Tue,Aug04,2026
ಕನ್ನಡ / English

ಡಿಸಿ, ಕಮಿಷನರ್, ಸಿಇಒಗಳಿಗೆ ರೇಟ್ ಫಿಕ್ಸ್: ಸರ್ಕಾರದ ವಿರುದ್ಧ ಕಟೀಲ್ ಗಂಭೀರ ಆರೋಪ | JANATA NEWS

11 Jul 2023

ಬೆಳಗಾವಿ : ಜಿಲ್ಲಾಧಿಕಾರಿಗಳು, ಆಯುಕ್ತರು, ಸಿಇಒ, ಎಂಜಿನರ್ ಗಳಿಗೆ ರೇಟ್ ಫಿಕ್ಸ್ ಮಾಡಲಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಗಂಭೀರ ಆರೋಪ ಮಾಡಿದರು.

ಬೆಳಗಾವಿ ಪೊಲೀಸ್ ಕಮಿಷನರ್ ನೇಮಕವಾಗದ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಡಿಸಿಗಳಿಗೆ, ಸಿಇಓಗಳಿಗೆ, ಕಮಿಷನರ್ ಗಳಿಗೆ ರೇಟ್ ಫಿಕ್ಸ್ ಆಗಿದೆ. ರೇಟ್ ಕುದುರುವವರೆಗೂ ಯಾರು ನೇಮಕ ಆಗಲ್ಲ ಎಂದು ಗಂಭೀರ ಆರೋಪ ಮಾಡಿದ್ದಾರೆ.

ರಾಜ್ಯದ ಶಾಂತಿ ಸುವ್ಯವಸ್ಥೆ ಕಾಪಾಡುವ ಬದಲು ವರ್ಗಾವಣೆಯಲ್ಲಿ ತೊಡಗಿದೆ. ಐದು ವರ್ಷ ಪೂರ್ಣಗೊಳಿಸುವ ವಿಶ್ವಾಸವಿಲ್ಲ. ಒಂದು ವರ್ಷದಲ್ಲಿ ಎಲ್ಲವನ್ನೂ ದೋಚಲು ಮುಂದಾಗಿದೆ. ಕಾಂಗ್ರೆಸ್ ನ ತಲೆಯಲ್ಲಿ ಮದ, ಮತ್ಸರ, ಅಹಂಕಾರ ಇದೆ. ಜನ ಮತ್ತೆ ಕಾಂಗ್ರೆಸ್ ಗೆ ಬುದ್ದಿ ಕಲಿಸಲಿದ್ದಾರೆ. ಸರ್ಕಾರದ ಅಭಿವೃದ್ಧಿ ಕಾರ್ಯಗಳಿಗೆ ನಮ್ಮ ಸಂಪೂರ್ಣ ಬೆಂಬಲ ಇದೆ. ರಾಜ್ಯದ ಜನರಿಗೆ ತೊಂದರೆಯಾದರೆ ನಮ್ಮ ಹೋರಾಟ ನಿರಂತರವಾಗಿ ಇರಲಿದೆ ಎಂದು ಹೇಳಿದರು.

ಜನರ ಅಭಿವೃದ್ಧಿ ಬಗ್ಗೆ ಚಿಂತನೆ ಇಲ್ಲ, ಲೋಕಸಭೆ ಚುನಾವಣೆ ಈ ರೀತಿ ಮಾಡ್ತಿದ್ದು, 5 ವರ್ಷ ಸರ್ಕಾರ ನಡೆಸುತ್ತೇವೆ ಅಂತಾ ವಿಶ್ವಾಸವಿಲ್ಲ, ಈಗಲೇ ತುಂಬಿಕೊಳ್ಳುವ ವ್ಯವಸ್ಥೆ ಮಾಡುತ್ತಿದ್ದಾರೆ.

ಪಾಕಿಸ್ತಾನ ಜಿಂದಾಬಾದ್ ಎಂದು ಘೋಷಣೆ ಕೂಗಿದಾಗ, ಪಾಕಿಸ್ತಾನ ಧ್ವಜ ಹಿಡಿದು ಕುಣಿದಾಡಿದಾಗ ಕೇಸು ಏಕೆ ದಾಖಲಿಸಲಿಲ್ಲ. ಅವರಿಗೆ ಕಾಂಗ್ರೆಸ್ ಬೆಂಗಾವಲಾಗಿದೆಯೇ? ರಾಷ್ಟ್ರ ಪ್ರೇಮಿಗಳ ಪರವಾವಿ ದೂರು ದಾಖಲಿಸುತ್ತಿದ್ದಾರೆ.‌

ಈ ಹಿಂದೆ ಸಿದ್ದರಾಮಯ್ಯ ಮುಖ್ಯಮಂತ್ರಿಯಾದಾಗ ಗೂಂಡಾಗಿರಿ, ದರೋಡೆ, ಹಿಂದೂಗಳ ಹತ್ಯೆ, ಮಂಗಳೂರಿನ ಜೈಲಿನಲ್ಲಿ ಡಬಲ್ ಮರ್ಡರ್, ಮೈಸೂರಿನಲ್ಲಿ ಜೈಲಿನಲ್ಲಿ ಕೊಲೆ, ಹೀಗೆ ವಿವಿಧ ಪ್ರಕರಣಗಳು ನಡೆದಿವೆ. ಹೀಗೆ ನಿರಂತರ ಕೊಲೆ, ಸುಲಿಗೆ ನಡೆಯುತ್ತವೆ.‌ ಹಿಂದೆ ಅವರ ಸರ್ಕಾರ ಇದ್ದಾಗ 24ಹಿಂದೂ ಕಾರ್ಯಕರ್ತರ ಹತ್ಯೆ ಆಗಿತ್ತು. ಯಾವಾಗ ಯಾವಾಗ ಕಾಂಗ್ರೆಸ್ ಸರ್ಕಾರ ಬರುತ್ತೊ ಆಗಾಗ್ಗೆ ಇಂತಹ ಪ್ರಕರಣ ರಾರಾಜಿಸುತ್ತವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್​ ಕುಮಾರ್​ ಕಟೀಲ್​ ಕಿಡಿಕಾರಿದ್ದಾರೆ.

ಜೈನಮುನಿ ಹತ್ಯೆ ಪ್ರಕರಣ ಪಾರದರ್ಶಕವಾಗಿ ನಡೆಯಬೇಕು. ತಪ್ಪಿತಸ್ಥಿಗೆ ಕಠಿಣ ಶಿಕ್ಷೆ ಆಗಬೇಕು. ಬಿಜೆಪಿಯ ಸತ್ಯಶೋಧನ ಸಮಿತಿಯಿಂದ‌ ಜನರಿಂದ‌ ಮಾಹಿತಿ ಪಡೆದುಕೊಂಡು ಅಧ್ಯಯನ ನಡೆಸಲಾಗುವುದು ಎಂದರು.

RELATED TOPICS:
English summary :Rate Fix for DC, Commissioner, CEOs: Kateel Serious Allegation Against Govt

ರಾಮಮಂದಿರ ಕುರಿತ ಕಿರುನಾಟಕದ ಹಿನ್ನೆಲೆಯಲ್ಲಿ ರಾಹುಲ್ ಗಾಂಧಿ ಮತ್ತು ಪಪ್ಪು ಯಾದವ್ ವಿರುದ್ಧ ಎಫ್‌ಐಆರ್ ದಾಖಲು
ರಾಮಮಂದಿರ ಕುರಿತ ಕಿರುನಾಟಕದ ಹಿನ್ನೆಲೆಯಲ್ಲಿ ರಾಹುಲ್ ಗಾಂಧಿ ಮತ್ತು ಪಪ್ಪು ಯಾದವ್ ವಿರುದ್ಧ ಎಫ್‌ಐಆರ್ ದಾಖಲು
ಕರ್ನಾಟಕ ರಾಜ್ಯ ಸಂಪುಟಕ್ಕೆ 20 ನೂತನ ಸಚಿವರ ಸೇರ್ಪಡೆ
ಕರ್ನಾಟಕ ರಾಜ್ಯ ಸಂಪುಟಕ್ಕೆ 20 ನೂತನ ಸಚಿವರ ಸೇರ್ಪಡೆ
 ದೆಹಲಿ ಪೊಲೀಸ್ ಕ್ರಮವನ್ನು ಸಮರ್ಥಿಸಿಕೊಂಡ ದೆಹಲಿ ಪೊಲೀಸ್ ಮಹಾಸಂಘ; ರಾಜಕೀಯ ನಿರ್ದೇಶನದ ಆರೋಪ ಸುಳ್ಳು
ದೆಹಲಿ ಪೊಲೀಸ್ ಕ್ರಮವನ್ನು ಸಮರ್ಥಿಸಿಕೊಂಡ ದೆಹಲಿ ಪೊಲೀಸ್ ಮಹಾಸಂಘ; ರಾಜಕೀಯ ನಿರ್ದೇಶನದ ಆರೋಪ ಸುಳ್ಳು
ಪ್ರತಿಭಟನೆಯ ವೇಳೆ ನಡೆದ ಸಂಘರ್ಷದಲ್ಲಿ ಗಾಯಗೊಂಡ ದೆಹಲಿ ಪೊಲೀಸ್ ಸಿಬ್ಬಂದಿಯ ಕುಟುಂಬಗಳಿಂದ ನ್ಯಾಯಕ್ಕಾಗಿ ಆಗ್ರಹ
ಪ್ರತಿಭಟನೆಯ ವೇಳೆ ನಡೆದ ಸಂಘರ್ಷದಲ್ಲಿ ಗಾಯಗೊಂಡ ದೆಹಲಿ ಪೊಲೀಸ್ ಸಿಬ್ಬಂದಿಯ ಕುಟುಂಬಗಳಿಂದ ನ್ಯಾಯಕ್ಕಾಗಿ ಆಗ್ರಹ
ಸಿಜೆಪಿ ಕಾನೂನು ಬೆಂಬಲಕ್ಕೆ ನಿಂತ ಕಪಿಲ್ ಸಿಬಲ್ ಶಿಕ್ಷಣ ಮಂತ್ರಿಯಾಗಿದ್ದಾಗ ಹೆಚ್ಚು ಪೇಪರ್ ಲೀಕ್ - ಬಿಜೆಪಿಯ ಸುಧಾಂಶು ತ್ರಿವೇದಿ
ಸಿಜೆಪಿ ಕಾನೂನು ಬೆಂಬಲಕ್ಕೆ ನಿಂತ ಕಪಿಲ್ ಸಿಬಲ್ ಶಿಕ್ಷಣ ಮಂತ್ರಿಯಾಗಿದ್ದಾಗ ಹೆಚ್ಚು ಪೇಪರ್ ಲೀಕ್ - ಬಿಜೆಪಿಯ ಸುಧಾಂಶು ತ್ರಿವೇದಿ
ಸಂಸತ್ತಿನಲ್ಲಿ ಆಧಾರರಹಿತ ಹೇಳಿಕೆ : ರಾಹುಲ್ ಗಾಂಧಿ ಕ್ಷಮೆಯಾಚಿಸಬೇಕೆಂದು ಎನ್‌ಡಿಎ ಸಂಸದರ ಆಗ್ರಹ
ಸಂಸತ್ತಿನಲ್ಲಿ ಆಧಾರರಹಿತ ಹೇಳಿಕೆ : ರಾಹುಲ್ ಗಾಂಧಿ ಕ್ಷಮೆಯಾಚಿಸಬೇಕೆಂದು ಎನ್‌ಡಿಎ ಸಂಸದರ ಆಗ್ರಹ
ಪಿಒಜೆಕೆಯಲ್ಲಿ ನಾಗರಿಕರ ಮೇಲೆ ಗುಂಡಿನ ಸುರಿಮಳೆ ಖಂಡಿಸಿ, ಪಾಕಿಸ್ತಾನ ಬೆಂಬಲಿತ ಚುನಾವಣೆಗಳನ್ನು ತೋರಿಕೆಯ ವ್ಯಾಯಾಮ ಎಂದ ಭಾರತ
ಪಿಒಜೆಕೆಯಲ್ಲಿ ನಾಗರಿಕರ ಮೇಲೆ ಗುಂಡಿನ ಸುರಿಮಳೆ ಖಂಡಿಸಿ, ಪಾಕಿಸ್ತಾನ ಬೆಂಬಲಿತ ಚುನಾವಣೆಗಳನ್ನು ತೋರಿಕೆಯ ವ್ಯಾಯಾಮ ಎಂದ ಭಾರತ
6 ಪ್ರಶ್ನೆ ಪತ್ರಿಕೆಗಳ ಸೋರಿಕೆ : ಪಂಜಾಬ್ ಸಚಿವರ ರಾಜೀನಾಮೆಗೆ ಎನ್‌ಡಿಎ ಸಂಸದರ ಆಗ್ರಹ; ಸಂಸತ್ತಿನಲ್ಲಿ ರಾಜಕೀಯ ಜಟಾಪಟಿ
6 ಪ್ರಶ್ನೆ ಪತ್ರಿಕೆಗಳ ಸೋರಿಕೆ : ಪಂಜಾಬ್ ಸಚಿವರ ರಾಜೀನಾಮೆಗೆ ಎನ್‌ಡಿಎ ಸಂಸದರ ಆಗ್ರಹ; ಸಂಸತ್ತಿನಲ್ಲಿ ರಾಜಕೀಯ ಜಟಾಪಟಿ
ಪರೀಕ್ಷಾ ಸುಧಾರಣೆಗಳ ಕುರಿತು ಉನ್ನತ ಅಧಿಕಾರದ ಕಾರ್ಯಪಡೆ ಘೋಷಿಸಿದ ಪ್ರಧಾನಿ ಮೋದಿ : ನೇತೃತ್ವ ವಹಿಸಲು ನಂದನ್ ನಿಲೇಕಣಿ ಆಯ್ಕೆ
ಪರೀಕ್ಷಾ ಸುಧಾರಣೆಗಳ ಕುರಿತು ಉನ್ನತ ಅಧಿಕಾರದ ಕಾರ್ಯಪಡೆ ಘೋಷಿಸಿದ ಪ್ರಧಾನಿ ಮೋದಿ : ನೇತೃತ್ವ ವಹಿಸಲು ನಂದನ್ ನಿಲೇಕಣಿ ಆಯ್ಕೆ
ಅಣೆಕಟ್ಟುಗಳ ಹೂಳೆತ್ತುವಿಕೆ, ಮೇಕೆದಾಟು ಮತ್ತು ಮಹದಾಯಿ ಯೋಜನೆಗಳಿಗೆ ಕೇಂದ್ರದ ಬೆಂಬಲದ ಭರವಸೆ
ಅಣೆಕಟ್ಟುಗಳ ಹೂಳೆತ್ತುವಿಕೆ, ಮೇಕೆದಾಟು ಮತ್ತು ಮಹದಾಯಿ ಯೋಜನೆಗಳಿಗೆ ಕೇಂದ್ರದ ಬೆಂಬಲದ ಭರವಸೆ
ಲೋಕಸಭೆಯಲ್ಲಿ ವಿರೋಧ ಪಕ್ಷಗಳ ಗದ್ದಲ: ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆ ತಡೆ ಮಸೂದೆ ಮೇಲಿನ ಚರ್ಚೆ ಮುಂದೂಡಿಕೆ
ಲೋಕಸಭೆಯಲ್ಲಿ ವಿರೋಧ ಪಕ್ಷಗಳ ಗದ್ದಲ: ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆ ತಡೆ ಮಸೂದೆ ಮೇಲಿನ ಚರ್ಚೆ ಮುಂದೂಡಿಕೆ
 ಹಿಂದೂ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಆರೋಪ: ಕುನಾಲ್ ಕಮ್ರಾ, ವಾಂಗ್‌ಚುಕ್ ಮತ್ತು ಡಿಪ್ಕೆ ವಿರುದ್ಧ ದೂರು ದಾಖಲು
ಹಿಂದೂ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಆರೋಪ: ಕುನಾಲ್ ಕಮ್ರಾ, ವಾಂಗ್‌ಚುಕ್ ಮತ್ತು ಡಿಪ್ಕೆ ವಿರುದ್ಧ ದೂರು ದಾಖಲು

ನ್ಯೂಸ್ MORE NEWS...