Thu,Sep11,2025
ಕನ್ನಡ / English

ಪ್ರೀತಿಸಿದ ಮಗಳ ಕತ್ತು ಹಿಸುಕಿದ ತಂದೆ, ಪ್ರೇಯಸಿ ಸಾವಿನ ಸುದ್ದಿ ಕೇಳಿ ರೈಲಿಗೆ ತಲೆ ಕೊಟ್ಟ ಪ್ರಿಯಕರ | JANATA NEWS

28 Jun 2023

ಕೋಲಾರ : ಅನ್ಯ ಜಾತಿಯ ಯುವಕನನ್ನು ಪ್ರೀತಿಸಿದ್ದಕ್ಕೆ ತಂದೆಯೇ ಮಗಳನ್ನು ಅಮಾನುಷವಾಗಿ ಹತ್ಯೆ ಮಾಡಿರುವ ಘಟನೆ ಬಂಗಾರಪೇಟೆ ತಾಲೂಕಿನ ಬೋಡಗುರ್ಕಿ ಗ್ರಾಮದಲ್ಲಿ ನಡೆದಿದೆ.

ಈ ಘಟನೆಯಿಂದ ನೊಂದ ಮೃತಳ ಪ್ರಿಯಕರ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮೃತರನ್ನು ಜಿಲ್ಲೆಯ ಬಂಗಾರಪೇಟೆ ತಾಲ್ಲೂಕಿನ ಕಾಮಸಮುದ್ರ ಹೋಬಳಿಯ ಬೋಡಗುರ್ಕಿ ಗ್ರಾಮದ ಕೀರ್ತಿ(20), ಹಾಗೂ ಆತ್ಮಹತ್ಯೆ ಮಾಡಿಕೊಂಡವನನ್ನು ಗಂಗಾಧರ್​(24) ಎಂದು ಗುರುತಿಸಲಾಗಿದೆ.

ಮೃತ ಗಂಗಾಧರ್​ ಹಾಗೂ ಕೀರ್ತಿ ಕಳೆದ ಒಂದು ವರ್ಷದಿಂದ ಪರಸ್ಪರ ಪ್ರೀತಿಸುತ್ತಿದ್ದರು. ಪಿಯುಸಿಯಲ್ಲೇ ಅನುತ್ತೀರ್ಣನಾಗಿದ್ದ ಮೃತ ಪ್ರಿಯಕರ ಗಂಗಾಧರ್​ ಗಾರೆ ಕೆಲಸ ಮಾಡುತ್ತಿದ್ದ. ಇಬ್ಬರ ಮನೆ ಕೂಡ ಒಂದೇ ಕಡೆಯಿದ್ದು, ಪ್ರೀತಿಸಲು ಶುರು ಮಾಡಿದ್ದು, ಮುಂದೆ ಮದುವೆಯಾಗಲೂ ನಿರ್ಧಾರ ಮಾಡಿದ್ದರು. ಈ ಸಂಬಂಧ ಗಂಗಾಧರ್​ ತಮ್ಮ ಪ್ರೀತಿಯ ವಿಚಾರವನ್ನು ಕೀರ್ತಿಯ ತಂದೆ ಕೃಷ್ಣಮೂರ್ತಿ ಬಳಿ ಹೇಳಿದ್ದಾನೆ. ಅಲ್ಲದೆ ಮದುವೆ ಮಾಡಿಕೊಡುವಂತೆಯೂ ಕೇಳಿಕೊಂಡಿದ್ದಾನೆ.

ಪೋಷಕರು ಗಂಗಾಧರ್​ನನ್ನು ಮರೆತುಬಿಡುವಂತೆ ಕೀರ್ತಿಗೆ ಹಲವು ಬಾರಿ ಬುದ್ಧಿವಾದ ಹೇಳಿದ್ದಾರೆ. ಆದರೂ ಇಬ್ಬರೂ ಪ್ರೀತಿಸುತ್ತಿದ್ದರು. ಈ ಸಂಬಂಧ ಮತ್ತೆ ಕೀರ್ತಿ ಮತ್ತು ತಂದೆ ಕೃಷ್ಣಮೂರ್ತಿ ನಡುವೆ ಮಾತುಕತೆ ನಡೆದಿದೆ. ಈ ವೇಳೆ ಕೋಪಗೊಂಡ ಕೃಷ್ಣಮೂರ್ತಿ ಮಗಳನ್ನು ಕತ್ತು ಹಿಸುಕಿ ಸಾಯಿಸಿದ್ದಾರೆ.

ತನ್ನ ಪ್ರೇಯಸಿ ಕೊಲೆಯಾಗಿರುವುದು ಗೊತ್ತಾಗುತ್ತಿದ್ದಂತೆ ಮನನೊಂದ ಗಂಗಾಧರ್ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಘಟನೆ ಸಂಬಂಧ ಕಾಮಸಮುದ್ರ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಗಳನ್ನು ಉಸಿರುಗಟ್ಟಿಸಿ ಕೊಲೆ ಮಾಡಿರುವ ಕೃಷ್ಣಮೂರ್ತಿಯನ್ನು ಬಂಧಿಸಿದ್ದಾರೆ.

RELATED TOPICS:
English summary :In Kolar, Man kills daughter over affair, lover ends life by jumping in front of train

ಕಾಂಗ್ರೆಸ್ ಶಾಸಕ ಕೆ.ಸಿ.ವೀರೇಂದ್ರ ಅಕ್ರಮ ಆನ್‌ಲೈನ್ ಬೆಟ್ಟಿಂಗ್‌ನಲ್ಲಿ ವಂಚಿಸಿದ ಪ್ರಕರಣ : ಇಡಿ ದಾಳಿಯಲ್ಲಿ ರೂ.100 ಕೋಟಿ ಚಿನ್ನ ಬೆಳ್ಳಿ ವಶ
ಕಾಂಗ್ರೆಸ್ ಶಾಸಕ ಕೆ.ಸಿ.ವೀರೇಂದ್ರ ಅಕ್ರಮ ಆನ್‌ಲೈನ್ ಬೆಟ್ಟಿಂಗ್‌ನಲ್ಲಿ ವಂಚಿಸಿದ ಪ್ರಕರಣ : ಇಡಿ ದಾಳಿಯಲ್ಲಿ ರೂ.100 ಕೋಟಿ ಚಿನ್ನ ಬೆಳ್ಳಿ ವಶ
ಉಪರಾಷ್ಟ್ರಪತಿ ಚುನಾವಣೆಯಲ್ಲಿ ಎನ್‌ಡಿಎ ಅಭ್ಯರ್ಥಿ ಸಿ.ಪಿ. ರಾಧಾಕೃಷ್ಣನ್ ಗೆಲವು
ಉಪರಾಷ್ಟ್ರಪತಿ ಚುನಾವಣೆಯಲ್ಲಿ ಎನ್‌ಡಿಎ ಅಭ್ಯರ್ಥಿ ಸಿ.ಪಿ. ರಾಧಾಕೃಷ್ಣನ್ ಗೆಲವು
ನೇಪಾಳದಲ್ಲಿ ಕಮ್ಯುನಿಸ್ಟ್ ಪಕ್ಷದ ಸರ್ಕಾರದ ಪತನದ ಬಳಿಕವೂ ಸಂಸತ್ತು, ಸುಪ್ರೀಂ ಕೋರ್ಟ್ ಮೇಲೆ ದಾಳಿ ನಡೆಸಿದ ಪ್ರತಿಭಟನಾಕಾರರು :
ನೇಪಾಳದಲ್ಲಿ ಕಮ್ಯುನಿಸ್ಟ್ ಪಕ್ಷದ ಸರ್ಕಾರದ ಪತನದ ಬಳಿಕವೂ ಸಂಸತ್ತು, ಸುಪ್ರೀಂ ಕೋರ್ಟ್ ಮೇಲೆ ದಾಳಿ ನಡೆಸಿದ ಪ್ರತಿಭಟನಾಕಾರರು :
ನಿಮ್ಮ ನಡವಳಿಕೆಯು ಕಾಂಗ್ರೆಸ್ ಪಕ್ಷದ ಸಾಂಪ್ರದಾಯಿಕ ದುರಹಂಕಾರ ಮತ್ತು ಅಹಂಕಾರಕ್ಕೆ ಸಾಕ್ಷಿಯಾಗಿದೆ - ಖರ್ಗೆ ರನ್ನು ತರಾಟೆಗೆ ತೆಗೆದುಕೊಂಡ ಎಚ್‌ಡಿಕೆ
ನಿಮ್ಮ ನಡವಳಿಕೆಯು ಕಾಂಗ್ರೆಸ್ ಪಕ್ಷದ ಸಾಂಪ್ರದಾಯಿಕ ದುರಹಂಕಾರ ಮತ್ತು ಅಹಂಕಾರಕ್ಕೆ ಸಾಕ್ಷಿಯಾಗಿದೆ - ಖರ್ಗೆ ರನ್ನು ತರಾಟೆಗೆ ತೆಗೆದುಕೊಂಡ ಎಚ್‌ಡಿಕೆ
ಶ್ರೀ ನಾರಾಯಣ ಗುರುಗಳ ಜನ್ಮ ದಿನಾಚರಣೆಯಂದು  ಅವರ ದೃಷ್ಟಿಕೋನ, ಪ್ರಭಾವ ಸ್ಮರಿಸಿದ ಪ್ರಧಾನಿ ಮೋದಿ
ಶ್ರೀ ನಾರಾಯಣ ಗುರುಗಳ ಜನ್ಮ ದಿನಾಚರಣೆಯಂದು ಅವರ ದೃಷ್ಟಿಕೋನ, ಪ್ರಭಾವ ಸ್ಮರಿಸಿದ ಪ್ರಧಾನಿ ಮೋದಿ
ಭಾರತ-ಅಮೆರಿಕ ನಡುವೆ ಜಾಗತಿಕ ಕಾರ್ಯತಂತ್ರದ ಸಹಭಾಗಿತ್ವ ಬಹಳ ಸಕಾರಾತ್ಮಕವಾಗಿದೆ - ಪ್ರಧಾನಿ ಮೋದಿ
ಭಾರತ-ಅಮೆರಿಕ ನಡುವೆ ಜಾಗತಿಕ ಕಾರ್ಯತಂತ್ರದ ಸಹಭಾಗಿತ್ವ ಬಹಳ ಸಕಾರಾತ್ಮಕವಾಗಿದೆ - ಪ್ರಧಾನಿ ಮೋದಿ
ಭಾರತೀಯ ಪೌರತ್ವ ಪಡೆಯುವ ಮೂರು ವರ್ಷಗಳ ಮೊದಲೇ ಮತ ಚಲಾವಣೆ : ಸೋನಿಯಾ ಗಾಂಧಿ ವಿರುದ್ಧ ಕ್ರಿಮಿನಲ್ ದೂರು
ಭಾರತೀಯ ಪೌರತ್ವ ಪಡೆಯುವ ಮೂರು ವರ್ಷಗಳ ಮೊದಲೇ ಮತ ಚಲಾವಣೆ : ಸೋನಿಯಾ ಗಾಂಧಿ ವಿರುದ್ಧ ಕ್ರಿಮಿನಲ್ ದೂರು
11
11
ಭಾರತವನ್ನು ಹೆಸರಿಸುವಾಗ ಹೆಚ್ಚು ಗೌರವಯುತ ವಿಧಾನ ಬಳಸಲು ಅಮೆರಿಕಕ್ಕೆ ನಿರ್ದೇಶಿಸಿದ ಫಿನ್ಲ್ಯಾಂಡ್ ಅಧ್ಯಕ್ಷ
ಭಾರತವನ್ನು ಹೆಸರಿಸುವಾಗ ಹೆಚ್ಚು ಗೌರವಯುತ ವಿಧಾನ ಬಳಸಲು ಅಮೆರಿಕಕ್ಕೆ ನಿರ್ದೇಶಿಸಿದ ಫಿನ್ಲ್ಯಾಂಡ್ ಅಧ್ಯಕ್ಷ
2 ಮತದಾರರ ಗುರುತಿನ ಚೀಟಿಹೊಂದಿದಕ್ಕಾಗಿ ಕಾಂಗ್ರೆಸ್ ವಕ್ತಾರ ಪವನ್ ಖೇರಾಗೆ ಚುನಾವಣಾ ಕಚೇರಿಯ ನೋಟಿಸ್
2 ಮತದಾರರ ಗುರುತಿನ ಚೀಟಿಹೊಂದಿದಕ್ಕಾಗಿ ಕಾಂಗ್ರೆಸ್ ವಕ್ತಾರ ಪವನ್ ಖೇರಾಗೆ ಚುನಾವಣಾ ಕಚೇರಿಯ ನೋಟಿಸ್
ರಾಜಕೀಯಕ್ಕೂ ಯಾವುದೇ ಸಂಬಂಧವಿಲ್ಲದ ನನ್ನ ತಾಯಿ ವಿರುದ್ಧ ಅನುಚಿತ ಭಾಷೆಯನ್ನು ಏಕೆ ಬಳಸಿದ್ದಾರೆ? - ಪ್ರಧಾನಿ ಮೋದಿ
ರಾಜಕೀಯಕ್ಕೂ ಯಾವುದೇ ಸಂಬಂಧವಿಲ್ಲದ ನನ್ನ ತಾಯಿ ವಿರುದ್ಧ ಅನುಚಿತ ಭಾಷೆಯನ್ನು ಏಕೆ ಬಳಸಿದ್ದಾರೆ? - ಪ್ರಧಾನಿ ಮೋದಿ
ಸೆಮಿಕಾನ್ ಇಂಡಿಯಾ 2025 : ವಿಕ್ರಮ್ 32-ಬಿಟ್ ಪ್ರೊಸೆಸರ್  ಸೆಮಿಕಂಡಕ್ಟರ್ ಚಿಪ್ ಬಿಡುಗಡೆ ಮಾಡಿದ ಪ್ರಧಾನಿ ಮೋದಿ
ಸೆಮಿಕಾನ್ ಇಂಡಿಯಾ 2025 : ವಿಕ್ರಮ್ 32-ಬಿಟ್ ಪ್ರೊಸೆಸರ್ ಸೆಮಿಕಂಡಕ್ಟರ್ ಚಿಪ್ ಬಿಡುಗಡೆ ಮಾಡಿದ ಪ್ರಧಾನಿ ಮೋದಿ

ನ್ಯೂಸ್ MORE NEWS...