಿಸ್
2 ಮತದಾರರ ಗುರುತಿನ ಚೀಟಿಹೊಂದಿದಕ್ಕಾಗಿ ಕಾಂಗ್ರೆಸ್ ವಕ್ತಾರ ಪವನ್ ಖೇರಾಗೆ ಚುನಾವಣಾ ಕಚೇರಿಯ ನೋಟಿಸ್
ರಾಜಕೀಯಕ್ಕೂ ಯಾವುದೇ ಸಂಬಂಧವಿಲ್ಲದ ನನ್ನ ತಾಯಿ ವಿರುದ್ಧ ಅನುಚಿತ ಭಾಷೆಯನ್ನು ಏಕೆ ಬಳಸಿದ್ದಾರೆ? - ಪ್ರಧಾನಿ ಮೋದಿ
ರಾಜಕೀಯಕ್ಕೂ ಯಾವುದೇ ಸಂಬಂಧವಿಲ್ಲದ ನನ್ನ ತಾಯಿ ವಿರುದ್ಧ ಅನುಚಿತ ಭಾಷೆಯನ್ನು ಏಕೆ ಬಳಸಿದ್ದಾರೆ? - ಪ್ರಧಾನಿ ಮೋದಿ
ಸೆಮಿಕಾನ್ ಇಂಡಿಯಾ 2025 : ವಿಕ್ರಮ್ 32-ಬಿಟ್ ಪ್ರೊಸೆಸರ್  ಸೆಮಿಕಂಡಕ್ಟರ್ ಚಿಪ್ ಬಿಡುಗಡೆ ಮಾಡಿದ ಪ್ರಧಾನಿ ಮೋದಿ
ಸೆಮಿಕಾನ್ ಇಂಡಿಯಾ 2025 : ವಿಕ್ರಮ್ 32-ಬಿಟ್ ಪ್ರೊಸೆಸರ್ ಸೆಮಿಕಂಡಕ್ಟರ್ ಚಿಪ್ ಬಿಡುಗಡೆ ಮಾಡಿದ ಪ್ರಧಾನಿ ಮೋದಿ

ನ್ಯೂಸ್ MORE NEWS...