Tue,Oct28,2025
ಕನ್ನಡ / English

ಈಗಾಗಲೇ ಕೇಂದ್ರ ಸರ್ಕಾರ 5 ಕೆಜಿ ಅಕ್ಕಿ ಉಚಿತವಾಗಿ ಕೊಡುತ್ತಿದೆ, ಹೆಚ್ಚು ಅಕ್ಕಿ ಕೊಡಲು ಒಪ್ಪಿರಲಿಲ್ಲ ಅಷ್ಟೇ, ಅಕ್ಕಿ ವಿತರಣೆ ರಾಜ್ಯ ಸರ್ಕಾರದ ಜವಾಬ್ದಾರಿ! | JANATA NEWS

18 Jun 2023

ಶಿವಮೊಗ್ಗ : ಅಕ್ಕಿ ವಿತರಣೆ ರಾಜ್ಯ ಸರ್ಕಾರದ ಜವಾಬ್ದಾರಿ, ಕಾಂಗ್ರೆಸ್ ಎಲ್ಲಿಯಾದರೂ ಖರೀದಿ ಮಾಡಿ ಕೊಡಲಿ ಎಂದು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಹೇಳಿದ್ದಾರೆ.

ರಾಜ್ಯದ ಜನರಿಗೆ 10 ಕೆ.ಜಿ. ಅಕ್ಕಿ ಕೊಡುವ ಗ್ಯಾರಂಟಿ ಅನುಷ್ಠಾನದ ವಿಚಾರದಲ್ಲಿ ಕೇಂದ್ರದ ವಿರುದ್ಧ ಆರೋಪ ಮಾಡುವ ಮೂಲಕ ರಾಜ್ಯದ ಕಾಂಗ್ರೆಸ್ ಸರ್ಕಾರ ಸುಮ್ಮನೆ ಗೊಂದಲ ಸೃಷ್ಟಿಸಿದೆ ಎಂದು ಬಿಎಸ್ ಯಡಿಯೂರಪ್ಪ ವಾಗ್ದಾಳಿ ನಡೆಸಿದ್ದಾರೆ.

ಈಗಾಗಲೇ ಕೇಂದ್ರ ಸರ್ಕಾರ 5 ಕೆಜಿ ಅಕ್ಕಿ ಉಚಿತವಾಗಿ ಕೊಡುತ್ತಿದೆ. ಹೆಚ್ಚುವರಿಯಾಗಿ ಅಕ್ಕಿ ಕೊಡಲು ಕೇಂದ್ರ ಒಪ್ಪಿರಲಿಲ್ಲ. ಅದು ರಾಜ್ಯ ಸರ್ಕಾರದ ಜವಾಬ್ದಾರಿ, ಎಲ್ಲಿಯಾದರೂ ಖರೀದಿ ಮಾಡಿ ಕೊಡಲಿ ಎಂದು ಹೇಳಿದರು.

ಕಾಂಗ್ರೆಸ್ ನಾಯಕರು 10 ಕೆಜಿ ಅಕ್ಕಿ ವಿತರಣೆ ಮಾಡುತ್ತೇವೆ ಎಂದು ಭರವಸೆ ಕೊಟ್ಟಿದ್ದರು. ಅದರಂತೆ ಅಕ್ಕಿ ವಿತರಣೆ ಮಾಡಬೇಕು. 1 ಗ್ರಾಂ ಕಡಿಮೆಯಾದರೂ ಜನ ಅದನ್ನು ಒಪ್ಪುವುದಿಲ್ಲ. ಕೇಂದ್ರ ಸರ್ಕಾರವನ್ನು ಅನಗತ್ಯ ದೂಷಿಸುವುದು ಸರಿಯಲ್ಲ.

ಹಾಗೇ ರಾಜ್ಯದ ಕಾಂಗ್ರೆಸ್ ಸರ್ಕಾರಕ್ಕೆ ಮತ್ತೊಂದು ಎಚ್ಚರಿಕೆ ನೀಡಿರುವ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ. ಕಾಂಗ್ರೆಸ್ ನಾಯಕರು 10 ಕೆ.ಜಿ. ಅಕ್ಕಿಯನ್ನ ಕೊಡುತ್ತೇವೆ ಅಂತಾ ಚುನಾವಣೆಗೆ ಮುನ್ನ ಭರವಸೆ ಕೊಟ್ಟಿದ್ದರು. ಅದರಂತೆ ಅಷ್ಟೂ ಅಕ್ಕಿ ವಿತರಣೆ ಮಾಡಬೇಕಿದೆ. 1 ಗ್ರಾಂ ಕಡಿಮೆಯಾದರೂ ರಾಜ್ಯದ ಜನರು ಒಪ್ಪಲ್ಲ. ಅವರು ಕೊಟ್ಟ ಭರವಸೆ ಈಡೇರಿಸಬೇಕು ಎಂದು ಯಡಿಯೂರಪ್ಪ ಆಗ್ರಹಿಸಿದ್ದಾರೆ. ಅಲ್ಲದೆ ಅಕ್ಕಿ ವಿಚಾರದಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಮಾತನಾಡಿದ್ದ ಕಾಂಗ್ರೆಸ್ ನಾಯಕರಿಗೆ ಯಡಿಯೂರಪ್ಪ ತಿರುಗೇಟು ನೀಡಿದ್ದಾರೆ.

RELATED TOPICS:
English summary :Distribution of rice is the responsibility of the state government, buy it and give it anywhere

ಭಾರತದ ಸಚಿವರ ಬಲವಾದ ಸಂದೇಶ: ನಮ್ಮ ತಲೆಯ ಮೇಲೆ ಬಂದೂಕು ಹಿಡಿದು ವ್ಯಾಪಾರ ಒಪ್ಪಂದ ಮಾಡಿಕೊಳ್ಳಲ್ಲ
ಭಾರತದ ಸಚಿವರ ಬಲವಾದ ಸಂದೇಶ: ನಮ್ಮ ತಲೆಯ ಮೇಲೆ ಬಂದೂಕು ಹಿಡಿದು ವ್ಯಾಪಾರ ಒಪ್ಪಂದ ಮಾಡಿಕೊಳ್ಳಲ್ಲ
ತಿಂಗಳೊಳಗೆ ಮತ್ತೊಂದು ಸ್ಲೀಪರ್ ಕೋಚ್ ಬಸ್ ಬೆಂಕಿ ದುರಂತ : ಬಾಗಿಲು ಜಾಮ್ ಕಾರಣ 25 ಸಾವು, ಹಲವರಿಗೆ ಗಾಯ
ತಿಂಗಳೊಳಗೆ ಮತ್ತೊಂದು ಸ್ಲೀಪರ್ ಕೋಚ್ ಬಸ್ ಬೆಂಕಿ ದುರಂತ : ಬಾಗಿಲು ಜಾಮ್ ಕಾರಣ 25 ಸಾವು, ಹಲವರಿಗೆ ಗಾಯ
ದೀಪಾವಳಿ ಹಬ್ಬದ ಸಂದರ್ಭದಲ್ಲಿ ಭಾರತದ ನಾಗರಿಕರಿಗೆ ಪ್ರಧಾನಿ ನರೇಂದ್ರ ಮೋದಿ ಪತ್ರ
ದೀಪಾವಳಿ ಹಬ್ಬದ ಸಂದರ್ಭದಲ್ಲಿ ಭಾರತದ ನಾಗರಿಕರಿಗೆ ಪ್ರಧಾನಿ ನರೇಂದ್ರ ಮೋದಿ ಪತ್ರ
ನಗರದ ರಸ್ತೆ ದುರಸ್ತಿಗೆ ಕಿರಣ್ ಮಜುಂದಾರ್ ಶಾ ಅವರೇ ಮಾಡಲಿ, ತುಂಬಾ ಸಂತೋಷ - ಡಿಸಿಎಂ ಶಿವಕುಮಾರ್
ನಗರದ ರಸ್ತೆ ದುರಸ್ತಿಗೆ ಕಿರಣ್ ಮಜುಂದಾರ್ ಶಾ ಅವರೇ ಮಾಡಲಿ, ತುಂಬಾ ಸಂತೋಷ - ಡಿಸಿಎಂ ಶಿವಕುಮಾರ್
ಇಸ್ಲಾಂ ಧರ್ಮದ ನಂಬಿಕೆಯಿಲ್ಲದವರನ್ನು ಗುರಿಯಾಗಿಸಿ ಎಲ್ಇಟಿಯೊಂದಿಗೆ ಸಂಚು ರೂಪಿಸಿದ್ದ ಕಾರ್ಮಿಕನ ಮೇಲೆ ಎನ್ಐಎ ಆರೋಪಪಟ್ಟಿ
ಇಸ್ಲಾಂ ಧರ್ಮದ ನಂಬಿಕೆಯಿಲ್ಲದವರನ್ನು ಗುರಿಯಾಗಿಸಿ ಎಲ್ಇಟಿಯೊಂದಿಗೆ ಸಂಚು ರೂಪಿಸಿದ್ದ ಕಾರ್ಮಿಕನ ಮೇಲೆ ಎನ್ಐಎ ಆರೋಪಪಟ್ಟಿ
ಸರ್ಕಾರಿ ಸ್ಥಳಗಳಲ್ಲಿ ನಮಾಜ್  ಗೆ ಅವಕಾಶ ಕೊಡದಂತೆ ಒತ್ತಾಯಿಸಿ ಶಾಸಕ ಯತ್ನಾಳ್ ಸಿಎಂ ಗೆ ಪತ್ರ
ಸರ್ಕಾರಿ ಸ್ಥಳಗಳಲ್ಲಿ ನಮಾಜ್ ಗೆ ಅವಕಾಶ ಕೊಡದಂತೆ ಒತ್ತಾಯಿಸಿ ಶಾಸಕ ಯತ್ನಾಳ್ ಸಿಎಂ ಗೆ ಪತ್ರ
33 ಸಾವಿರ ಕೋಟಿ ಬಿಲ್‌ ಬಾಕಿ ತೆರವು ಗೊಳಿಸಲು ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಒತ್ತಾಯ
33 ಸಾವಿರ ಕೋಟಿ ಬಿಲ್‌ ಬಾಕಿ ತೆರವು ಗೊಳಿಸಲು ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಒತ್ತಾಯ
ಪಂಜಾಬ್‌ ಡಿಐಜಿ ಬಂಧಿಸಿದ ಸಿಬಿಐ : ಹಿರಿಯ ಐಪಿಎಸ್ ಅಧಿಕಾರಿ ಮನೆಯಲ್ಲಿ ಕಂತೆ ಕಂತೆ ಹಣದ ಹೊಳೆ
ಪಂಜಾಬ್‌ ಡಿಐಜಿ ಬಂಧಿಸಿದ ಸಿಬಿಐ : ಹಿರಿಯ ಐಪಿಎಸ್ ಅಧಿಕಾರಿ ಮನೆಯಲ್ಲಿ ಕಂತೆ ಕಂತೆ ಹಣದ ಹೊಳೆ
ಕನ್ನಡ ಬಿಗ್ ಬಾಸ್ ಮನೆಗೆ ಬೀಗ : ರಾಜ್ಯ ಸರ್ಕಾರ ಸ್ಯಾಂಡಲ್ ವುಡ್ ನಟ್ಟು-ಬೋಲ್ಟ್ ಟೈಟ್ ಮಾಡುತ್ತಿದೆ ಎಂದು ಪ್ರತಿಪಕ್ಷದ ವಾಗ್ದಾಳಿ
ಕನ್ನಡ ಬಿಗ್ ಬಾಸ್ ಮನೆಗೆ ಬೀಗ : ರಾಜ್ಯ ಸರ್ಕಾರ ಸ್ಯಾಂಡಲ್ ವುಡ್ ನಟ್ಟು-ಬೋಲ್ಟ್ ಟೈಟ್ ಮಾಡುತ್ತಿದೆ ಎಂದು ಪ್ರತಿಪಕ್ಷದ ವಾಗ್ದಾಳಿ
ವಿಷ್ಣು ವಿಗ್ರಹ ಪ್ರಕರಣದಲ್ಲಿ ಸಿಜೆಐ ವಿವಾದಾತ್ಮಕ ಹೇಳಿಕೆ : ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಶೂ ಎಸೆದ ವಕೀಲ
ವಿಷ್ಣು ವಿಗ್ರಹ ಪ್ರಕರಣದಲ್ಲಿ ಸಿಜೆಐ ವಿವಾದಾತ್ಮಕ ಹೇಳಿಕೆ : ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಶೂ ಎಸೆದ ವಕೀಲ
ಅಧಿಕಾರ ಹಂಚಿಕೆ ಹಗ್ಗಜಗ್ಗಾಟ : ಸಿದ್ದರಾಮಯ್ಯ ಬಳಿಕ ಈಗ ಶಿವಕುಮಾರ್ ಹೇಳಿಕೆ ಬಿಡುಗಡೆ
ಅಧಿಕಾರ ಹಂಚಿಕೆ ಹಗ್ಗಜಗ್ಗಾಟ : ಸಿದ್ದರಾಮಯ್ಯ ಬಳಿಕ ಈಗ ಶಿವಕುಮಾರ್ ಹೇಳಿಕೆ ಬಿಡುಗಡೆ
ಅಮೆರಿಕ ಒತ್ತಡಕ್ಕೆ ಮಣಿದು 2008 ರ ಮುಂಬೈ ಭಯೋತ್ಪಾದಕ ದಾಳಿಗೆ ಪ್ರತೀಕಾರ ಕೈಗೊಳ್ಳದ ಯುಪಿಎ ಸರ್ಕಾರ - ಚಿದಂಬರಂ
ಅಮೆರಿಕ ಒತ್ತಡಕ್ಕೆ ಮಣಿದು 2008 ರ ಮುಂಬೈ ಭಯೋತ್ಪಾದಕ ದಾಳಿಗೆ ಪ್ರತೀಕಾರ ಕೈಗೊಳ್ಳದ ಯುಪಿಎ ಸರ್ಕಾರ - ಚಿದಂಬರಂ

ನ್ಯೂಸ್ MORE NEWS...