ಕಲಘಟಗಿ ಮಾಜಿ ಶಾಸಕ ಸಿಎಂ ನಿಂಬಣ್ಣವರ್ ನಿಧನ | JANATA NEWS

ಕಲಘಟಗಿ : ಕಲಘಟಗಿ ಕ್ಷೇತ್ರದ ಮಾಜಿ ಬಿಜೆಪಿ ಶಾಸಕರಾಗಿದ್ದ ಸಿ.ಎಂ. ನಿಂಬಣ್ಣವರ ಇಂದು ಮುಂಜಾನೆ ಹೃದಯಾಘಾತದಿಂದ ನಿಧನರಾಗಿದ್ದಾರೆ.
ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು, ತೀವ್ರ ಅನಾರೋಗ್ಯದಿಂದ ಬೆಂಗಳೂರಿನ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.
ಸಿ.ಎಂ. ನಿಂಬಣ್ಣವರ್ 76ನೇ ವಯಸ್ಸಿನವರಾಗಿದ್ದಾರೆ. ತೀವ್ರ ಕಾಲು ನೋವಿನಿಂದ ಬಳಲುತ್ತಿದ್ದ ಅವರು ಬೆಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ನಿಧನ ಹೊಂದಿದ್ದಾರೆ. ಬನ್ನೇರುಘಟ್ಟದ ಅಪೊಲೋ ಆಸ್ಪತ್ರೆಯಲ್ಲಿ ಇಂದು ಕೊನೆಯುಸಿರೆಳದಿದ್ದಾರೆ.
2018ರ ವಿಧಾನಸಭಾ ಚುನಾವಣೆಯಲ್ಲಿ ಅವರು ಬಿಜೆಪಿ ಅಭ್ಯರ್ಥಿಯಾಗಿ ಗೆಲುವು ಸಾಧಿಸಿದ್ದರು. ಮೂಲಗಳ ಪ್ರಕಾರ ನಾಳೆ ಮಧ್ಯಾಹ್ನ 3 ಗಂಟೆಗೆ ಅಂತ್ಯ ಸಂಸ್ಕಾರ ನಡೆಯಲಿದೆ.