ಪತಿ ಪತ್ನಿ ನಡುವೆ ಜಗಳ, ಅನಾಥರಾದ ಮಕ್ಕಳು! | JANATA NEWS

ಉಡುಪಿ : ಕೌಟಂಬಿಕ ಜಗಳದಿಂದ ಬೇಸತ್ತು ಮಹಿಳೆಯೊಬ್ಬರು ಹೊಂಡಕ್ಕೆ ಹಾರಿದ್ದು ಆಕೆಯನ್ನು ರಕ್ಷಿಸಲು ಹೋಗಿ ಪತಿಯೂ ಸಾವನ್ನಪ್ಪಿರುವ ಘಟನೆ ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ನಲ್ಲೂರಿನ ತೋಟದಲ್ಲಿ ನಡೆದಿದೆ.
ಮೃತರನ್ನು ಯಶೋಧ ಹಾಗೂ ಇಮ್ಯಾನುವಲ್ ಎಂದು ಗುರುತಿಸಲಾಗಿದೆ. ದಂಪತಿ ಉತ್ತರ ಕನ್ನಡ ಜಿಲ್ಲೆ ಯಲ್ಲಾಪುರ ಮೂಲದವರಾಗಿದ್ದು, ತೋಟದ ಕೆಲಸಕ್ಕೆ ಬಂದು ಕಾರ್ಕಳದಲ್ಲಿ ನೆಲೆಸಿತ್ತು.
ಕ್ಷುಲ್ಲಕ ಕಾರಣಕ್ಕೆ ದಂಪತಿ ನಡುವೆ ಜಗಳವಾಗಿತ್ತು. ಇದರಿಂದ ಮನನೊಂದ ಯಶೋಧ ತೋಟದಲ್ಲಿದ್ದ ಹೊಂಡಕ್ಕೆ ಹಾರಿದ್ದರು. ಈ ವೇಳೆ ಪತ್ನಿಯನ್ನು ರಕ್ಷಿಸಲು ಹೋಗಿದ್ದ ಇಮ್ಯಾನುವಲ್ ಕೂಡ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ.
ಇಬ್ಬರೂ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ದಂಪತಿ ಸಾವಿನಿಂದ ಇಬ್ಬರು ಪುಟ್ಟ ಮಕ್ಕಳು ಅನಾಥವಾಗಿವೆ. ಕಾರ್ಕಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.