Thu,Sep11,2025
ಕನ್ನಡ / English

ಮಾಜಿ ಸಿಎಂ ಯಡಿಯೂರಪ್ಪ ಅವರಿಗೆ ಗೌರವ ಡಾಕ್ಟರೇಟ್ | JANATA NEWS

20 Jul 2023

ಶಿವಮೊಗ್ಗ : ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವ್ರಿಗೆ ಉನ್ನತ ಗೌರವ ಡಾಕ್ಟರೇಟ್ ದೊರೆತಿದ್ದು, ಶಿವಮೊಗ್ಗದ ಕೆಳದಿ ಶಿವಪ್ಪನಾಯಕ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯವು ಗೌರವ ಡಾಕ್ಟರೇಟ್ ಘೋಷಣೆ ಮಾಡಿದೆ.

ಶುಕ್ರವಾರ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯದ 9ನೇ ವರ್ಷದ ಘಟಿಕೋತ್ಸವ ಸಮಾರಂಭ ನಡೆಯಲಿದೆ. ಈ ಸಮಾರಂಭದಲ್ಲಿ ರೈತ ನಾಯಕ, ಮೊದಲ ಬಾರಿಗೆ ಕೃಷಿಗೆ ಪ್ರತ್ಯೇಕ ಬಜೆಟ್ ಮಂಡಿಸಿದ್ದ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರಿಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಗೌರವ ಡಾಕ್ಟರೇಟ್ ಪದವಿ ಪ್ರದಾನ ಮಾಡಲಿದ್ದಾರೆ.

ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕ‌ ವಿವಿಯಿಂದ ಈಗ ಎರಡನೇ ಭಾರಿ ಡಾಕ್ಟರೇಟ್ ಪ್ರದಾನ ಮಾಡಲಾಗುತ್ತಿದೆ. ಕಳೆದ ಎರಡು ವರ್ಷಗಳ ಹಿಂದೆ ಕೋವಿಡ್ ವಾಕ್ಸಿನ್ ಕಂಡು ಹಿಡಿದ ಹೈದರಬಾದ್ ನ ಕೃಷ್ಣ ಯಲ್ಲಾ ಅವರಿಗೆ ಗೌರವ ಡಾಕ್ಟರೇಟ್ ನೀಡಿ ಗೌರವಿಸಲಾಗಿತ್ತು. ಈ ಬಾರಿ ಯಡಿಯೂರಪ್ಪ ಅವರು ರೈತರ ಪರವಾಗಿ ನಡೆಸಿದ ಹೋರಾಟ ಹಾಗೂ ಕೃಷಿ ಬಜೆಟ್ ಮಂಡನೆಗಾಗಿ ಗೌರವ ಡಾಕ್ಟರೇಟ್ ನೀಡಿ ಗೌರವಿಸಲಾಗುತ್ತಿದೆ.

ಈ ಕುರಿತು ಮಾಜಿ ಡಿಸಿಎಂ ಡಾ.ಸಿ.ಎನ್.ಅಶ್ವತ್ಥ ನಾರಾಯಣ ಟ್ವೀಟ್ ಮೂಲಕ ಯಡಿಯೂರಪ್ಪ ಅವ್ರಿಗೆ ಅಭಿನಂದಿಸಿದ್ದು, "ಕೆಳದಿ ಶಿವಪ್ಪನಾಯಕ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯದಿಂದ ನೀಡಲಾಗುವ ಗೌರವ ಡಾಕ್ಟರೇಟ್‌ಗೆ ಪಾತ್ರರಾಗಿರುವ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಹೃತ್ಪೂರ್ವಕ ಅಭಿನಂದನೆಗಳು. ದೇಶದಲ್ಲೇ ಮೊದಲ ಬಾರಿಗೆ ಕೃಷಿ ಬಜೆಟ್‌ ಮಂಡಿಸುವ ಜತೆ ಸದಾ ರೈತಪರ ಕಾಳಜಿ ವಹಿಸುವ ತಮ್ಮ ರಾಜಕೀಯ ಜೀವನ ಪ್ರೇರಣಾದಾಯಕವಾಗಿದೆ" ಎಂದು ಹೇಳಿದ್ದಾರೆ.

RELATED TOPICS:
English summary :Honorary doctorate to former CM Yeddyurappa

ಕಾಂಗ್ರೆಸ್ ಶಾಸಕ ಕೆ.ಸಿ.ವೀರೇಂದ್ರ ಅಕ್ರಮ ಆನ್‌ಲೈನ್ ಬೆಟ್ಟಿಂಗ್‌ನಲ್ಲಿ ವಂಚಿಸಿದ ಪ್ರಕರಣ : ಇಡಿ ದಾಳಿಯಲ್ಲಿ ರೂ.100 ಕೋಟಿ ಚಿನ್ನ ಬೆಳ್ಳಿ ವಶ

ಉಪರಾಷ್ಟ್ರಪತಿ ಚುನಾವಣೆಯಲ್ಲಿ ಎನ್‌ಡಿಎ ಅಭ್ಯರ್ಥಿ ಸಿ.ಪಿ. ರಾಧಾಕೃಷ್ಣನ್ ಗೆಲವು

ನೇಪಾಳದಲ್ಲಿ ಕಮ್ಯುನಿಸ್ಟ್ ಪಕ್ಷದ ಸರ್ಕಾರದ ಪತನದ ಬಳಿಕವೂ ಸಂಸತ್ತು, ಸುಪ್ರೀಂ ಕೋರ್ಟ್ ಮೇಲೆ ದಾಳಿ ನಡೆಸಿದ ಪ್ರತಿಭಟನಾಕಾರರು :

ನಿಮ್ಮ ನಡವಳಿಕೆಯು ಕಾಂಗ್ರೆಸ್ ಪಕ್ಷದ ಸಾಂಪ್ರದಾಯಿಕ ದುರಹಂಕಾರ ಮತ್ತು ಅಹಂಕಾರಕ್ಕೆ ಸಾಕ್ಷಿಯಾಗಿದೆ - ಖರ್ಗೆ ರನ್ನು ತರಾಟೆಗೆ ತೆಗೆದುಕೊಂಡ ಎಚ್‌ಡಿಕೆ

ಶ್ರೀ ನಾರಾಯಣ ಗುರುಗಳ ಜನ್ಮ ದಿನಾಚರಣೆಯಂದು  ಅವರ ದೃಷ್ಟಿಕೋನ, ಪ್ರಭಾವ ಸ್ಮರಿಸಿದ ಪ್ರಧಾನಿ ಮೋದಿ

ಭಾರತ-ಅಮೆರಿಕ ನಡುವೆ ಜಾಗತಿಕ ಕಾರ್ಯತಂತ್ರದ ಸಹಭಾಗಿತ್ವ ಬಹಳ ಸಕಾರಾತ್ಮಕವಾಗಿದೆ - ಪ್ರಧಾನಿ ಮೋದಿ

ಭಾರತೀಯ ಪೌರತ್ವ ಪಡೆಯುವ ಮೂರು ವರ್ಷಗಳ ಮೊದಲೇ ಮತ ಚಲಾವಣೆ : ಸೋನಿಯಾ ಗಾಂಧಿ ವಿರುದ್ಧ ಕ್ರಿಮಿನಲ್ ದೂರು

11
11
ಭಾರತವನ್ನು ಹೆಸರಿಸುವಾಗ ಹೆಚ್ಚು ಗೌರವಯುತ ವಿಧಾನ ಬಳಸಲು ಅಮೆರಿಕಕ್ಕೆ ನಿರ್ದೇಶಿಸಿದ ಫಿನ್ಲ್ಯಾಂಡ್ ಅಧ್ಯಕ್ಷ

2 ಮತದಾರರ ಗುರುತಿನ ಚೀಟಿಹೊಂದಿದಕ್ಕಾಗಿ ಕಾಂಗ್ರೆಸ್ ವಕ್ತಾರ ಪವನ್ ಖೇರಾಗೆ ಚುನಾವಣಾ ಕಚೇರಿಯ ನೋಟಿಸ್

ರಾಜಕೀಯಕ್ಕೂ ಯಾವುದೇ ಸಂಬಂಧವಿಲ್ಲದ ನನ್ನ ತಾಯಿ ವಿರುದ್ಧ ಅನುಚಿತ ಭಾಷೆಯನ್ನು ಏಕೆ ಬಳಸಿದ್ದಾರೆ? - ಪ್ರಧಾನಿ ಮೋದಿ

ಸೆಮಿಕಾನ್ ಇಂಡಿಯಾ 2025 : ವಿಕ್ರಮ್ 32-ಬಿಟ್ ಪ್ರೊಸೆಸರ್  ಸೆಮಿಕಂಡಕ್ಟರ್ ಚಿಪ್ ಬಿಡುಗಡೆ ಮಾಡಿದ ಪ್ರಧಾನಿ ಮೋದಿ

ನ್ಯೂಸ್ MORE NEWS...